ADVERTISEMENT

ಬಜೆಟ್‌ ಅಧಿವೇಶನದ ಮುಂದುವರಿದ ಭಾಗ ಸೋಮವಾರದಿಂದ

ಪಿಟಿಐ
Published 7 ಮಾರ್ಚ್ 2021, 9:25 IST
Last Updated 7 ಮಾರ್ಚ್ 2021, 9:25 IST
ಸಂಸತ್‌ ಭವನ
ಸಂಸತ್‌ ಭವನ   

ನವದೆಹಲಿ: ಸಂಸತ್‌ನ ಬಜೆಟ್‌ ಅಧಿವೇಶನದ ಮುಂದುವರಿದ ಭಾಗ ಸೋಮವಾರದಿಂದ ಆರಂಭವಾಗಲಿದೆ. ಈ ಅಧಿವೇಶನ ಒಂದು ತಿಂಗಳು ನಡೆಯಲಿದ್ದು, ಇದೇ ವೇಳೆಯಲ್ಲಿ ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ವಿಧಾನಸಭಾ ಚುನಾವಣೆಯೂ ಜರುಗಲಿದೆ.

ಈ ಅಧಿವೇಶನದ ಅವಧಿಯಲ್ಲಿ ಸರ್ಕಾರ 2021-22ನೇ ಸಾಲಿನ ಅನುದಾನಕ್ಕಾಗಿ ವಿವಿಧ ಬೇಡಿಕೆಗಳನ್ನು ಹಣಕಾಸು ಮಸೂದೆಯೊಂದಿಗೆ ಅಂಗೀಕರಿಸುವುದಕ್ಕೆ ಒತ್ತು ನೀಡಲಿದೆ.

ಏಪ್ರಿಲ್‌ 8ಕ್ಕೆ ಮುಕ್ತಾಯವಾಗುವ ಈ ಅಧಿವೇಶನದಲ್ಲಿ ವಿವಿಧ ಮಸೂದೆಗಳನ್ನು ಮಂಡಿಸಿ, ಅಂಗೀಕಾರ ಪಡೆಯಲು ಕೇಂದ್ರ ಸರ್ಕಾರ ಉತ್ಸುಕವಾಗಿದೆ.

ADVERTISEMENT

ಸರ್ಕಾರ ಪಟ್ಟಿ ಮಾಡಿರುವ ಕೆಲವು ಮಸೂದೆಗಳಲ್ಲಿ, ಪಿಂಚಣಿ ನಿಧಿ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ (ತಿದ್ದುಪಡಿ) ಮಸೂದೆ, ಮೂಲಸೌಕರ್ಯ ಮತ್ತು ಅಭಿವೃದ್ಧಿಗಾಗಿ ರಾಷ್ಟ್ರೀಯ ಬ್ಯಾಂಕ್ ಕುರಿತ ಮಸೂದೆ, ವಿದ್ಯುತ್ (ತಿದ್ದುಪಡಿ) ಮಸೂದೆ, ಕ್ರಿಪ್ಟೊ ಕರೆನ್ಸಿ ಮತ್ತು ಅಧಿಕೃತ ಡಿಜಿಟಲ್ ಕರೆನ್ಸಿ ಮಸೂದೆಯ ನಿಯಂತ್ರಣ ಸೇರಿವೆ.

ಇದೇ ಅವಧಿಯಲ್ಲಿ ಪಶ್ಚಿಮ ಬಂಗಾಳ, ತಮಿಳುನಾಡು, ಅಸ್ಸಾಂ, ಕೇರಳ ಮತ್ತು ಪುದುಚೇರಿಯಲ್ಲಿ ವಿಧಾನಸಭಾ ಚುನಾವಣೆ ನಡೆಯಲಿವೆ. ಚುನಾವಣೆಯತ್ತ ಗಮನ ಹರಿಸುವ ಇಲ್ಲಿನ ಪ್ರಾದೇಶಿಕ ಪಕ್ಷಗಳ ಹಿರಿಯ ನಾಯಕರು ಉಭಯ ಸದನಗಳ ಅಧಿವೇಶನಕ್ಕೆ ಗೈರಾಗುವ ಸಾಧ್ಯತೆ ಹೆಚ್ಚಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.