ADVERTISEMENT

ಗೋಧಿ, ಸಾಸಿವೆ ಮೇಲಿನ ಕನಿಷ್ಠ ಬೆಂಬಲ ಬೆಲೆ ಹೆಚ್ಚಿಸಿದ ಕೇಂದ್ರ

ಪಿಟಿಐ
Published 8 ಸೆಪ್ಟೆಂಬರ್ 2021, 11:57 IST
Last Updated 8 ಸೆಪ್ಟೆಂಬರ್ 2021, 11:57 IST
ಸಾಂದರ್ಭಿಕ ಚಿತ್ರ (ಎಎಫ್‌ಪಿ)
ಸಾಂದರ್ಭಿಕ ಚಿತ್ರ (ಎಎಫ್‌ಪಿ)   

ನವದೆಹಲಿ: ಗೋಧಿ ಮೇಲಿನ ಕನಿಷ್ಠ ಬೆಂಬಲ ಬೆಲೆಯನ್ನು ಕೇಂದ್ರ ಸರ್ಕಾರವು ಬುಧವಾರ ₹40ರಷ್ಟು ಹೆಚ್ಚಳ ಮಾಡಿದ್ದು, ಕ್ವಿಂಟಲ್‌ಗೆ ₹2,015 ನಿಗದಿಪಡಿಸಿದೆ. ಸಾಸಿವೆ ಮೇಲಿನ ಕನಿಷ್ಠ ಬೆಂಬಲ ಬೆಲೆಯನ್ನು ₹400 ಹೆಚ್ಚಳ ಮಾಡಲಾಗಿದ್ದು, ಕ್ವಿಂಟಲ್‌ಗೆ ₹5,050 ನಿಗದಿಪಡಿಸಲಾಗಿದೆ.

ಆರ್ಥಿಕ ವ್ಯವಹಾರಗಳ ಸಚಿವ ಸಂಪುಟ ಸಮಿತಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

2020–21ನೇ ಸಾಲಿನಲ್ಲಿಗೋಧಿ ಮೇಲಿನ ಕನಿಷ್ಠ ಬೆಂಬಲ ಬೆಲೆಕ್ವಿಂಟಲ್‌ಗೆ₹1,975 ಇತ್ತು.

ADVERTISEMENT

ಸದ್ಯ ಮುಂಗಾರು ಮತ್ತು ಹಿಂಗಾರು ಅವಧಿಯ 23 ಬೆಳೆಗಳಿಗೆ ಕೇಂದ್ರ ಸರ್ಕಾರವು ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸಿದೆ. ಅಕ್ಟೋಬರ್‌ನಿಂದ ಹಿಂಗಾರು ಬೆಳೆ ಅವಧಿ ಆರಂಭವಾಗಲಿದ್ದು, ಗೋಧಿ ಹಾಗೂ ಸಾಸಿವೆ ಪ್ರಮುಖ ಹಿಂಗಾರು ಬೆಳೆಗಳಾಗಿವೆ.

2021–22ನೇ ಸಾಲಿನ ಆರು ಹಿಂಗಾರು ಬೆಳೆಗಳ ಕನಿಷ್ಠ ಬೆಂಬಲ ಬೆಲೆ ಹೆಚ್ಚಳಕ್ಕೆ ಆರ್ಥಿಕ ವ್ಯವಹಾರಗಳ ಸಚಿವ ಸಂಪುಟ ಸಮಿತಿ ಸಮ್ಮತಿ ಸೂಚಿಸಿದೆ ಎಂದು ಮೂಲಗಳು ಹೇಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.