ADVERTISEMENT

ಸ್ವಾವಲಂಬಿ ಭಾರತ ನಿರ್ಮಾಣ ದೃಷ್ಟಿಕೋನದ ಬಜೆಟ್‌: ಪ್ರಧಾನಿ ಮೋದಿ ಅಭಿಮತ

ಪಿಟಿಐ
Published 1 ಫೆಬ್ರುವರಿ 2021, 11:50 IST
Last Updated 1 ಫೆಬ್ರುವರಿ 2021, 11:50 IST
ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ   

ನವದೆಹಲಿ: ಕೊರೊನಾ ಸಾಂಕ್ರಾಮಿಕ ರೋಗದ ಬಿಕ್ಕಟ್ಟಿನ ಪರಿಸ್ಥಿತಿಯಲ್ಲಿ ಮಂಡನೆಯಾಗಿರುವ ಕೇಂದ್ರ ಬಜೆಟ್‌ ಸ್ವಾವಲಂಬಿ ಭಾರತ ನಿರ್ಮಾಣದ ಜೊತೆಗೆ, ಸಮಾಜದ ಎಲ್ಲ ವರ್ಗಗಳಿಗೂ ಪೂರಕವಾದ ಅಂಶಗಳನ್ನು ಒಳಗೊಂಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅಭಿಪ್ರಾಯಪಟ್ಟರು.

ವಿಶೇಷವಾಗಿ ಹಳ್ಳಿಗಳ ಅಭಿವೃದ್ಧಿ, ಕೃಷಿ ಕ್ಷೇತ್ರದ ಬಲವರ್ಧನೆ ಜೊತೆಗೆ ರೈತರ ಆದಾಯ ಹೆಚ್ಚಿಸುವುದಕ್ಕೆ ಬಜೆಟ್‌ನಲ್ಲಿ ಆದ್ಯತೆ ನೀಡಲಾಗಿದೆ ಎಂದು ಶ್ಲಾಘಿಸಿದರು.

ತುಂಬಾ ಕ್ಲಿಷ್ಟಕರ ಪರಿಸ್ಥಿತಿಯಲ್ಲೂ ವಾಸ್ತವಿಕ ಪ್ರಜ್ಞೆ ಹಾಗೂ ಅಭಿವೃದ್ಧಿಯ ವಿಶ್ವಾಸದೊಂದಿಗೆ ಮಂಡಿಸಿರುವ ಈ ಬಜೆಟ್‌, ಹೂಡಿಕೆದಾರರು, ಕೈಗಾರಿಕೆ, ಮೂಲಸೌಲಭ್ಯ ಸೇರಿದಂತೆ ವೈಯಕ್ತಿಕವಾಗಿಯೂ ಕೆಲವೊಂದು ಸಕಾರಾತ್ಮಕ ಬದಲಾವಣೆ ಗಳನ್ನು‌ ತರಲಿದೆ ಎಂದು ಮೋದಿ ವಿಶ್ವಾಸ ವ್ಯಕ್ತಪಡಿಸಿದರು.

ADVERTISEMENT

‘ಈ ಬಜೆಟ್‌ನಲ್ಲಿ ಬೆಳವಣಿಗೆಗೆ ಹೊಸ ಅವಕಾಶಗಳನ್ನು ತೆರೆದಿಡಲಾಗಿದೆ. ವಿಶೇಷವಾಗಿ ಯುವ ಸಮೂಹದ ಉದ್ಯೋಗ ಸೃಷ್ಟಿಗೆ ಹೊಸ ಅವಕಾಶಗಳನ್ನು ತೆರೆದಿಡಲಾಗಿದೆ. ಮಾನವ ಸಂಪನ್ಮೂಲಕ್ಕೆ ಹೊಸ ಆಯಾಮ ನೀಡಲಾಗಿದೆ. ಮೂಲ ಸೌಕರ್ಯ ಅಭಿವೃದ್ಧಿಗೂ ಆದ್ಯತೆ ನೀಡುತ್ತಾ, ತಂತ್ರಜ್ಞಾನದತ್ತ ಹೆಜ್ಜೆ ಹಾಕುವಂತಹ ಹೊಸ ಸುಧಾರಣೆಗಳನ್ನು ತರಲಾಗಿದೆ‘ ಎಂದು ಎಂದು ಪ್ರಧಾನಿ ಶ್ಲಾಘಿಸಿದರು.

‘ಇದೊಂದು ಪ್ರಗತಿ ಪೂರಕ ಬಜೆಟ್‌ ಆಗಿದ್ದು, ದೇಶದ ಸಂಪತ್ತಿನ ಜೊತೆಗೆ ಸ್ವಾಸ್ಥ್ಯವನ್ನು ಹೆಚ್ಚಿಸುತ್ತದೆ‘ ಎಂದು ಮೋದಿ ಹೇಳಿದರು.

ಇವುಗಳನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.