ADVERTISEMENT

ಸವಾಲುಗಳನ್ನೇ ಅವಕಾಶಗಳನ್ನಾಗಿಸಲು ಯತ್ನಿಸಿದ್ದೇವೆ: ಯಡಿಯೂರಪ್ಪ

​ಪ್ರಜಾವಾಣಿ ವಾರ್ತೆ
Published 8 ಮಾರ್ಚ್ 2021, 7:31 IST
Last Updated 8 ಮಾರ್ಚ್ 2021, 7:31 IST
ಬಜೆಟ್ ಮಂಡಿಸುತ್ತಿರುವ ಯಡಿಯೂರಪ್ಪ (ಕೃಪೆ – ಚಂದನ)
ಬಜೆಟ್ ಮಂಡಿಸುತ್ತಿರುವ ಯಡಿಯೂರಪ್ಪ (ಕೃಪೆ – ಚಂದನ)   

ಬೆಂಗಳೂರು: ಸಂಕಷ್ಟಗಳಿಗೆ ಜಗ್ಗದೇ ಸವಾಲುಗಳನ್ನೇ ಅವಕಾಶವಾಗಿ ಪರಿವರ್ತಿಸಲು ನಮ್ಮ ಸರ್ಕಾರ ಪ್ರಯತ್ನಿಸಿದೆ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದರು.

ಕೋವಿಡ್‌ ಮತ್ತು ಆರ್ಥಿಕ ಹಿಂಜರಿತದ ಸಂಕಷ್ಟದ ಸಂದರ್ಭದಲ್ಲಿ ತಮ್ಮ 8ನೇ ಬಜೆಟ್‌ ಮಂಡನೆ ಆರಂಭಿಸಿ ಮಾತನಾಡಿದ ಮುಖ್ಯಮಂತ್ರಿಗಳು, ಕೋವಿಡ್ ಸಾಂಕ್ರಾಮಿಕವನ್ನು ಎದುರಿಸಲು ರಾಜ್ಯದಾದ್ಯಂತ ಆಸ್ಪತ್ರೆಗಳನ್ನು ಸಜ್ಜುಗೊಳಿಸಲಾಗಿತ್ತು. ಕೋವಿಡ್ ಎದುರಿಸುವಿಕೆ ಮತ್ತು ಈ ವಿಚಾರದಲ್ಲಿ ಭಾರತದ ಪಾತ್ರಕ್ಕೆ ಜಾಗತಿಕ ಮನ್ನಣೆ ದೊರೆಯುವಲ್ಲಿ ಕರ್ನಾಟಕದ ಪಾತ್ರ ಮಹತ್ತರವಾದದ್ದು ಎಂದು ಹೇಳಿದರು.

ಕೊರೊನಾ ನಿಯಂತ್ರಣ, ಲಸಿಕೆ ಹಂಚಿಕೆಯಲ್ಲಿ ರಾಜ್ಯದ ಕಾರ್ಯಕ್ರಮ ರಾಷ್ಟ್ರ ಮಟ್ಟದಲ್ಲಿ ಮೆಚ್ಚುಗೆಗೆ ಪಾತ್ರವಾಗಿದೆ. ಈ ಬಗ್ಗೆ ಪ್ರಧಾನಿಯೂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ಯಡಿಯೂರಪ್ಪ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.