ADVERTISEMENT

ಸಾಮಾಜಿಕ ಭದ್ರತಾ ಯೋಜನೆ: ಆಧಾರ್‌ ಮಾಹಿತಿ ಕೇಳಿದ ಸಚಿವಾಲಯ

​ಪ್ರಜಾವಾಣಿ ವಾರ್ತೆ
Published 5 ಮೇ 2021, 16:07 IST
Last Updated 5 ಮೇ 2021, 16:07 IST

ನವದೆಹಲಿ: ಸಾಮಾಜಿಕ ಭದ್ರತಾ ಸಂಹಿತೆ 2020ರ ಅಡಿಯಲ್ಲಿ ವಿವಿಧ ಯೋಜನೆಗಳಿಗೆ ನೋಂದಣಿ, ಸೇವೆಗಳನ್ನು ಪಡೆಯಲುಉದ್ಯೋಗಿಗಳು ಮತ್ತು ಅಸಂಘಟಿತ ವಲಯದ ಕಾರ್ಮಿಕರು ಆಧಾರ್‌ ಸಂಖ್ಯೆ ನೀಡಬೇಕು ಎಂದು ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಹೇಳಿದೆ.

‘ಸಂಹಿತೆಯಡಿ, ಫಲಾನುಭವಿಗಳ ಆಧಾರ್ ಸಂಖ್ಯೆಯನ್ನು ಸಂಗ್ರಹಿಸಲು ಆರಂಭಿಸುತ್ತೇವೆ. ವಲಸೆ ಕಾರ್ಮಿಕರನ್ನೂ ಒಳಗೊಂಡು ಅಸಂಘಟಿತ ವಲಯದ ಕಾರ್ಮಿಕರ ದತ್ತಾಂಶ ದಾಖಲಿಸಲು ಆಧಾರ್‌ ಅಗತ್ಯ. ಆದರೆ, ಆಧಾರ್‌ ಮಾಹಿತಿ ಕೊಡದೇ ಇರುವ ಕಾರಣಕ್ಕಾಗಿ ಸೇವೆಗಳನ್ನು ನಿರಾಕರಿಸುವಂತಿಲ್ಲ’ ಎಂದು ಕಾರ್ಮಿಕ ಕಾರ್ಯದರ್ಶಿ ಅಪೂರ್ವಚಂದ್ರ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT