ADVERTISEMENT

ಹೂಡಿಕೆದಾರರ ಸಂಪತ್ತು ₹ 10 ಲಕ್ಷ ಕೋಟಿ ಹೆಚ್ಚಳ

​ಪ್ರಜಾವಾಣಿ ವಾರ್ತೆ
Published 4 ಸೆಪ್ಟೆಂಬರ್ 2021, 13:41 IST
Last Updated 4 ಸೆಪ್ಟೆಂಬರ್ 2021, 13:41 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಮುಂಬೈ ಷೇರುಪೇಟೆಯಲ್ಲಿ (ಬಿಎಸ್‌ಇ) ದಾಖಲೆಯ ವಹಿವಾಟು ನಡೆಯುತ್ತಿದ್ದು, ಹೂಡಿಕೆದಾರರ ಸಂಪತ್ತು ಮೌಲ್ಯವು ವಾರದ ವಹಿವಾಟಿನಲ್ಲಿ ₹ 10.48 ಲಕ್ಷ ಕೋಟಿಗಳಷ್ಟು ವೃದ್ಧಿಯಾಗಿದೆ. ಇದರಿಂದ ಷೇರುಪೇಟೆಯ ಒಟ್ಟಾರೆ ಬಂಡವಾಳ ಮೌಲ್ಯವು ₹ 254.21 ಲಕ್ಷ ಕೋಟಿಗಳಿಗೆ ತಲುಪಿದೆ.

ಷೇರುಪೇಟೆಯಲ್ಲಿ ಗೂಳಿ ಓಟ ಜೋರಾಗಿದೆ. ಬಿಎಸ್ಇ ಸೆನ್ಸೆಕ್ಸ್‌ ಸಾರ್ವಕಾಲಿಕ ಗರಿಷ್ಠ ಮಟ್ಟವಾದ 58 ಸಾವಿರವನ್ನು ದಾಟಿ ವಹಿವಾಟು ನಡೆಸುತ್ತಿದೆ. ಕಳೆದ ಆಗಸ್ಟ್‌ನಲ್ಲಿ ಶೇ 9ರಷ್ಟು ಏರಿಕೆ ಕಂಡಿದ್ದು, ಸೆಪ್ಟೆಂಬರ್‌ನಲ್ಲಿಯೂ ದಾಖಲೆಯ ಓಟ ಮುಂದುವರಿಸಿದೆ. ವಾರದ ವಹಿವಾಟಿನಲ್ಲಿ ಪ್ರಮುಖ ಎಲ್ಲಾ ವಲಯಗಳು ಸಹ ಸಕಾರಾತ್ಮಕ ಹಾದಿಯಲ್ಲಿದ್ದವು.

ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ (ಎನ್‌ಎಸ್‌ಇ) ನಿಫ್ಟಿ ಸಹ 17 ಸಾವಿರದ ಗಡಿಯನ್ನು ದಾಟಿದೆ. ವಾರದ ವಹಿವಾಟಿನಲ್ಲಿ ಸೆನ್ಸೆಕ್ಸ್‌ 2005 ಅಂಶಗಳಷ್ಟು ಏರಿಕೆ ಕಂಡಿದ್ದರೆ, ನಿಫ್ಟಿ 618 ಅಂಶ ಹೆಚ್ಚಾಗಿದೆ.

ADVERTISEMENT

ವಿದೇಶಿ ಸಾಂಸ್ಥಿಕ ಹೂಡಿಕೆದಾರರು ಬಂಡವಾಳ ಮಾರುಕಟ್ಟೆಯಲ್ಲಿ ಖರೀದಿಗೆ ಹೆಚ್ಚು ಗಮನ ನೀಡಿದ್ದಾರೆ. ಈ ವಾರ ದೇಶದ ₹ 4,896 ಕೋಟಿಗೂ ಹೆಚ್ಚಿನ ಮೊತ್ತವನ್ನು ಹೂಡಿಕೆ ಮಾಡಿದ್ದಾರೆ.

ಜಿಡಿಪಿ ಬೆಳವಣಿಗೆ ಉತ್ತೇಜನಕಾರಿ ಆಗಿರುವುದು, ಸೇವಾ ವಲಯದ ಸೂಚ್ಯಂಕದ ಏರಿಕೆಯು ಷೇರುಪೇಟೆಗಳಲ್ಲಿ ಸಕಾರಾತ್ಮಕ ವಹಿವಾಟಿಗೆ ಕಾರಣವಾಯಿತು ಎಂದು ತಜ್ಞರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.