ADVERTISEMENT

ಎಫ್‌ಪಿಐ: ಮಾರ್ಚ್‌ನಲ್ಲಿ ₹ 17,304 ಕೋಟಿ ಒಳಹರಿವು

ಪಿಟಿಐ
Published 4 ಏಪ್ರಿಲ್ 2021, 15:52 IST
Last Updated 4 ಏಪ್ರಿಲ್ 2021, 15:52 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ವಿದೇಶಿ ಬಂಡವಾಳ ಹೂಡಿಕೆದಾರರು (ಎಫ್‌ಪಿಐ) ಸತತ ಮೂರನೇ ತಿಂಗಳಿನಲ್ಲಿಯೂ ದೇಶದ ಮಾರುಕಟ್ಟೆಗಳಲ್ಲಿ ಉತ್ತಮ ಖರೀದಿ ವಹಿವಾಟು ನಡೆಸಿದ್ದಾರೆ. ಮಾರ್ಚ್‌ ತಿಂಗಳಿನಲ್ಲಿ ಒಟ್ಟಾರೆ ₹ 17,304 ಕೋಟಿ ಹೂಡಿಕೆ ಮಾಡಿದ್ದಾರೆ.

ವಿದೇಶಿ ಹೂಡಿಕೆದಾರರು ₹ 10,482 ಕೋಟಿ ಮೌಲ್ಯದ ಷೇರುಗಳನ್ನು ಹಾಗೂ ₹ 6,822 ಕೋಟಿ ಮೌಲ್ಯದ ಸಾಲಪತ್ರಗಳನ್ನು ಖರೀದಿಸಿದ್ದಾರೆ ಎನ್ನುವ ಮಾಹಿತಿಯು ನ್ಯಾಷನಲ್‌ ಸೆಕ್ಯುರಿಟಿ ಡೆಪಾಸಿಟರಿ ಲಿಮಿಟೆಡ್‌ನಲ್ಲಿದೆ (ಎನ್‌ಎಸ್‌ಡಿಎಲ್‌).

ಕೋವಿಡ್‌–19 ಪ್ರಕರಣಗಳು ಹೆಚ್ಚಾಗುತ್ತಿರುವುದು ದೇಶದ ಮಾರುಕಟ್ಟೆಗಳಲ್ಲಿ ಹೂಡಿಕೆ ಮೇಲೆ ಪರಿಣಾಮ ಬೀರುತ್ತಿದೆ. ಹೀಗಿದ್ದರೂ ಲಸಿಕೆ ಲಭ್ಯವಾಗುತ್ತಿರುವುದು ಹಾಗೂ ಆರ್ಥಿಕತೆಯು ಚೇತರಿಕೆ ಕಾಣುತ್ತಿರುವುದರಿಂದಾಗಿ ಎರಡನೇ ಅಲೆಯ ಸಂದರ್ಭದಲ್ಲಿಯೂ ಮಾರುಕಟ್ಟೆಯು ಸ್ಥಿರವಾಗಿಯೇ ಇದೆ ಎಂದು ಗ್ರೋವ್ ಸಂಸ್ಥೆಯ ಸಹ ಸ್ಥಾಪಕ ಹರ್ಷ್‌ ಜೈನ್‌ ಹೇಳಿದ್ದಾರೆ.

ADVERTISEMENT

ಭಾರತದ ಆರ್ಥಿಕ ಬೆಳವಣಿಗೆಯ ಪ್ರಮಾಣ ಮತ್ತು ಹೇಗೆ ದೇಶದ ಆರ್ಥಿಕತೆಯು ಮತ್ತೆ ಪ‍್ರಗತಿಯ ಹಾದಿಗೆ ಮರಳಲಿದೆ ಎನ್ನುವುದನ್ನು ವಿದೇಶಿ ಹೂಡಿಕೆದಾರರು ಗಮನಿಸಲಿದ್ದಾರೆ. ಇವುಗಳಲ್ಲಿ ಯಾವುದೇ ಅಚ್ಚರಿಯ ಬೆಳವಣಿಗೆ ಕಂಡುಬಂದರೂ ಅದು ಒಳಹರಿವಿನ ಮೇಲೆ ಪರಿಣಾಮ ಉಂಟುಮಾಡುವ ಸಾಧ್ಯತೆ ಇದೆ ಎಂದು ಮಾರ್ನಿಂಗ್‌ಸ್ಟಾರ್‌ ಇಂಡಿಯಾದ ಸಹಾಯಕ ನಿರ್ದೇಶಕ ಹಿಮಾಂಶು ಶ್ರೀವಾಸ್ತವ ಹೇಳಿದ್ದಾರೆ.

ಅಂಕಿ–ಅಂಶ

ಹೂಡಿಕೆ ವಿವರ (ಕೋಟಿಗಳಲ್ಲಿ)

ಜನವರಿ;₹ 14,649

ಫೆಬ್ರುವರಿ;₹ 23,663

ಮಾರ್ಚ್‌;₹ 17,304

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.