ADVERTISEMENT

Karnataka Budget 2021| ಅಯೋಧ್ಯೆಯಲ್ಲಿ ಯಾತ್ರಿ ನಿವಾಸ: ಬಿಎಸ್‌ವೈ ಘೋಷಣೆ

​ಪ್ರಜಾವಾಣಿ ವಾರ್ತೆ
Published 8 ಮಾರ್ಚ್ 2021, 9:00 IST
Last Updated 8 ಮಾರ್ಚ್ 2021, 9:00 IST
ಪ್ರಾತಿನಿಧಿಕ ಚಿತ್ರ (ರಾಯಿಟರ್ಸ್‌ ಚಿತ್ರ)
ಪ್ರಾತಿನಿಧಿಕ ಚಿತ್ರ (ರಾಯಿಟರ್ಸ್‌ ಚಿತ್ರ)   

ಬೆಂಗಳೂರು: ರಾಜ್ಯ ಸರ್ಕಾರವು ಅಯೋಧ್ಯೆಯಲ್ಲಿ ಸುಸಜ್ಜಿತ ಯಾತ್ರಿ ನಿವಾಸ ನಿರ್ಮಾಣ ಮಾಡುವುದಾಗಿ ಬಜೆಟ್‌ನಲ್ಲಿ ಘೋಷಣೆ ಮಾಡಿದೆ.

ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು 2021-22ರ ಸಾಲಿನ ಬಜೆಟ್‌ ಅನ್ನು ಸೋಮವಾರ ಮಂಡಿಸಿದರು.

'ಅಯೋಧ್ಯೆಗೆ ಭೇಟಿ ನೀಡುವ ಯಾತ್ರಾರ್ಥಿಗಳಿಗೆ ಸುಸಜ್ಜಿತ ಯಾತ್ರಿ ನಿವಾಸ ನಿರ್ಮಾಣಕ್ಕೆ ಪ್ರಸಕ್ತ ಸಾಲಿನಲ್ಲಿ ₹10 ಕೋಟಿ ರೂ. ಅನುದಾನ ನಿಗದಿ ಮಾಡಲಾಗಿದೆ,' ಎಂದು ಅವರು ಬಜೆಟ್‌ ಮಂಡನೆ ವೇಳೆ ಘೋಷಿಸಿದರು.

ADVERTISEMENT

ಈ ಯಾತ್ರಿನಿವಾಸಕ್ಕಾಗಿ ಉತ್ತರ ಪ್ರದೇಶ ಸರ್ಕಾರವು 5 ಎಕರೆ ಪ್ರದೇಶವನ್ನು ಮಂಜೂರು ಮಾಡಲಿದೆ ಎಂದೂ ಅವರು ಇದೇ ವೇಳೆ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.