ADVERTISEMENT

Karnataka Budget 2021: ಯಡಿಯೂರಪ್ಪ ಬಜೆಟ್‌ನಲ್ಲಿ ಕೃಷಿ, ಕೃಷಿಕರಿಗೆ ಏನೆಲ್ಲಾ..

​ಪ್ರಜಾವಾಣಿ ವಾರ್ತೆ
Published 8 ಮಾರ್ಚ್ 2021, 10:54 IST
Last Updated 8 ಮಾರ್ಚ್ 2021, 10:54 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಸಾವಯವ ಕೃಷಿಯ ಉತ್ತೇಜನಕ್ಕೆ ಕ್ರಮ, ರೇಷ್ಮೆ ಕೃಷಿಕರಿಗಾಗಿ ಯೋಜನೆ, ಕೃಷಿ ಮಾರುಕಟ್ಟೆಗಳ ಅಭಿವೃದ್ಧಿಗೆ ಯೋಜನೆಗಳು ಸೇರಿದಂತೆ ಕೃಷಿ ಕ್ಷೇತ್ರಕ್ಕೆ ಹಲವು ಯೋಜನೆಗಳನ್ನು, ಅನುದಾನಗಳನ್ನು 2021–22ನೇ ಸಾಲಿನ ಬಜೆಟ್‌ನಲ್ಲಿ ಘೋಷಿಸಲಾಗಿದೆ.

ಕೃಷಿ ಕ್ಷೇತ್ರಕ್ಕೆ ಬಜೆಟ್‌ನಲ್ಲಿ ಘೋಷಿಸಲಾದ ಯೋಜನೆ, ಅನುದಾನಗಳ ವಿವರ ಇಲ್ಲಿದೆ:

* ಸಾವಯವ ಕೃಷಿ ಉತ್ತೇಜನಕ್ಕೆ ₹500 ಕೋಟಿ ವೆಚ್ಚದಲ್ಲಿ ಯೋಜನೆ.

ADVERTISEMENT

* ವಿಜಯಪುರ ಜಿಲ್ಲೆ ಇಟ್ಟಂಗಿಹಾಳ ಗ್ರಾಮದಲ್ಲಿ ಆತ್ಮನಿರ್ಭರ ಭಾರತ ಅಭಿಯಾನ ಯೋಜನೆಯಡಿ ಆಹಾರ ಪಾರ್ಕ್ ಸ್ಥಾಪನೆ.

* ಕೃಷಿ ವಿಶ್ವವಿದ್ಯಾಲಯಗಳಲ್ಲಿ ರೈತರ ಮಕ್ಕಳಿಗೆ ಇರುವ ಮೀಸಲಾತಿ ಶೇ 50ಕ್ಕೆ ಹೆಚ್ಚಳ.

* ಕೃಷಿ ಯಾಂತ್ರೀಕರಣ ಯೋಜನೆ ಅಡಿ ಸಣ್ಣ ಟ್ರ್ಯಾಕ್ಟರ್ ಗಳಿಗೆ ನೀಡುತ್ತಿದ್ದ ಸಹಾಯಧನವನ್ನು 24-25 ಪಿಟಿಒ ಎಚ್‌ಪಿ ಟ್ರ್ಯಾಕ್ಟರ್‌ಗಳಿಗೂ ವಿಸ್ತರಣೆ.

* ರಾಷ್ಟ್ರೀಯ ಇ-ಮಾರುಕಟ್ಟೆ ಪ್ರೈವೇಟ್ ಲಿಮಿಟೆಡ್ ಮೂಲಕ ಸಾವಯವ ಮತ್ತು ಸಿರಿಧಾನ್ಯಗಳ ವೈಜ್ಞಾನಿಕ ಮಾರಾಟಕ್ಕೆ ಅವಕಾಶ.

* ಕೃಷಿ ಭೂಮಿಯಲ್ಲಿ ಸಾವಯವ ಇಂಗಾಲ ಹೆಚ್ಚಿಸುವ ಅಭಿಯಾನಕ್ಕೆ 2021-22ನೇ ಸಾಲಿನಲ್ಲಿ ₹10 ಕೋಟಿ ಅನುದಾನ.

* ಆತ್ಮನಿರ್ಭರ ಭಾರತ ಅಭಿಯಾನದಡಿಯಲ್ಲಿ ಆಹಾರ ಸಂಸ್ಕರಣೆ ಹಾಗೂ ಕೊಯ್ಲೋತ್ತರ ನಿರ್ವಹಣೆ ಘಟಕಗಳಿಗೆ ನೀಡುವ ಶೇ 35ರ ಸಹಾಯಧನ ಶೇ 50ಕ್ಕೆ ಹೆಚ್ಚಳ. ₹50 ಕೋಟಿ ಅನುದಾನ.

* ಕೊಪ್ಪಳ ಜಿಲ್ಲೆಯ ಸಿರಿವಾರ ಗ್ರಾಮದಲ್ಲಿ ತೋಟಗಾರಿಕೆ ತಂತ್ರಜ್ಞಾನ ಪಾರ್ಕ್ ಅಭಿವೃದ್ಧಿ.

* ಅಡಿಕೆ ಬೆಳಗ್ಗೆ ಬಾಧಿಸುವ ಹಳದಿ ಎಲೆ ರೋಗದ ಕುರಿತ ಸಂಶೋಧನೆ ಹಾಗೂ ಪರಿಹಾರ ಬೆಳೆ ಪ್ರೋತ್ಸಾಹಿಸಲು ₹25 ಕೋಟಿ ಅನುದಾನ.

* ದ್ರಾಕ್ಷಿ ಕೃಷಿಯ ಉತ್ತೇಜನಕ್ಕಾಗಿ ಕರ್ನಾಟಕ ದ್ರಾಕ್ಷಾರಸ ಮಂಡಳಿಯನ್ನು ಕರ್ನಾಟಕ ದ್ರಾಕ್ಷಿ ಹಾಗೂ ದ್ರಾಕ್ಷಾರಸ ಮಂಡಳಿಯನ್ನಾಗಿ ಪುನರ್‌ರಚಿಸಲು ಕ್ರಮ.

* ಬೆಂಗಳೂರಿನ ಓಕಳೀಪುರಂನಲ್ಲಿ ರೇಷ್ಮೆ ಇಲಾಖೆಯ ಎಲ್ಲ ಕಚೇರಿಗಳನ್ನು ಒಂದೇ ಸೂರಿನಡಿ ತರಲು ₹150 ಕೋಟಿ ವೆಚ್ಚದಲ್ಲಿ ರೇಷ್ಮೆ ಭವನ ನಿರ್ಮಾಣ.

* ರಾಮನಗರದಲ್ಲಿ ₹25 ಕೋಟಿ ವೆಚ್ಚದಲ್ಲಿ ಹೈಟೆಕ್ ರೇಷ್ಮೆಗೂಡು ಮಾರುಕಟ್ಟೆ ನಿರ್ಮಾಣ.

* ಗೋದಾಮುಗಳಲ್ಲಿ ಕೃಷಿ ಉತ್ಪನ್ನಗಳ ಸಂಗ್ರಹಣ ಶುಲ್ಕದ ಶೇಕಡ 25 ರಷ್ಟು ಸಹಾಯಧನ. ಇದಕ್ಕಾಗಿ ₹25 ಕೋಟಿ ಅನುದಾನ.

* ರಾಜ್ಯದ ಪ್ರಾಥಮಿಕ ಕೃಷಿ ಪತ್ತಿನ ಸಂಘಗಳು ಹಾಗೂ ಟಿಎಪಿಸಿಎಂಎಸ್‌ಗಳಲ್ಲಿ ಸಂಗ್ರಹಿಸಿದ ಕೃಷಿ ಉತ್ಪನ್ನಗಳ ಮೇಲೆ ಶೇ 11ರ ದರದಲ್ಲಿ ವಿತರಿಸಿದ ಅಡಮಾನ ಸಾಲ ಸೌಲಭ್ಯಕ್ಕೆ 6 ತಿಂಗಳ ಅವಧಿಗೆ ಸರ್ಕಾರದಿಂದ ಶೇ 4ರ ಬಡ್ಡಿ ಸಹಾಯಧನ. ಇದಕ್ಕಾಗಿ ₹5 ಕೋಟಿ ಅನುದಾನ.

* 5,500 ಕೃಷಿ ಪತ್ತಿನ ಸಹಕಾರ ಸಂಘಗಳ ಗಣಕೀಕರಣಕ್ಕೆ ₹198 ಕೋಟಿ ಅನುದಾನ.

* ಬೈಯಪ್ಪನಹಳ್ಳಿಯಲ್ಲಿ ₹50 ಕೋಟಿ ವೆಚ್ಚದ ಸುಸಜ್ಜಿತ ಹೂವಿನ ಮಾರುಕಟ್ಟೆ ನಿರ್ಮಾಣ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.