ADVERTISEMENT

ಮೌಲ್ಯ ಹೆಚ್ಚಿಸಿಕೊಂಡ ರೂಪಾಯಿ

ಏಜೆನ್ಸೀಸ್
Published 28 ಆಗಸ್ಟ್ 2020, 19:35 IST
Last Updated 28 ಆಗಸ್ಟ್ 2020, 19:35 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ಮುಂಬೈ: ಡಾಲರ್‌ ಎದುರು ರೂಪಾಯಿ ಮೌಲ್ಯವು ಚೇತರಿಕೆಕಂಡುಕೊಂಡಿದೆ. 43 ಪೈಸೆಗಳಷ್ಟು ಮೌಲ್ಯ ಹೆಚ್ಚಿಸಿಕೊಂಡ ರೂಪಾಯಿ, ಶುಕ್ರವಾರದ ವಹಿವಾಟಿನಲ್ಲಿ ಪ್ರತಿ ಡಾಲರ್‌ಗೆ ₹ 73.39ಕ್ಕೆ ತಲುಪಿತು. ವಿದೇಶಿ ಹೂಡಿಕೆ ಹೆಚ್ಚುತ್ತಿರುವುದು ಇದಕ್ಕೆ ಒಂದು ಕಾರಣ.

ಗುರುವಾರದ ವಹಿವಾಟಿನಲ್ಲಿ ರೂಪಾಯಿ ಮೌಲ್ಯವು ಡಾಲರ್ ಎದುರು ₹ 73.82ರಷ್ಟಾಗಿತ್ತು. ದೇಶದ ಷೇರು ಮಾರುಕಟ್ಟೆಗಳಲ್ಲಿ ಸಕಾರಾತ್ಮಕ ವಹಿವಾಟು ನಡೆಯುತ್ತಿರುವುದು ಹಾಗೂ ಡಾಲರ್‌ ದುರ್ಬಲಗೊಂಡಿರುವುದು ಕೂಡ ರೂಪಾಯಿಯ ಮೌಲ್ಯ ಹೆಚ್ಚಾಗಿರುವುದಕ್ಕೆ ಕಾರಣ ಎನ್ನಲಾಗಿದೆ. ವಿದೇಶಿ ಸಾಂಸ್ಥಿಕ ಹೂಡಿಕೆದಾರರು ದೇಶದ ಬಂಡವಾಳ ಮಾರುಕಟ್ಟೆಯಲ್ಲಿ ಗುರುವಾರ ಒಟ್ಟು ₹ 1,164 ಕೋಟಿ ಮೌಲ್ಯದ ಷೇರುಗಳನ್ನು ಖರೀದಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT