ADVERTISEMENT

Budget 2021: ದೇಶದ ಮೊದಲ ಡಿಜಿಟಲ್ ಜನಗಣತಿಗೆ ₹3,768 ಕೋಟಿ

ಏಜೆನ್ಸೀಸ್
Published 1 ಫೆಬ್ರುವರಿ 2021, 7:49 IST
Last Updated 1 ಫೆಬ್ರುವರಿ 2021, 7:49 IST
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಂದ ಕೇಂದ್ರ ಬಜೆಟ್ ಮಂಡನೆ
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಂದ ಕೇಂದ್ರ ಬಜೆಟ್ ಮಂಡನೆ   

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2021-22ನೇ ಆರ್ಥಿಕ ಸಾಲಿನ ಕೇಂದ್ರ ಬಜೆಟ್ ಅನ್ನು ಸಂಸತ್ತಿನಲ್ಲಿ ಮಂಡಿಸುತ್ತಿದ್ದಾರೆ.

ಈ ಸಂದರ್ಭದಲ್ಲಿ ದೇಶದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿಯನ್ನು ಘೋಷಣೆ ಮಾಡಿದ್ದರು.

ಅಷ್ಟೇ ಅಲ್ಲದೆ ಡಿಜಿಟಲ್ ಜನಗಣತಿಗೆ ₹3,768 ಕೋಟಿ ಮೀಸಲಿಡುವುದಾಗಿ ತಿಳಿಸಿದರು.

ಸಂಸತ್ತಿನಲ್ಲಿ ಬಜೆಟ್ ಭಾಷಣದಲ್ಲಿ ಪ್ರತಿಕ್ರಿಯಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಭಾರತದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ ನಡೆಯಲಿದೆ. ಈ ಐತಿಹಾಸಿಕ ಕಾರ್ಯಕ್ಕಾಗಿ 3,768 ಕೋಟಿ ರೂ.ಗಳನ್ನು ಮೀಸಲಿಡುತ್ತೇನೆ ಎಂದು ತಿಳಿಸಿದರು.

ಕೇಂದ್ರ ಬಜೆಟ್ 2021 ವಿಶೇಷ ಪುಟಕ್ಕಾಗಿ ಇಲ್ಲಿ ಕ್ಲಿಕ್ಕಿಸಿ

ಭಾರತ ಪ್ರಜಾಪ್ರಭುತ್ವದಲ್ಲಿ ಇದೇ ಮೊದಲ ಬಾರಿಗೆ ಕಾಗದರಹಿತ ಡಿಜಿಟಲ್ ಬಜೆಟ್ ಅನ್ನು ನಿರ್ಮಲಾ ಸೀತಾರಾಮನ್ ಮಂಡಿಸಿದರು.

ಕೋವಿಡ್-19 ನಿಮಯಗಳು ಜಾರಿಯಲ್ಲಿರುವುದರಿಂದ ಬಜೆಟ್ ಪ್ರತಿಗಳನ್ನು ಮುದ್ರಿಸಲಾಗುತ್ತಿಲ್ಲ. ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆಯ ಬಳಿಕ ಸಾಫ್ಟ್ ಕಾಪಿಗಳನ್ನು ಸಂಸದರಿಗೆ ಹಂಚಲಾಗುವುದು. ಸಾರ್ವಜನಿಕರು ಆ್ಯಪ್ ಮೂಲಕವೂ ಬಜೆಟ್ ಪ್ರತಿಗಳನ್ನು ಡೌನ್‌ಲೋಡ್ ಮಾಡಬಹುದಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.