ADVERTISEMENT

Live Updates| Karnataka Budget 2021: ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಆದ್ಯತೆ: ಯಡಿಯೂರಪ್ಪ

ಕೋವಿಡ್‌ ಸಂಕಷ್ಟ ಮತ್ತು ಆರ್ಥಿಕ ಹಿಂಜರಿತದ ನಡುವೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ 2021–22ನೇ ಸಾಲಿನ ಬಜೆಟ್‌ ಮಂಡಿಸಿದ್ದಾರೆ. ಯಾವುದೇ ತೆರಿಗೆ ಹೊರೆ ಹಾಕಿಲ್ಲ. ಅಯೋಧ್ಯೆಯಲ್ಲಿ ಯಾತ್ರಿ ನಿವಾಸ, ಕೃಷಿ ಅಭಿವೃದ್ಧಿ, ನೀರಾವರಿಗೆ ಅನುದಾನ, ಮುದ್ರಾಂಕ ಶುಲ್ಕ ಕಡಿಮೆ ಮುಂತಾದ ಘೋಷಣೆ ಮಾಡಿದ್ದಾರೆ. ಮಹಿಳಾ ದಿನಾಚರಣೆಯಂದು ಮಹಿಳೆಯರಿಗೆ ವಿಶೇಷ ಕೊಡುಗೆ ನೀಡಿದ್ದಾರೆ. ಬಜೆಟ್‌ನ ಮುಖ್ಯಾಂಶಗಳು ಇಲ್ಲಿವೆ.

​ಪ್ರಜಾವಾಣಿ ವಾರ್ತೆ
Published 8 ಮಾರ್ಚ್ 2021, 13:12 IST
Last Updated 8 ಮಾರ್ಚ್ 2021, 13:12 IST

ಹೊಸ ತೆರಿಗೆ ಹೊರೆ ಇಲ್ಲ

2021-22ರ ಆಯವ್ಯಯದ ಕುರಿತು ಮುಖ್ಯಮಂತ್ರಿ ಪ್ರತಿಕಾಗೋಷ್ಠಿ

ನವೀನ ತಂತ್ರಜ್ಞಾನದ ಸಂಸ್ಥೆಗಳಿಗೆ ಬೆಂಬಲ

ವಿಜ್ಞಾನ ಮತ್ತು ತಂತ್ರಜ್ಞಾನ

ಸಾರಿಗೆ ಸಂಪರ್ಕ ಜಾಲ ವಿಸ್ತರಣೆಗೆ ಆದ್ಯತೆ

ರಾಜ್ಯದ ಆರ್ಥಿಕ ಅಭಿವೃದ್ಧಿಗೆ ಉತ್ತೇಜನ

ಬರಲಿದೆ ಇ-ಕನ್ನಡ ಕಲಿಕಾ ಅಕಾಡೆಮಿ, ಏನಿದು?

ತೆರಿಗೆ/ಆದಾಯ ಸಂಗ್ರಹಣೆ ಗುರಿ

ನೀರಾವರಿ ಯೋಜನೆಗಳ ಜಾರಿಗೆ ಆದ್ಯತೆ

ಕೃಷಿ ಪೂರಕ ಚಟುವಟಿಕೆಗಳಿಗೆ 31,028 ಕೋಟಿ ರೂ. ಅನುದಾನ

ಮೀನುಗಾರಿಕೆ ಮತ್ತು ಮೀನು ಮಾರಾಟ

ಆಸ್ತಿ ವಂಚನೆ ತಂಡೆಗೆ ಬ್ಲಾಕ್‌ಚೈನ್ ತಂತ್ರಜ್ಞಾನದ ಮೊರೆ

ಮಹಿಳೆಯರಿಗೆ ಬಂಪರ್; ಜನರಿಗೆ ಹೊರೆಯಿಲ್ಲದ ಮುಂಗಡಪತ್ರ

ವಲಯವಾರು ಅನುದಾನ ಹಂಚಿಕೆ ವಿವರ ಇಲ್ಲಿದೆ

ಬೆಂಗಳೂರು ಸಮಗ್ರ ಅಭಿವೃದ್ಧಿ; ಏನೆಲ್ಲ ಯೋಜನೆಗಳು?

ಬೆಂಗಳೂರು ನಗರದ ಸಮಗ್ರ ಅಭಿವೃದ್ಧಿಗಾಗಿ ಒಟ್ಟು 7795 ಕೋಟಿ ರೂ. ಅನುದಾನ. 
*ಮಲ್ಲೇಶ್ವರದಲ್ಲಿ ಮೈಸೂರು ಲ್ಯಾಂಪ್ಸ್ ವರ್ಕ್ಸ್ ನಿಯಮಿತಕ್ಕೆ ಸೇರಿದ ಪ್ರದೇಶದಲ್ಲಿ ಎಕ್ಸ್‌ಪೀರಿಯನ್ಸ್ ಬೆಂಗಳೂರು ಕೇಂದ್ರ ಅಭಿವೃದ್ಧಿ
*ಬೈಯಪ್ಪನಹಳ್ಳಿಯಲ್ಲಿರುವ ಎನ್.‌ಜಿ.ಇ.ಎಫ್.‌ನಲ್ಲಿ ಹಾಗೂ ಇನ್ನೂ ಮೂರು ಕಡೆಗಳಲ್ಲಿ ವೃಕ್ಷೋದ್ಯಾನಗಳ ಅಭಿವೃದ್ಧಿ. 
*ಬೆಂಗಳೂರು ನಗರದ ಪೆರಿಫೆರಲ್ ರಿಂಗ್ ರಸ್ತೆ ಕಾಮಗಾರಿ ಪ್ರಾರಂಭಿಸಲು ಕ್ರಮ. 
*14,788 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ 58.2 ಕೀ.ಮೀ. ಉದ್ದದ ಹೊರ ವರ್ತುಲ ರಸ್ತೆ-ಏರ್ ಪೋರ್ಟ್ ಮೆಟ್ರೋಲ್ ಜಾಲ ಹಂತ 2ಎ ಮತ್ತು 2ಬಿ ಅನುಷ್ಠಾನ. 
*ಉಪ ನಗರ ರೈಲು ಯೋಜನೆಗೆ 2021-22ನೇ ಸಾಲಿಗೆ 850 ಕೋಟಿ. 
*ಕೆಂಪೇಗೌಡ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದ ಎರಡನೇ ಟರ್ಮಿನಲ್ ಕಟ್ಟಡ ನಿರ್ಮಾ ಶೀಘ್ರ ಪೂರ್ಣ, ಗರಿಷ್ಠ ವಾರ್ಷಿಕ ಪ್ರಯಾಣಿಕರ ಸಾಮರ್ಥ್ಯ 60 ದಶಲಕ್ಷಕ್ಕೆ ಹೆಚ್ಚಳ. 
*ಕೋರಮಂಗಲ ಕಣಿವೆಯನ್ನು ಪ್ರವಾಸಿ ಆಕರ್ಷಣೆಯಾಗಿ ಅಭಿವೃದ್ಧಿಪಡಿಸುವ 169 ಕೋಟಿ ರೂ. ವೆಚ್ಚದಲ್ಲಿ ರಾಜಕಾಲುವೆ ಅಭಿವೃದ್ಧಿ ಮತ್ತು ನಿರ್ವಹಣೆ ಯೋಜನೆ ಅನುಷ್ಠಾನ. 
*ಕೆಂಪೇಗೌಡ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪ ಅಂತರ ರಾಷ್ಟ್ರೀಯ ಮಟ್ಟದ ಬೆಂಗಳೂರು ಸಿಗ್ನೇಚರ್ ಬಿಸಿನೆಸ್ ಪಾರ್ಕ್ ಅಭಿವೃದ್ಧಿ.
*ಬೆಂಗಳೂರು ನೀರು ಸರಬರಾಜು ಒಳಚರಂಡಿ ಮಂಡಳಿ ವತಿಯಿಂದ ಬಿಬಿಎಂಪಿ ಸಹಯೋಗದೊಂದಿಗೆ 450 ಕೋಟಿ ವೆಚ್ಚದಲ್ಲಿ ಕೆ.ಸಿ. ವ್ಯಾಲಿ ಆವರಣದ 248 ಎಂ.ಎಲ್.ಡಿ ಸಾಮರ್ಥ್ಯದ ಎಸ್‌.ಟಿ.ಪಿ ಪುನರುಜ್ಜೀವನ ಮತ್ತು ಉನ್ನತೀಕರಣಕ್ಕೆ ಕ್ರಮ. 
*ಆಗಸ್ಟ್ 2021ರೊಳಗೆ ಒಂದು ರಾಷ್ಟ್ರ ಒಂದು ಕಾರ್ಡ್ ವ್ಯವಸ್ಥೆ ಜಾರಿಗೆ. ನಮ್ಮ ಮೆಟ್ರೋ ಹಾಗೂ ಬಿಎಂಟಿಸಿ ಬಸ್ಸುಗಳಲ್ಲಿ ಈ ಕಾರ್ಡ್ ಬಳಕೆಗೆ ಅವಕಾಶ. 
*ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಆಟೋಮ್ಯಾಟಿಕ್ ಫೇರ್ ಕಲೆಕ್ಷನ್ ಸಿಸ್ಟಂ ಯೋಜನೆ ಅನುಷ್ಠಾನ. 
*ಬೆಂಗಳೂರು ನಗರದ ಘನತ್ಯಾಜ್ಯ ಸಂಗ್ರಹಣೆ, ಸಾಗಣಿಕೆ ಮತ್ತು ಸಂಸ್ಕರಣೆಯನ್ನು ನಿರ್ವಹಿಸಲು ಪ್ರತ್ಯೇಕ ಕಂಪನಿ ಸ್ಥಾಪನೆ. 
*ಉತ್ತರ ಬೆಂಗಳೂರಿನಲ್ಲಿ ಹೊಸ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಪ್ರಾರಂಭ. 
*28 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಗ್ಯಾಸ್ಟ್ರೋಎಂಟ್ರಾಲಜಿ ಸೈನ್ಸಸ್ ಹಾಗೂ ಆರ್ಗನ್ ಟ್ರಾನ್ಸ್‌ಪ್ಲಾಂಟ್ ಸಂಸ್ಥೆ ಪ್ರಸಕ್ತ ಸಾಲಿನಲ್ಲಿ ಕಾರ್ಯಾರಂಭ. 
*ಬೆಂಗಳೂರಿನ ಕೆ.ಸಿ. ಜನರಲ್ ಆಸ್ಪತ್ರೆಯಲ್ಲಿ 20 ಕೋಟಿ ರೂ. ವೆಚ್ಚದಲ್ಲಿ ಜಯದೇವ ಹೃದ್ರೋಗ ವಿಜ್ಞಾನ ಸಂಸ್ಥೆಯ 50 ಹಾಸಿಗೆ ಸಾಮರ್ಥ್ಯದ ಉಪಕೇಂದ್ರ
*ಬಿಬಿಎಂಪಿಯ 57 ವಾರ್ಡ್‌ಗಳಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಜನಾರೋಗ್ಯ ಕೇಂದ್ರಗಳ ಸ್ಥಾಪನೆ. 
*33 ಕೋಟಿ ರೂ. ವೆಚ್ಚದಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಶಾಲೆಗಳ ನವೀಕರಣ ಮತ್ತು ಪುನರ್ ನಿರ್ಮಾಣ. 
*ಬೆಂಗಳೂರು ಮಲ್ಲತ್ತಹಳ್ಳಿ ಕಲಾಗ್ರಾಮದಲ್ಲಿ ಪ್ರತಿ ವಾರಾಂತ್ಯದ ಸಾಹಿತ್ಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲು 2 ಕೋಟಿ ರೂ. ಮೀಸಲು. 

ಪ್ರತಿ ಜಿಲ್ಲೆಯಲ್ಲಿ ಗೋಶಾಲೆ ಸ್ಥಾಪನೆ

ಕೃಷಿ ಕ್ಷೇತ್ರಕ್ಕೆ ಏನೇನು ನೀಡಿದ್ದಾರೆ?

ಸರ್ವೋದಯ ಮತ್ತು ಕ್ಷೇಮಾಭಿವೃದ್ಧಿ ವಲಯಕ್ಕೆ ಅನುದಾನ ಎಷ್ಟು?

ಕೃಷಿ ಕ್ಷೇತ್ರಕ್ಕೆ ಏನೆಲ್ಲ?

ರೈತರು ಹಾಗೂ ಗೋಮಾತೆಗೆ ದ್ರೋಹ ಎಸಗಿದ ಸರ್ಕಾರ; ಕಾಂಗ್ರೆಸ್ ಟೀಕೆ

ಬೋಗಸ್ ಬಜೆಟ್; ಕಾಂಗ್ರೆಸ್ ಟೀಕೆ

ಕರ್ನಾಟಕ ಬಜೆಟ್‌ 2021–22 ಇನ್ಫೊಗ್ರಾಫಿಕ್

ನಮ್ಮ ಬೆಂಗಳೂರಿನ ಸಮಗ್ರ ಅಭಿವೃದ್ಧಿ: ಡಾ.ಸಿ.ಎನ್.ಅಶ್ವತ್ಥನಾರಾಯಣ

ಪ್ರಾದೇಶಿಕ ಕ್ಯಾನ್ಸರ್ ಚಿಕಿತ್ಸಾ ಕೇಂದ್ರಗಳ ಆರಂಭ

ಹೊಸ ಹಾಸ್ಟೆಲ್‌ಗಳ ಆರಂಭ

ಪಾದರಕ್ಷೆ ತರಬೇತಿ ಕೇಂದ್ರ ನಿರ್ಮಾಣ

ಅಭಿವೃದ್ಧಿ ನಿಗಮಗಳಿಗೆ ಬಲ

ಸರ್ಕಾರಿ ಶಾಲೆ-ಕಾಲೇಜುಗಳಿಗೆ ಏನೇನು ಸಿಕ್ತು?

ಸರ್ಕಾರಿ ಶಾಲೆ, ಕಾಲೇಜುಗಳ ಅಭಿವೃದ್ಧಿ ಮತ್ತು ಗುಣಮಟ್ಟದ ಶಿಕ್ಷಣ ನೀಡುವುದಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬಜೆಟ್‌ನಲ್ಲಿ ಹಲವು ಕಾರ್ಯಕ್ರಮಗಳನ್ನು, ಅನುದಾನವನ್ನು ಘೋಷಿಸಿದ್ದಾರೆ.

ಇಲ್ಲಿದೆ ಸಂಪೂರ್ಣ ಮಾಹಿತಿ

ರಾಜ್ಯ ಬಜೆಟ್: ಯಾರಿಗೆ ಏನು ಸಿಕ್ಕಿತು? ವಿಷಯ ಕುರಿತ ಪ್ರಜಾವಾಣಿ ಫೇಸ್‌ಬುಕ್ ಸಂವಾದ

ಫ್ಲ್ಯಾಟ್‌ ನೋಂದಣಿ ಮುದ್ರಾಂಕ ಶುಲ್ಕ ಇಳಿಕೆ

ಸಂಕಷ್ಟದಿಂದ ಕಂಗೆಡದೆ ವ್ಯವಸ್ಥಿತ ಕಾರ್ಯತಂತ್ರದಿಂದ ಪರಿಸ್ಥಿತಿ ನಿರ್ವಹಣೆ: ಯಡಿಯೂರಪ್ಪ

ಸರ್ವರಿಗೂ ಸಮಬಾಳು, ಸಮಪಾಲು ನೀಡುವ ಧ್ಯೇಯ ನಮ್ಮದು: ಯಡಿಯೂರಪ್ಪ

ಕರ್ನಾಟಕ ಬಜೆಟ್‌ 2021–22: ಆಯವ್ಯಯ

ನೀರಾವರಿ ಯೋಜನೆಗಳಿಗೆ 20,996 ಕೋಟಿ ರೂ.ಬಜೆಟ್‌ನಲ್ಲಿ ಅನುದಾನ

- ರಾಜ್ಯದ ನೀರಾವರಿ ಯೋಜನೆಗಳಿಗೆ ಆದ್ಯತೆ ಮೇರೆಗೆ ಜಾರಿಗೊಳಿಸಲು ಅನುಕೂಲವಾಗುವಂತೆ 20,996 ಕೋಟಿ ರೂ. ಅನುದಾನ. 

ADVERTISEMENT

- ಕೃಷ್ಣಾ, ಮೇಲ್ದಂಡೆ ಹಂತ 3, ಎತ್ತಿನ ಹೊಳೆ, ಮಹದಾಯಿ, ಮೇಕೆದಾಟು, ಭದ್ರಾ ಮೇಲ್ದಂಡೆ ಯೋಜನೆಗಳ ತ್ವರಿತ ಅನುಷ್ಠಾನಕ್ಕೆ ಆದ್ಯತೆ. 

- ಬೇಡ್ತಿ-ವರದಾ ನದಿ ಜೋಡಣೆಯಡಿ ಒಟ್ಟು 22 ಟಿಎಂಸಿ ನೀರನ್ನು ಬಳಸಿಕೊಳ್ಳಲು ವಿವರವಾದ ಯೋಜನಾ ವರದಿಯನ್ನು National Perspective Plan ಅಡಿಯಲ್ಲಿ ಸಿದ್ಧಪಡಿಸಲು NWDAಗೆ ಮನವಿ. ತಾಂತ್ರಿಕ ಸಾಧ್ಯಾ-ಸಾಧ್ಯತೆಗನುಗುಣವಾಗಿ ಯೋಜನೆಗಳನ್ನು ರೂಪಿಸಿಕೊಳ್ಳಲು ಕ್ರಮ. ಉತ್ತರ ಕರ್ನಾಟಕದ ಜಿಲ್ಲೆಗಳಿಗೆ ಅನುಕೂಲ. 

- ಕೊಪ್ಪಳ ಜಿಲ್ಲೆಯ ನವಲಿ ಬಳಿ ಸಮಾನಾಂತರ ಜಲಾಶ ನಿರ್ಮಾಣಕ್ಕೆ ಕ್ರಮ. ವಿಶ್ವ ಬ್ಯಾಂಕ್ ನೆರವಿನಿ ಡ್ರಿಪ್ ಯೋಜನೆಯಡಿ 1500 ಕೋಟಿ ರೂ. ಮೊತ್ತದಲ್ಲಿ ರಾಜ್ಯದ 58 ಅಣೆಕಟ್ಟುಗಳ ಪುನಶ್ಚೇತನ ಮತ್ತು ಅಭಿವೃದ್ಧಿಗೆ ಪ್ರಸ್ತಾವನೆ.

ಜ್ಞಾನಪೀಠ ಪ್ರಶಸ್ತಿ ಪಡೆದ ಸಾಹಿತಿಗಳು ವ್ಯಾಸಂಗ ಮಾಡಿದ ಶಾಲೆಗಳ ಅಭಿವೃದ್ಧಿ

- ಜ್ಞಾನಪೀಠ ಪ್ರಶಸ್ತಿ ಪಡೆದ ಸಾಹಿತಿಗಳು ವ್ಯಾಸಂಗ ಮಾಡಿದ ಶಾಲೆಗಳನ್ನು ಅಭಿವೃದ್ಧಿ. ಪಾಲಿಟೆಕ್ನಿಕ್, ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಡಿಜಿಟಲ್ ಕಲಿಕೆಗೆ ಒತ್ತು. ಸ್ಮಾರ್ಟ್‌ ಕ್ಲಾಸ್ ರೂಮ್ ನಿರ್ಮಾಣಕ್ಕೆ 50 ಕೋಟಿ ರೂ. ಅನುದಾನ.
- ಎಲ್ಲಾ ಸರ್ಕಾರಿ ಪ್ರೌಢ ಶಾಲೆಗಳಲ್ಲಿ ತಲಾ 8 ಲಕ್ಷ ರೂ. ವೆಚ್ಚದಲ್ಲಿ ಕಂಪ್ಯೂಟರ್ ಲ್ಯಾಬ್ ಸ್ಥಾಪನೆ.

- 150 ಕೋಟಿ ರೂ. ವೆಚ್ಚದಲ್ಲಿ ಪ್ರೌಢಶಾಲೆ ಮತ್ತು ಪಿಯುಸಿ ಕಾಲೇಜುಗಳಿಗೆ ಮೂಲ ಸೌಕರ್ಯ
 

ಹೈಟೆಕ್ ರೇಷ್ಮೆ ಗೂಡು ಮಾರುಕಟ್ಟೆ

- ಬೆಂಗಳೂರಿನ ಓಕಳೀಪುರಂನಲ್ಲಿ ರೇಷ್ಮೆ ಇಲಾಖೆಯ ಎಲ್ಲ ಕಚೇರಿಗಳನ್ನು ಒಂದೇ ಸೂರಿನಡಿ ತರಲು, 150 ಕೋಟಿ ರೂ. ವೆಚ್ಚದಲ್ಲಿ ರೇಷ್ಮೆ ಭವನ ನಿರ್ಮಾಣ. 

- ರಾಮನಗರದಲ್ಲಿ 75 ಕೋಟಿ ರೂ. ವೆಚ್ಚದಲ್ಲಿ ಹೈ-ಟೆಕ್ ರೇಷ್ಮೆ ಗೂಡು ಮಾರುಕಟ್ಟೆ ನಿರ್ಮಾಣ.

ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಗಣಕೀಕರಣ

- ರಾಜ್ಯದಲ್ಲಿ 198 ಕೋಟಿ ರೂ. ವೆಚ್ಚದಲ್ಲಿ 5500 ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗ ಗಣಕೀಕರಣ. 

- ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ಗಳಿಗೆ ಗರಿಷ್ಠ 10 ಲಕ್ಷ ರೂ. ವರೆಗೆ, ಶೇ. 25ರಷ್ಟು ಷೇರು ಬಂಡವಾಳ ಒದಗಿಸಲು ಕ್ರಮ

ಗೋ ಸಂಪತ್ತಿನ ರಕ್ಷಣೆಗೆ ಗೋಶಾಲೆ

- ಗೋ ಸಂಪತ್ತಿನ ರಕ್ಷಣೆಗಾಗಿ ಪ್ರತಿ ಜಿಲ್ಲೆಗೆ ಒಂದರಂತೆ ಗೋಶಾಲೆ ಸ್ಥಾಪನೆ 

- ಸಮಗ್ರ ಗೋಸಂಕುಲ ಸಮೃದ್ಧಿ ಯೋಜನೆಯಡಿ 1 ಕೋಟಿ ರೂ. ವೆಚ್ಚದಲ್ಲಿ ರೈತರಿಗೆ ಹೊರ ರಾಜ್ಯದ ದೇಶಿ ತಳಿಗಳನ್ನು ಪರಿಚಯಿಸಲು ಕ್ರಮ. 

- ಪಶುವೈದ್ಯಕೀಯ ವಿಜ್ಞಾನದಲ್ಲಿ ಆಯುರ್ವೇದ ಔಷಧಿಗಳ ಆಳವಡಿಕೆ ಉತ್ತೇಜನಕ್ಕೆ ಶಿವಮೊಗ್ಗದ ಪಶುವೈದ್ಯಕೀಯ ಕಾಲೇಜಿನಲ್ಲಿ 2 ಕೋಟಿ ರೂ. ವೆಚ್ಚದಲ್ಲಿ ಸಂಶೋಧನಾ ಕೇಂದ್ರ ಸ್ಥಾಪನೆ. 

- ಬೆಂಗಳೂರಿನ ಹೆಸರಘಟ್ಟದಲ್ಲಿ ದೇಶೀಯ ಪಶು ಸಂಪತ್ತಿನ ಶಾಶ್ತತ ಪ್ರದರ್ಶನ ಮತ್ತು ಪ್ರಾತ್ಯಕ್ಷಿಕೆ ನೀಡುವ ಥೀಮ್ ಪಾರ್ಕ್ ಸ್ಥಾಪನೆ. 

- ನಂದಿದುರ್ಗ ಮೇಕೆ ತಳಿಗಳನ್ನು ಅಭಿವೃದ್ಧಿಪಡಿಸಿ, ಉತ್ಕೃಷ್ಟ ದರ್ಜೆಯ ಹೋತ ವಿತರಿಸಲು 1 ಕೋಟಿ ರೂ. ಅನುದಾನ.

ತೆರಿಗೆ ಹೊರೆ ಇಲ್ಲ, ಆಯೋಧ್ಯೆಯಲ್ಲಿ ಯಾತ್ರಿ ನಿವಾಸ, ಮುದ್ರಾಂಕ ಶುಲ್ಕ ಕಡಿಮೆ,

ಎಲ್ಲ ಜಿಲ್ಲೆಗಳಲ್ಲಿ ಗೋಶಾಲೆ: ಸಿಎಂ ಯಡಿಯೂರಪ್ಪ ಘೋಷಣೆ

ಮಹಿಳಾ ದಿನಕ್ಕೆ ಮಹಿಳೆಯರಿಗೆ ಬಜೆಟ್‌ನಲ್ಲಿ ಹಲವು ಯೋಜನೆ

ತೋಟಗಾರಿಕಾ ಬೆಳೆಗಳ ರಫ್ತಿಗೆ ರಾಜ್ಯದ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣಗಳಲ್ಲಿ ಪೂರಕ ಸೌಲಭ್ಯ.

– ತೋಟಗಾರಿಕಾ ಬೆಳೆಗಳ ರಫ್ತಿಗೆ ರಾಜ್ಯದ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣಗಳಲ್ಲಿ ಪೂರಕ ಸೌಲಭ್ಯ.

– ವಿಶ್ವ ಬ್ಯಾಂಕ್ ನೆರವಿನ ಡ್ರಿಪ್ ಯೋಜನೆಯಡಿ 1500 ಕೋಟಿ ರೂ. ಮೊತ್ತದಲ್ಲಿ ರಾಜ್ಯದ 58 ಅಣೆಕಟ್ಟುಗಳ ಪುನಶ್ಚೇತನ ಮತ್ತು ಅಭಿವೃದ್ಧಿಗೆ ಪ್ರಸ್ತಾಪ. 

– ಶಿವಮೊಗ್ಗ ಜಿಲ್ಲೆಯಲ್ಲಿರುವ ಆಯುರ್ವೇದ ಕಾಲೇಜನ್ನು ಆಯುಷ್ ವಿಶ್ವವಿದ್ಯಾಲಯವನ್ನಾಗಿ ಮೇಲ್ದರ್ಜೆಗೇರಿಸಲಾಗುವುದು.

– 2020-21ನೇ ಸಾಲಿನಲ್ಲಿ ಅಬಕಾರಿ ಇಲಾಖೆಯಿಂದ 22,700 ಕೋಟಿ ಆದಾಯವನ್ನು ನಿರೀಕ್ಷೆ ಮಾಡಲಾಗಿತ್ತು. ಫೆಬ್ರವರಿ ಅಂತ್ಯದ ತನಕ 20,900 ಕೋಟಿ ರೂ. ಆದಾಯ ಬಂದಿದೆ.

– 2021-22ನೇ ಸಾಲಿನಲ್ಲಿ ಇಲಾಖೆಯಿಂದ 24,580 ಕೋಟಿ ರೂ. ಆದಾಯವನ್ನು ನಿರೀಕ್ಷೆ ಮಾಡಲಾಗಿದೆ.

– 2020-21ನೇ ಸಾಲಿನಲ್ಲಿ ಸಾರಿಗೆ ಇಲಾಖೆಯಿಂದ 7,115 ಕೋಟಿ ರೂ. ಆದಾಯ ನಿರೀಕ್ಷೆ; ಆದರೆ ಕೋವಿಡ್ ಲಾಕ್ ಡೌನ್ ಹಿನ್ನಲೆಯಲ್ಲಿ ಜನವರಿ ವರೆಗೆ 4,294 ಕೋಟಿ ರೂ. ಆದಾಯ ಮಾತ್ರ ಸಂಗ್ರಹವಾಗಿದೆ. 2021-22ನೇ ಸಾಲಿನಲ್ಲಿ 7,515 ಕೋಟಿ ರೂ. ಆದಾಯವನ್ನು ನಿರೀಕ್ಷೆ ಮಾಡಲಾಗಿದೆ.

– ಸಹಕಾರ ಕ್ಷೇತ್ರದ ಮೂಲಕ ರೈತರ ಪ್ರಗತಿ

– ಪ್ರಾಥಮಿಕ ಕೃಷಿ ಪತ್ತಿನ ಸಂಘಗಳು, ಟಿ.ಎ.ಪಿ.ಸಿ.ಎಂ. ಎಸ್ ಹಾಗೂ ಇತರೆ ಸಹಕಾರ ಸಂಸ್ಥೆಗಳು ಹೊಂದಿರುವ ಗೋದಾಮುಗಳಲ್ಲಿ ಕೃಷಿ ಉತ್ಪನ್ನಗಳ ಸಂಗ್ರಹಣಾ ಶುಲ್ಕದ ಶೇ. 25ರಷ್ಟು ಸಹಾಯಧನ ವಿತರಣೆ. ಇದಕ್ಕಾಗಿ 25 ಕೋಟಿ ರೂ. ಅನುದಾನ

– ಪ್ರಾಥಮಿಕ ಕೃಷಿ ಪತ್ತಿನ ಸಂಘಗಳು ಹಾಗೂ ಟಿ.ಎ.ಪಿ.ಸಿ.ಎಂ. ಎಸ್ ಸಂಗ್ರಹಿಸಿದ ಕೃಷಿ ಉತ್ಪನ್ನಗಳ ಮೇಲೆ ಶೇ. 11ರ ದರದಲ್ಲಿ ವಿತರಿಸಿದ ಅಡಮಾನ ಸಾಲ ಸೌಲಭ್ಯಕ್ಕೆ 6 ತಿಂಗಳ ಅವಧಿಗೆ ಸರ್ಕಾರದಿಂದ ಶೇ.4ರ ಬಡ್ಡಿ ಸಹಾಯಧನ. 5 ಕೋಟಿ ರೂ. ಅನುದಾನ.

– ಕೊಪ್ಪಳ ಜಿಲ್ಲೆಯ ಸಿರಿವಾರ ಗ್ರಾಮದಲ್ಲಿ ತೋಟಗಾರಿಕೆ ತಂತ್ರಜ್ಞಾನ ಪಾರ್ಕ್ ಅಭಿವೃದ್ಧಿ. ಹೊಸ ತಂತ್ರಜ್ಞಾನ, ಹೊಸ ಬೆಳೆ ತಳಿ, ಉತ್ತಮ ನಿರ್ವಹಣಾ ಪದ್ಧತಿಗಳನ್ನು ರೈತರಿಗೆ ಪರಿಚಯಿಸಲು ಪ್ರಾತ್ಯಕ್ಷಿಕಾ ಕ್ಷೇತ್ರಗಳು ಅಭಿವೃದ್ಧಿ.

– ಸುವಾಸನೆಯುಕ್ತ ಮತ್ತು ವೈದ್ಯಕೀಯ ಗಿಡಗಳು, ಹಣ್ಣು, ತರಕಾರಿಗಳು ಮತ್ತು ಸಾಂಬಾರ ಪದಾರ್ಥಗಳಿಗಾಗಿ ಹೊಸ ಕೃಷಿ ರಫ್ತು ವಲಯವನ್ನು ಸ್ಥಾಪನೆ ಮಾಡಲಾಗುವುದು. 

– ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮದ ವತಿಯಿಂದ ಮೀನು ಮಾರಾಟ ಘಟಕಗಳು ಹಾಗೂ ಮತ್ಸ ದರ್ಶನಿಗಳನ್ನು 30 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಲಾಗುವುದು

ಕರ್ನಾಟಕ ಬಜೆಟ್ ಮುಖ್ಯಾಂಶಗಳು

ಉಪನಗರ ರೈಲು ಯೋಜನೆಗೆ 2021–21ನೇ ಸಾಲಿಗೆ 850 ಕೋಟಿ ರೂ.

ಚಾಮರಾಜನಗರದಲ್ಲಿ ಅರಿಶಿನ ಮಾರುಕಟ್ಟೆ 

– ಹೊಸ ಮಾರುಕಟ್ಟೆಗ ಸ್ಥಾಪನೆಯಿಂದ ರೈತರ ಆದಾಯ ಹೆಚ್ಚಳ

– ದ್ರಾಕ್ಷಿ ಕೃಷಿಯ ಉತ್ತೇಜನಕ್ಕೆ ಕರ್ನಾಟಕ ದ್ರಾಕ್ಷಾರಸ ಮಂಡಳಿಯನ್ನು ಕರ್ನಾಟಕ ದ್ರಾಕ್ಷಿ ಹಾಗೂ ದ್ರಾಕ್ಷಾರಸ ಮಂಡಳಿಯನ್ನಾಗಿ ಪುನರ್ ರಚಿಸಲು ಕ್ರಮ.

– ಬೈಯಪ್ಪನಹಳ್ಳಿಯಲ್ಲಿ 50 ಕೋಟಿ ರೂ. ವೆಚ್ಚದಲ್ಲಿ ಸುಸ್ಸಜ್ಜಿತ ಹೂವಿನ ಮಾರುಕಟ್ಟೆ ನಿರ್ಮಾಣ

– ಬಳ್ಳಾರಿಯ ಆಲದಮಹಳ್ಳಿ ಗ್ರಾಮದಲ್ಲಿ ಅತ್ಯಾಧುನಿಕ ಒಣಮೆಣಸಿನಕಾಯಿ ಮಾರುಕಟ್ಟೆ ಸ್ಥಾಪನೆ

– ಸಿಂಗೇನ ಅಗ್ರಹಾರ ಸಮೀಪದ ಗುಳಿಮಂಗಳ ಗ್ರಾಮದಲ್ಲಿ ಅತ್ಯಾಧುನಿಕ ತರಕಾರಿ ಮಾರುಕಟ್ಟೆ ನಿರ್ಮಾಣ,

– ಬ್ಯಾಡಗಿ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ನಾಲ್ಕು ಕೋಟಿ ರೂ. ವೆಚ್ಚದಲ್ಲಿ ಆಧುನಿಕ ಗುಣವಿಶ್ಲೇಷಣಾ ಘಟಕ ಸ್ಥಾಪನೆ

– ಚಾಮರಾಜನಗರದಲ್ಲಿ ಅರಿಶಿನ ಮಾರುಕಟ್ಟೆ 

ಬಜೆಟ್‌ನಲ್ಲಿ ಮಹಿಳೆಯರಿಗೆ ಕೊಡುಗೆ

ಬಜೆಟ್‌ನಲ್ಲಿ ಮಹಿಳೆಯರಿಗೆ ಕೊಡುಗೆ

ರಾಜ್ಯ ಬಜೆಟ್‌ನಲ್ಲಿ ಮಹಿಳೆಯರಿಗಾಗಿ ವಿಶೇಷ ಯೋಜನೆಗಳು#

ಮಂಗಳೂರಿನ ಗಂಜಿಮಠದಲ್ಲಿ ಪ್ಲಾಸ್ಟಿಕ್ ಪಾರ್ಕ್ ಸ್ಥಾಪನೆ ಮಾಡಲು 150 ಕೋಟಿ ರೂ.

- ಹೊಸ ಹೈಬ್ರಿಡ್ ಬೀಜ ನೀತಿ ಜಾರಿಗೆ ಕ್ರಮ, ಸಾವಯವ ಕೃಷಿ ಉತ್ತೇಜನಕ್ಕೆ 500 ಕೋಟಿ ರೂ.

- ಮಂಗಳೂರಿನ ಗಂಜಿಮಠದಲ್ಲಿ ಪ್ಲಾಸ್ಟಿಕ್ ಪಾರ್ಕ್ ಸ್ಥಾಪನೆ ಮಾಡಲು 150 ಕೋಟಿ ರೂ.

- ಮಂಗಳೂರು-ಪಣಜಿ ಜಲಮಾರ್ಗ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಅಭಿವೃದ್ಧಿ

- ಕೃಷ್ಣ ಭಾಗ್ಯ ಜಲ ನಿಗಮಕ್ಕೆ 56,00 ಕೋಟಿ ರೂ. ಅನುದಾನ

- 234 ಕೆರೆಗಳನ್ನು ತುಂಬಿಸಲು 500 ಕೋಟಿ ರೂ.ಗಳಲ್ಲಿ ಬೆಂಗಳೂರು ನಗರ, ತುಮಕೂರು ಮತ್ತು ಚಿಕ್ಕಬಳ್ಳಾಪುರದ ಕೆರೆಗಳನ್ನು ತುಂಬಿಸಲಾಗುವುದು: 

- ಮಲೆನಾಡು, ಕರಾವಳಿ ಭಾಗದಲ್ಲಿ ಕಾಲುದಾರಿ ನಿರ್ಮಾಣಕ್ಕೆ 100 ಕೋಟಿ ರೂ. 

- ರಾಯಚೂರಿನಲ್ಲಿ ಸುಗಮ ಸಂಚಾರಕ್ಕಾಗಿ ರಿಂಗ್ ರೋಡ್

- ಬೆಂಗಳೂರು ಸಮಗ್ರ ಅಭಿವೃದ್ಧಿಗೆ ವಿಶೇಷ ಯೋಜನೆ

- ಬೆಂಗಳೂರಿನಲ್ಲಿ ನವ ಚೈತನ್ಯ ಕಾರ್ಯಕ್ರಮ ಜಾರಿ

ಅಲ್ಪಸಂಖ್ಯಾತರ ಅಭಿವೃದ್ಧಿಗೆ ₹1500 ಕೋಟಿ

ಒಕ್ಕಲಿಗ ಅಭಿವೃದ್ಧಿ ನಿಗಮ ಸ್ಥಾಪನೆ: 500 ಕೋಟಿ ಅನುದಾನ

ಮುಂದಿನ 5 ವರ್ಷದಲ್ಲಿ 43,000 ನೇರ ಉದ್ಯೋಗ ಸೃಷ್ಟಿ ಗುರಿ

– ಹುಬ್ಬಳಿ, ಬಳ್ಳಾರಿಯಲ್ಲಿ ವಿಜ್ಞಾನ ಪ್ರಯೋಗಾಲಯ ಸ್ಥಾಪನೆ

– ಕಾರಾಗೃಹದಿಂದ ಆನ್ ಲೈನ್ ಮೂಲಕ ಕೋರ್ಟ್ ಹಾಜರಿಗೆ ವ್ಯವಸ್ಥೆ

– ರೈತರಿಗೆ ಮಾರುಕಟ್ಟೆ ಅವಕಾಶಗಳ ವಿಸ್ತರಣೆ 

– ತೋಟಗಾರಿಕಾ ಬೆಳೆಗಳ ರಫ್ತಿಗೆ ರಾಜ್ಯದ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣಗಳಲ್ಲಿ ಪೂರಕ ಸೌಲಭ್ಯ 

– ರಾಷ್ಟ್ರೀಯ ಇ ಮಾರುಕಟ್ಟೆ ಪ್ರೈವೇಟ್ ಲಿಮಿಟೆಡ್ ಮೂಲಕ ಸಾವಯವ ಮತ್ತು ಸಿರಿಧಾನ್ಯಾಗಳ ವೈಜ್ಞಾನಿಕ ಮಾರಾಟಕ್ಕೆ ಅವಕಾಶ

– ಮುಂದಿನ 5 ವರ್ಷದಲ್ಲಿ 43,000 ನೇರ ಉದ್ಯೋಗ ಸೃಷ್ಟಿ ಗುರಿ

ಕೋವಿಡ್‌ ಪರಿಣಾಮದಿಂದ ತೆರಿಗೆ ಪಾಲಿನಲ್ಲಿ ಇಳಿಕೆ: ಬಿಎಸ್‌ವೈ

ಮಹಿಳಾ ಉದ್ಯಮಿಗಳನ್ನು ಪ್ರೋತ್ಸಾಹಿಸಲು ‘ಎಲಿವೇಟ್ ವುಮನ್’ ಕಾರ್ಯಕ್ರಮ

- ಮಹಿಳಾ ಉದ್ಯಮಿಗಳನ್ನು ಪ್ರೋತ್ಸಾಹಿಸಲು ಎಲಿವೇಟ್ ವುಮನ್ ಎಂಬ ಕಾರ್ಯಕ್ರಮ

- ದತ್ತಾಂಶ ಕೇಂದ್ರ ಸೈಬರ್ ಸುರಕ್ಷತೆಗೆ 

- 100 ಪೊಲೀಸ್ ಠಾಣೆಗಳ ನಿರ್ಮಾಣ

- ಚಿತ್ರದುರ್ಗದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ

- ಪೊಲೀಸ್ ಕ್ಷೇಮಾಭಿವೃದ್ಧಿಗೆ ಪೊಲೀಸ್ ಗೃಹ 2025 ಯೋಜನೆ

- ಪೊಲೀಸ್ ವಸತಿ ಗೃಹಗಳ ನಿರ್ಮಾಣ

100 ಕಿತ್ತೂರು ರಾಣಿ ಶಿಶುಪಾಲನಾ ಕೇಂದ್ರ ಸ್ಥಾಪನೆ

– 100 ಕಿತ್ತೂರು ರಾಣಿ ಶಿಶುಪಾಲನಾ ಕೇಂದ್ರ ಸ್ಥಾಪನೆ

– ರಾಜ್ಯದಲ್ಲಿ 25 ಸಂಚಾರಿ ಆರೋಗ್ಯ ತಪಾಸಣಾ ಕೇಂದ್ರ

– ಕೃಷಿ ಸಂಚಾಯ್ ಯೋಜನೆಗೆ 835 ಕೋಟಿ ರೂ. ಅನುದಾನ

– ಸಾವಯವ ಕೃಷಿಗೆ ಉತ್ತೇಜನ ನೀಡಲು 300 ಕೋಟಿ

– ರಾಜ್ಯದ 8 ಕಾರಾಗೃಹ ಸಾಮರ್ಥ್ಯ ಹೆಚ್ಚಳಕ್ಕೆ ನಿರ್ಧಾರ


 

ಮನೆಬಾಗಿಲಿಗೆ ಮಾಶಾಸನ ಅಭಿಯಾನ ಆರಂಭ

– ಮನೆಬಾಗಿಲಿಗೆ ಮಾಶಾಸನ ಅಭಿಯಾನ ಆರಂಭ

– ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಗೆ 900 ಕೋಟಿ

– ಭೂಕಂದಾಯ ಅಧಿನಿಯಮಕ್ಕೆ ತಿದ್ದುಪಡಿ

– ಸ್ವಾಮಿತ್ವ ಯೋಜನೆಗೆ 25 ಕೋಟಿ ರೂ.

– ವಿಜಯನಗರ ಜಿಲ್ಲೆಯ ಮೂಲಸೌಕರ್ಯ ವೃದ್ಧಿಗೆ ಆದ್ಯತೆ

– ಆತ್ಮ ನಿರ್ಭರ್ ಯೋಜನೆಯಡಿ ಆಹಾರ ಪಾರ್ಕ್ ಸ್ಥಾಪನೆ

– ಉಪನಗರ ರೈಲು ಯೋಜನೆಗೆ 15,767 ಕೋಟಿ ರೂ.

ಮಹಿಳೆಯರಿಗೆ ಬಜೆಟ್ ಕೊಡುಗೆ

ಮಹಿಳೆಯರಿಗೆ 6 ತಿಂಗಳು ಪ್ರಸೂತಿ ರಜೆಯ ಜೊತೆ 6 ತಿಂಗಳು ಮಕ್ಕಳ ಆರೈಕೆ ರಜೆ

ಹೊಸ ತೆರಿಗೆ ಹೊರೆ ಇಲ್ಲ, ಪೆಟ್ರೋಲ್-ಡೀಸೆಲ್ ತೆರಿಗೆ ಕಡಿತವೂ ಇಲ್ಲ

ವೀರಶೈವ ಲಿಂಗಾಯತ ಅಭಿವೃದ್ಧಿಗೆ 500 ಕೋಟಿ ರೂ.  ಒಕ್ಕಲಿಗ ಅಭಿವೃದ್ಧಿ ನಿಗಮ ಸ್ಥಾಪನೆ

- ರಾಜ್ಯದಲ್ಲಿ ಹೊಸದಾಗಿ 52 ಬಸ್ ನಿಲ್ದಾಣಗಳ ಸ್ಥಾಪನೆ

- ವೀರಶೈವ ಲಿಂಗಾಯತ ಅಭಿವೃದ್ಧಿಗೆ 500 ಕೋಟಿ ರೂ.  ಒಕ್ಕಲಿಗ ಅಭಿವೃದ್ಧಿ ನಿಗಮ ಸ್ಥಾಪನೆ

- ಅಯೋಧ್ಯೆಯಲ್ಲಿ ಕರ್ನಾಟಕ ಯಾತ್ರಿ ನಿವಾಸ ನಿರ್ಮಾಣ

- ಪ್ರವಾಸಿ ತಾಣಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ 500 ಕೋಟಿ ರೂ.

- ಕಡಲ ತೀರ ಅಭಿವೃದ್ಧಿಗೆ 10 ಕೋಟಿ ರೂ. ಅನುದಾನ

- ಎತ್ತಿನ ಹೊಳೆ ಯೋಜನೆಗೆ ಭೂಸ್ವಾಧೀನ ಪ್ರಕ್ರಿಯೆ, ಮೈಸೂರಿನಲ್ಲಿ ಕಿದ್ವಾಯಿ ಆಸ್ಪತ್ರೆಯ ಮಾದರಿಯಲ್ಲಿ ಆಸ್ಪತ್ರೆಗಳ ನಿರ್ಮಾಣ.

ಪ್ರಧಾನ ಮಂತ್ರಿ ಮತ್ಸ್ಯ ಸಂಪ್ರದಾ ಯೋಜನೆಗೆ 62 ಕೋಟಿ ರೂ.

- ತಾಯಂದಿರ ಎದೆ ಹಾಲಿನ ಬ್ಯಾಂಕ್ ಸ್ಥಾಪನೆಗೆ 2.5 ಕೋಟಿ ರೂ.


- 45 ಲಕ್ಷ ರೂ. ವರೆಗೆ ಫ್ಲ್ಯಾಟ್‌ ಖರೀದಿ ಮಾಡುವಾಗ ಮುದ್ರಾಂಕ ಶುಲ್ಕ ಪಾವತಿಯಿಲ್ಲ

- ಮಹಿಳೆಯರ ಕಲ್ಯಾಣಕ್ಕಾಗಿ 37188 ಕೋಟಿ ರೂ.

- ಕಿದ್ವಾಯಿ ಮಾದರಿಯ ಆಸ್ಪತ್ರೆಗೆ ನಿರ್ಮಾಣಕ್ಕೆ 10 ಕೋಟಿ ರೂ. ಅನುದಾನ

- ಕೃಷಿ ಅಭಿವೃದ್ಧಿ ವಿವಿಧ ಯೋಜನೆಗಳ ಘೋಷಣೆ

- ವೇತನ, ಪಿಂಚಣಿ, ಸಾಮಾಜಿಕ ಪಿಂಚಣಿ, ಸಬ್ಸಿಡಿಗಳನ್ನು ಕಾಲಕ್ಕೆ ತಕ್ಕಂತೆ ಪಾವತಿ ಮಾಡಲಾಗಿದೆ: ಸಿಎಂ

-- ಎಪಿಎಂಸಿಗಳಲ್ಲಿ ಮಹಿಳೆಯರಿಗೆ ಶೇ 10ರಷ್ಟು ಮೀಸಲಾತಿ: ಯಡಿಯೂರಪ್ಪ

- ಸಾವಯವ ಇಂಗಾಲ ಹೆಚ್ಚಿಸುವ ಗೊಬ್ಬರ ವಿತರಣೆಗೆ ಕ್ರಮ

- ಗೊಬ್ಬರ ವಿತರಣೆಗೆ 10 ಕೋಟಿ ರೂ. ಅನುದಾನ

- ಪ್ರತಿಜಿಲ್ಲೆಯಲ್ಲೂ ಗೋಶಾಲೆ ನಿರ್ಮಾಣ

- ಕಿರು ಆಹಾರ ಸಂಸ್ಕರಣೆಗೆ ಉದ್ಯಮಕ್ಕೆ 50 ಕೋಟಿ
- 6 ಕೋಟಿ ರೂ. ವೆಚ್ಚದಲ್ಲಿ ಮೌಲ್ಯ ವರ್ಧನಾ ಕೇಂದ್ರಗಳ ಸ್ಥಾಪನೆ

- ಪ್ರಧಾನ ಮಂತ್ರಿ ಮತ್ಸ್ಯ ಸಂಪ್ರದಾ ಯೋಜನೆಗೆ 62 ಕೋಟಿ ರೂ.

ಬಜೆಟ್‌ ಮುಖ್ಯಾಂಶಗಳಿಗಾಗಿ ಈ ಪುಟ ನೋಡುತ್ತಿರಿ.

ಸರ್ಕಾರದ ವಿರುದ್ಧ ಕಾಂಗ್ರೆಸ್‌ ಆಕ್ರೋಶ:‌ ಘೋಷಣೆ ಕೂಗುತ್ತ ಸಭಾತ್ಯಾಗ

75 ಕೋಟಿ ರೂ. ವೆಚ್ಚದಲ್ಲಿ ಹೈಟೆಕ್ ರೆಷ್ಮೆ ಮಾರುಕಟ್ಟೆ

75 ಕೋಟಿ ರೂ. ವೆಚ್ಚದಲ್ಲಿ ಹೈಟೆಕ್ ರೆಷ್ಮೆ ಮಾರುಕಟ್ಟೆ 100 ತಾಲೂಕು ಆಸ್ಪತ್ರೆಗಳಲ್ಲಿ 6 ಹಾಸಿಗೆಯ ಐಸಿಯು ನಿರ್ಮಾಣ ರೈಲು ಉಪನಗರ ಯೋಜನೆಗಳಿಗೆ 15767 ಕೋಟಿ ರೂ. ಮಹಿಳಾ ಸ್ವ ಸಹಾಯ ಸಂಘ ಉತ್ಪನ್ನಗಳಿಗೆ ಮಾರುಕಟ್ಟೆ ವೀರಶೈವ ಲಿಂಗಾಯತರಿಗೆ 500 ಕೋಟಿ ರೂ.

2021-22ನೇ ಸಾಲಿನ ಬಜೆಟ್ ಗಾತ್ರ ಎರಡೂವರೆ ಲಕ್ಷ ಕೋಟಿ ರೂ.: ಯಡಿಯೂರಪ್ಪ

2021-22ನೇ ಸಾಲಿನ ಬಜೆಟ್ ಗಾತ್ರ ಎರಡೂವರೆ ಲಕ್ಷ ಕೋಟಿ ರೂ.

ಕಿತ್ತೂರು ಅಭಿವೃದ್ಧಿ ಪ್ರಾಧಿಕಾರಕ್ಕೆ 50 ಕೋಟಿ ರೂ.

75 ಕೋಟಿ ರೂ. ವೆಚ್ಚದಲ್ಲಿ ಹೈಟೆಕ್ ರೆಷ್ಮೆ ಮಾರುಕಟ್ಟೆ

ಕೇಂದ್ರದಿಂದ ರಾಜ್ಯಗಳಿಗೆ ನೀಡುವ ತೆರಿಗೆ ಪಾಲು ಕಡಿಮೆ ಮಾಡಲಾಗಿದೆ: ಯಡಿಯೂರಪ್ಪ

ಕೋವಿಡ್ ಸಂಕಷ್ಟದ ಹಿನ್ನೆಲೆಯಲ್ಲಿ ರಾಜ್ಯಗಳಿಗೆ ನೀಡುವ ತೆರಿಗೆ ಪಾಲು ಕಡಿಮೆ ಮಾಡಲಾಗಿದೆ. ರಾಜ್ಯದ ಜಿಎಸ್ ಟಿ ಸಂಗ್ರಹಣೆ ಇಳಿಕೆ ಆಗಿರುತ್ತದೆ: ಯಡಿಯೂರಪ್ಪ

ರಾಜ್ಯದಾದ್ಯಂತ 60 ಸಾವಿರ ಮಹಿಳೆಯರಿಗೆ ಉದ್ಯೋಗ: ಯಡಿಯೂರಪ್ಪ

ಬಿಎಂಟಿಸಿ ಬಸ್‌ಗಳಲ್ಲಿ ಮಹಿಳೆಯರಿಗೆ ರಿಯಾಯಿತಿ ಬಸ್ ಪಾಸ್, ಮಹಿಳಾ ಉದ್ಯಮಿಗಳಿಗೆ ಶೇ. 4ರ ಬಡ್ಡಿದರದಲ್ಲಿ ಸಾಲ ಮತ್ತು ಕಷ್ಟದ ಸಮಯದಲ್ಲೂ ಸಂಬಳ, ಪಿಂಚಣಿ, ಸಬ್ಸಿಡಿ ಸಕಾಲದಲ್ಲಿ ನಿರ್ವಹಿಸಲಾಗಿದೆ: ಯಡಿಯೂರಪ್ಪ

ಹಾಲು ಉತ್ಪಾದನೆಯಲ್ಲಿ ಎರಡನೇ ಸ್ಥಾನ ಬಂದಿದೆ. ಕೊರೊನೋತ್ತರ ಕಾಲದಲ್ಲಿ  ಭರವಸೆಯ ಆಶಾಕಿರಣ ಮೂಡಿಬಂದಿದೆ. 

ಕೃಷಿ, ನೀರಾವರಿ, ಮೂಲ ಸೌಕರ್ಯ ಸುಧಾರಣೆ ಜೊತೆಗೆ ಶಿಕ್ಷಣಕ್ಕೆ ಆದ್ಯತೆ ನಿಡಲಾಗಿದೆ: ಯಡಿಯೂರಪ್ಪ

ಸವಾಲುಗಳನ್ನೇ ಅವಕಾಶವಾಗಿ ಪರಿವರ್ತಿಸಲು ನಮ್ಮ ಸರ್ಕಾರ ಪ್ರಯತ್ನಿಸಿದೆ: ಯಡಿಯೂರಪ್ಪ

ಸವಾಲುಗಳನ್ನೇ ಅವಕಾಶವಾಗಿ ಪರಿವರ್ತಿಸಲು ನಮ್ಮ ಸರ್ಕಾರ ಪ್ರಯತ್ನಿಸಿದೆ: ಯಡಿಯೂರಪ್ಪ

ಸಾಂಕ್ರಾಮಿಕವನ್ನು ಎದುರಿಸಲು ರಾಜ್ಯದಾದ್ಯಂತ ಆಸ್ಪತ್ರೆಗಳನ್ನು ಸಜ್ಜುಗೊಳಿಸಲಾಗಿದೆ. ಕೊರೊನಾ ದುಃಸ್ವಪ್ನ, ಜೀವನವಿಡೀ ನೆನಪಿಸಿಕೊಳ್ಳುವಂತದ್ದು, ಈ ಸಮರದಲ್ಲಿ ಮಾನವಕುಲ ಜಯಿಸಿದೆ: ಸಿಎಂ

ಭಾರತದ ಪಾತ್ರಕ್ಕೆ ಜಾಗತಿಕ ಮನ್ನಣೆ, ಕರ್ನಾಟಕದ ಪಾತ್ರ ಮಹತ್ತರ: ಯಡಿಯೂರಪ್ಪ

ಕೊರೊನಾ ನಿಯಂತ್ರಣ, ಲಸಿಕೆ ಹಂಚಿಕೆಯಲ್ಲಿ ರಾಜ್ಯದ ಕಾರ್ಯಕ್ರಮ ರಾಷ್ಟ್ರ ಮಟ್ಟದಲ್ಲಿ ಮೆಚ್ಚುಗೆಗೆ ಪಾತ್ರವಾಗಿದೆ: ಯಡಿಯೂರಪ್ಪ

ಬಜೆಟ್ ಮಂಡನೆಗೆ ಕಾಂಗ್ರೆಸ್ ವಿರೋಧ

ಬಜೆಟ್ ಮಂಡನೆಗೆ ಕಾಂಗ್ರೆಸ್ ವಿರೋಧ
ಮುಖ್ಯಮಂತ್ರಿ ಯಡಿಯೂರಪ್ಪ ಬಜೆಟ್ ಮಂಡನೆ ಆರಂಭಿಸಿದ್ದಾರೆ. ಬಜೆಟ್ ಮಂಡನೆಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಸದಸ್ಯರು ವಿರೋಧ ವ್ಯಕ್ತಪಡಿಸಿದ್ದಾರೆ.

ಶೇಷಾದ್ರಿಪುರಂನ ಶ್ರೀ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠಕ್ಕೆ ಮುಖ್ಯಮಂತ್ರಿ ಭೇಟಿ

ಬಜೆಟ್ ಮಂಡನೆಗೂ ಮುನ್ನ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ನಂಜನಗೂಡು ಶ್ರೀ ಗುರು ರಾಘವೇಂದ್ರ ಮಠಕ್ಕೆ ಭೇಟಿ ನೀಡಿ ಪೂಜೆ ನೆರವೇರಿಸಿದರು.

ಸಿಎಂ ಯಡಿಯೂರಪ್ಪ ಅವರಿಗೆ ಬಜೆಟ್ ಪ್ರತಿ ಇರುವ ಸೂಟ್ ಕೇಸ್ ಹಸ್ತಾಂತರ ಮಾಡಿದ ಹಣಕಾಸು ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಐಎಸ್ಎನ್ ಪ್ರಸಾದ್

ಬಜೆಟ್‌ನಲ್ಲಿ ಮಹಿಳೆಯರಿಗೆ ಹೆಚ್ಚಿನ ಆದ್ಯತೆ: ಯಡಿಯೂರಪ್ಪ

ಬಜೆಟ್‌ನಲ್ಲಿ ಮಹಿಳೆಯರಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಬಜೆಟ್ ಮಂಡನೆಗೂ ಮುನ್ನ ಮುಖ್ಯಮಂತ್ರಿ ಬಿ.ಎಸ್.  ಯಡಿಯೂರಪ್ಪ ಹೇಳಿದ್ದಾರೆ.
 

ಮಹಿಳಾ ದಿನಾಚರಣೆ ಅಂಗವಾಗಿ ಹಲವು ಮಹಿಳಾ ಪ್ರಮುಖರು ಶುಭ ಕೋರಿದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.