ADVERTISEMENT

3 ಲಕ್ಷ ಟನ್ ಈರುಳ್ಳಿ ಖರೀದಿ: ಸಚಿವ ಪೀಯೂಷ್‌ ಗೋಯಲ್‌ ಮಾಹಿತಿ

ಸಚಿವ ಪೀಯೂಷ್‌ ಗೋಯಲ್‌ ಮಾಹಿತಿ

​ಪ್ರಜಾವಾಣಿ ವಾರ್ತೆ
Published 30 ಮಾರ್ಚ್ 2023, 19:31 IST
Last Updated 30 ಮಾರ್ಚ್ 2023, 19:31 IST
ಷ
   

ಮುಂಬೈ (ಪಿಟಿಐ): ಕೇಂದ್ರ ಸರ್ಕಾರದ ಸಂಸ್ಥೆಗಳು ಹಿಂಗಾರು ಹಂಗಾಮಿನಲ್ಲಿ 3 ಲಕ್ಷ ಟನ್‌ ಈರುಳ್ಳಿ ಖರೀದಿಸಲಿವೆ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪೀಯೂಷ್‌ ಗೋಯಲ್‌ ಗುರುವಾರ ಹೇಳಿದ್ದಾರೆ.

ಕಳೆದ ವರ್ಷ ಇದೇ ಅವಧಿಯಲ್ಲಿ 2.5 ಲಕ್ಷ ಟನ್ ಈರುಳ್ಳಿ ಖರೀದಿಸಲಾಗಿತ್ತು ಎಂದು ಅವರು ಮಾಹಿತಿ ನೀಡಿದ್ದಾರೆ. ರೈತರಿಗೆ ನ್ಯಾಯೋಚಿತ ಬೆಲೆ ಸಿಗುವಂತೆ ಮಾಡುವ ಉದ್ದೇಶದಿಂದ 3 ಲಕ್ಷ ಟನ್ ಈರುಳ್ಳಿ ಖರೀದಿಸುವಂತೆ ಈಗಾಗಲೇ ಸೂಚನೆ ನೀಡಲಾಗಿದೆ ಎಂದು ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.

ಕಳೆದ ತಿಂಗಳಿನಿಂದ ಈರುಳ್ಳಿ ಬೆಲೆ ಭಾರಿ ಇಳಿಕೆ ಕಾಣುತ್ತಿರುವುದರಿಂದ ಮಹಾರಾಷ್ಟ್ರದ ಬೆಳೆಗಾರರು ಪ್ರತಿಭಟನೆ ನಡೆಸುತ್ತಿದ್ದಾರೆ.

ADVERTISEMENT

ಏಪ್ರಿಲ್‌–ಜೂನ್‌ ಅವಧಿಯಲ್ಲಿ ಹಿಂಗಾರು ಬೆಳೆ ಬೆಳೆಯಲಾಗುತ್ತದೆ. ದೇಶಿ ಬೇಡಿಕೆಯ ಶೇಕಡ 65ರಷ್ಟು ಈರುಳ್ಳಿಯನ್ನು ಅಕ್ಟೋಬರ್‌–ನವೆಂಬರ್‌ನ ಮುಂಗಾರು ಅವಧಿಯಲ್ಲಿ ಬೆಳೆಯಲಾಗುತ್ತದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.