ADVERTISEMENT

ಸಂಪತ್ತು ₹ 1.91 ಲಕ್ಷ ಕೋಟಿ ಹೆಚ್ಚಳ

​ಪ್ರಜಾವಾಣಿ ವಾರ್ತೆ
Published 18 ಜೂನ್ 2020, 20:59 IST
Last Updated 18 ಜೂನ್ 2020, 20:59 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಮುಂಬೈ (ಪಿಟಿಐ): ಹಣಕಾಸು ವಲಯದ ಷೇರುಗಳ ಉತ್ತಮ ಗಳಿಕೆಯಿಂದಾಗಿ ದೇಶದ ಷೇರುಪೇಟೆಗಳಲ್ಲಿ ಗುರುವಾರ ಸಕಾರಾ
ತ್ಮಕ ವಹಿವಾಟು ನಡೆಯಿತು.

ಮುಂಬೈ ಷೇರುಪೇಟೆ (ಬಿಎಸ್‌ಇ) ಸಂವೇದಿ ಸೂಚ್ಯಂಕ 700 ಅಂಶಗಳಷ್ಟು ಜಿಗಿತ ಕಂಡು 34,208 ಅಂಶಗಳಲ್ಲಿ ವಹಿವಾಟು ಅಂತ್ಯಗೊಂಡಿದೆ. ಇದರಿಂದಹೂಡಿಕೆದಾರರ ಸಂಪತ್ತು ₹ 1.91 ಲಕ್ಷ ಕೋಟಿಗಳಷ್ಟು ಹೆಚ್ಚಾಗಿದ್ದು,ಷೇರುಪೇಟೆಯ ಬಂಡವಾಳ ಮೌಲ್ಯ ₹ 135 ಲಕ್ಷ ಕೋಟಿಗಳಿಗೆ ಏರಿಕೆಯಾಗಿದೆ.

ರಾಷ್ಟ್ರೀಯ ಷೇರುಪೇಟೆ (ಎನ್‌ಎಸ್‌ಇ) ಸೂಚ್ಯಂಕ ನಿಫ್ಟಿ210 ಅಂಶ ಹೆಚ್ಚಾಗಿ 10,091ಅಂಶಗಳಿಗೆ ಏರಿಕೆಯಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.