ADVERTISEMENT

ಮುಂಬೈ ಷೇರುಪೇಟೆ: ಸೆನ್ಸೆಕ್ಸ್‌ 525 ಅಂಶ ಇಳಿಕೆ

ಪಿಟಿಐ
Published 20 ಸೆಪ್ಟೆಂಬರ್ 2021, 19:15 IST
Last Updated 20 ಸೆಪ್ಟೆಂಬರ್ 2021, 19:15 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಮುಂಬೈ: ಜಾಗತಿಕ ಮಾರುಕಟ್ಟೆಗಳಲ್ಲಿ ಕಂಡುಬಂದ ಮಾರಾಟದ ಒತ್ತಡದಿಂದಾಗಿ ದೇಶದ ಷೇರುಪೇಟೆಗಳಲ್ಲಿ ಸೋಮವಾರ ವಹಿವಾಟು ಇಳಿಕೆ ಕಂಡಿತು.

ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ 525 ಅಂಶ ಇಳಿಕೆ ಕಂಡು 58,490 ಅಂಶಗಳಲ್ಲಿ ವಹಿವಾಟು ಅಂತ್ಯವಾಯಿತು. ದಿನದ ವಹಿವಾಟಿನಲ್ಲಿ ಹೂಡಿಕೆದಾರರ ಸಂಪ‍ತ್ತು ಮೌಲ್ಯವು ₹ 3.49 ಲಕ್ಷ ಕೋಟಿಗಳಷ್ಟು ಇಳಿಯಿತು. ಇದರಿಂದ ಬಿಎಸ್‌ಇನಲ್ಲಿ ನೋಂದಾಯಿತ ಕಂಪನಿಗಳ ಒಟ್ಟಾರೆ ಬಂಡವಾಳ ಮೌಲ್ಯವು ₹ 255.47 ಲಕ್ಷ ಕೋಟಿಗಳಿಗೆ ತಲುಪಿದೆ.

ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ 188 ಅಂಶ ಇಳಿಕೆ ಕಂಡು 17,397 ಅಂಶಗಳಲ್ಲಿ ವಹಿವಾಟು ಅಂತ್ಯವಾಗಿದೆ. ಟಾಟಾ ಸ್ಟೀಲ್‌ ಕಂಪನಿಯ ಷೇರು ಮೌಲ್ಯ ಶೇಕಡ 9.53ರಷ್ಟು ಇಳಿಕೆ ಕಂಡಿದೆ. ಬಿಎಸ್‌ಇ ಮಿಡ್‌ ಮತ್ತು ಸ್ಮಾಲ್‌ ಕ್ಯಾಪ್‌ ಸೂಚ್ಯಂಕಗಳು ಶೇ 1.84ರಷ್ಟು ಇಳಿಕೆ ಕಂಡವು.

ADVERTISEMENT

ಅಮೆರಿಕದ ಕೇಂದ್ರೀಯ ಬ್ಯಾಂಕ್‌ ಫೆಡರಲ್‌ ರಿಸರ್ವ್‌ನ ಮುಂಬರುವ ಸಭೆ ಮತ್ತು ಚೀನಾದ ರಿಯಲ್‌ ಎಸ್ಟೇಟ್‌ ಮಾರುಕಟ್ಟೆಯಲ್ಲಿನ ಅನಿಶ್ಚಿತ ಸ್ಥಿತಿಯು ಜಾಗತಿಕ ಹೂಡಿಕೆದಾರರ ಮೇಲೆ ಪರಿಣಾಮ ಉಂಟುಮಾಡಿದೆ ಎಂದು ಜೂಲಿಯಸ್‌ ಬೇರ್ ಕಂಪನಿಯ ಕಾರ್ಯನಿರ್ವಾಹಕ ನಿರ್ದೇಶಕ ಮಿಲಂದ್‌ ಮುಚಲ್‌ ಹೇಳಿದ್ದಾರೆ.

ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ಅಮೆರಿಕದ ಡಾಲರ್‌ ಎದುರು ರೂಪಾಯಿ ಮೌಲ್ಯ 26 ಪೈಸೆ ಇಳಿಕೆ ಆಗಿದ್ದು, ಒಂದು ಡಾಲರ್‌ಗೆ ₹ 73.74ರಂತೆ ವಿನಿಮಯಗೊಂಡಿತು. ಇದು ನಾಲ್ಕು ವಾರಗಳ ಕನಿಷ್ಠ ಮಟ್ಟವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.