ADVERTISEMENT

Karnataka Budget 2021: ಅಲ್ಪಸಂಖ್ಯಾತರ ಅಭಿವೃದ್ಧಿಗೆ ₹1500 ಕೋಟಿ ಮೀಸಲು

​ಪ್ರಜಾವಾಣಿ ವಾರ್ತೆ
Published 8 ಮಾರ್ಚ್ 2021, 7:54 IST
Last Updated 8 ಮಾರ್ಚ್ 2021, 7:54 IST
ಬಜೆಟ್ ಮಂಡಿಸುತ್ತಿರುವ ಯಡಿಯೂರಪ್ಪ
ಬಜೆಟ್ ಮಂಡಿಸುತ್ತಿರುವ ಯಡಿಯೂರಪ್ಪ   

ಬೆಂಗಳೂರು: ಅಲ್ಪಸಂಖ್ಯಾತರ ಅಭಿವೃದ್ಧಿಗೆ ₹1500 ಕೋಟಿ ಮೀಸಲಿಡುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬಜೆಟ್‌ನಲ್ಲಿ ಘೋಷಿಸಿದ್ದಾರೆ.

ಕ್ರಿಶ್ಚಿಯನ್ ಸಮುದಾಯದ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಮುಂದುವರಿಸಲಾಗುವುದು. ಇದಕ್ಕಾಗಿ ₹2000 ಕೋಟಿ ಮೀಸಲಿರಿಸಲಾಗುವುದು ಎಂದೂ ಅವರು ಘೋಷಿಸಿದ್ದಾರೆ.

ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಅಧೀನದಲ್ಲಿ ಬರುವ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಮಾದರಿ ಶಾಲೆ ಹಾಗೂ ಕಾಲೇಜುಗಳಲ್ಲಿ ತಂತ್ರಜ್ಞಾನ ಆಧಾರಿತ ಕಲಿಕಾ ಕಾರ್ಯಕ್ರಮ ಅನುಷ್ಠಾನಕ್ಕೂ ಕ್ರಮ ಕೈಗೊಳ್ಳಲಾಗುವುದು ಎಂದು ಬಜೆಟ್‌ನಲ್ಲಿ ಘೋಷಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.