ADVERTISEMENT

75 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ‘ಫಾರಂ 12ಬಿಬಿಎ’

ಪಿಟಿಐ
Published 5 ಸೆಪ್ಟೆಂಬರ್ 2021, 15:11 IST
Last Updated 5 ಸೆಪ್ಟೆಂಬರ್ 2021, 15:11 IST

ನವದೆಹಲಿ: 75 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ಹಿರಿಯ ನಾಗರಿಕರು 2021-22ರ ಆರ್ಥಿಕ ವರ್ಷಕ್ಕೆ ಐ.ಟಿ. ವಿವರ ಸಲ್ಲಿಸುವುದರಿಂದ ವಿನಾಯಿತಿ ಪಡೆಯಲು ಬ್ಯಾಂಕ್‌ಗಳಿಗೆ ಸಲ್ಲಿಸಬೇಕಿರುವ ಅರ್ಜಿ ನಮೂನೆ ‘ಫಾರಂ 12ಬಿಬಿಎ’ಅನ್ನು ಆದಾಯ ತೆರಿಗೆ ಇಲಾಖೆಯು ಭಾನುವಾರ ಬಿಡುಗಡೆ ಮಾಡಿದೆ.

ಒಂದೇ ಬ್ಯಾಂಕ್‌ನಲ್ಲಿ ಪಿಂಚಣಿ ಆದಾಯ ಮತ್ತು ನಿಶ್ಚಿತ ಠೇವಣಿಯ ಬಡ್ಡಿ ಪಡೆಯುತ್ತಿರುವ 75 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ಹಿರಿಯ ನಾಗರಿಕರು ಏಪ್ರಿಲ್‌ 1ರಿಂದ ವಿವರ ಸಲ್ಲಿಸುವ ಅವಶ್ಯಕತೆ ಇಲ್ಲ. ಅವರ ಆದಾಯಕ್ಕೆ ತಕ್ಕಂತೆ ಬ್ಯಾಂಕ್‌ ತೆರಿಗೆ ಕಡಿತ ಮಾಡಲಿದೆ ಎಂದು 2021–22ನೇ ಸಾಲಿನ ಬಜೆಟ್‌ನಲ್ಲಿ ಘೋಷಿಸಲಾಗಿತ್ತು. ಈ ಸಂಬಂಧ ನೇರ ತೆರಿಗೆಗಳ ಕೇಂದ್ರೀಯ ಮಂಡಳಿಯು (ಸಿಬಿಡಿಟಿ) ಭಾನುವಾರ ಅಧಿಸೂಚನೆ ಹೊರಡಿಸಿದ್ದು, ಅರ್ಜಿ ನಮೂನೆಯನ್ನು ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT