ADVERTISEMENT

59 ಸಾವಿರದ ಗಡಿ ದಾಟಿದ ಸೆನ್ಸೆಕ್ಸ್

ಪಿಟಿಐ
Published 16 ಸೆಪ್ಟೆಂಬರ್ 2021, 15:25 IST
Last Updated 16 ಸೆಪ್ಟೆಂಬರ್ 2021, 15:25 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಮುಂಬೈ: ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ ಸೆನ್ಸೆಕ್ಸ್ ಗುರುವಾರದ ವಹಿವಾಟಿನಲ್ಲಿ ಮೊದಲ ಬಾರಿಗೆ 59 ಸಾವಿರದ ಗಡಿ ದಾಟಿತು.

ಸತತ ಮೂರನೇ ವಹಿವಾಟು ಅವಧಿಯಲ್ಲಿಯೂ ಏರಿಕೆ ಕಂಡ ಸೂಚ್ಯಂಕವು ಗುರುವಾರ 418 ಅಂಶ ಏರಿಕೆಯಾಗಿ ಸಾರ್ವಕಾಲಿಕ ಗರಿಷ್ಠ ಮಟ್ಟವಾದ 59,141ಕ್ಕೆ ತಲುಪಿತು. ಮಧ್ಯಂತರ ವಹಿವಾಟಿನಲ್ಲಿ 59,204 ಅಂಶಗಳ ದಾಖಲೆಯ ಮಟ್ಟಕ್ಕೂ ಏರಿಕೆ ಕಂಡಿತ್ತು.

ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ 110 ಅಂಶ ಹೆಚ್ಚಾಗಿ ಹೊಸ ಎತ್ತರವಾದ 17,629 ಅಂಶಗಳಲ್ಲಿ ವಹಿವಾಟು ಕೊನೆಗೊಳಿಸಿತು.

ADVERTISEMENT

ಆರ್ಥಿಕ ಸುಧಾರಣಾ ಕ್ರಮಗಳಿಂದಾಗಿ ದೇಶದ ಷೇರುಪೇಟೆಗಳು ದಾಖಲೆ ಮಟ್ಟದಲ್ಲಿ ವಹಿವಾಟು ನಡೆಸುತ್ತಿವೆ. ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ಗಳ ಷೇರುಗಳ ಉತ್ತಮ ಖರೀದಿ ವಹಿವಾಟಿನಿಂದಾಗಿ ಗುರುವಾರ ಷೇರುಪೇಟೆಗಳಲ್ಲಿ ಈ ಮಟ್ಟದ ಏರಿಕೆ ಕಂಡುಬಂದಿತು ಎಂದು ಜಿಯೋಜಿತ್‌ ಹಣಕಾಸು ಸೇವೆಗಳ ಸಂಶೋಧನಾ ಮುಖ್ಯಸ್ಥ ವಿನೋದ್‌ ನಾಯರ್‌ ಹೇಳಿದ್ದಾರೆ.

ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ಅಮೆರಿಕದ ಡಾಲರ್‌ ಎದುರು ರೂಪಾಯಿ ಮೌಲ್ಯವು 2 ಪೈಸೆ ಹೆಚ್ಚಾಗಿ ಒಂದು ಡಾಲರ್‌ಗೆ ₹ 73.52ರಂತೆ ವಿನಿಮಯಗೊಂಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.