ADVERTISEMENT

ಸತತ ಎರಡನೆಯ ದಿನವೂ ಸೆನ್ಸೆಕ್ಸ್ ಏರಿಕೆ

ಪಿಟಿಐ
Published 27 ಏಪ್ರಿಲ್ 2021, 15:52 IST
Last Updated 27 ಏಪ್ರಿಲ್ 2021, 15:52 IST

ಮುಂಬೈ: ಬ್ಯಾಂಕಿಂಗ್ ಮತ್ತು ಹಣಕಾಸು ವಲಯದ ಷೇರುಗಳು, ರಿಲಯನ್ಸ್‌ ಇಂಡಸ್ಟ್ರೀಸ್‌ ಲಿಮಿಟೆಡ್‌ನ ಷೇರುಗಳ ಖರೀದಿಯು ಷೇರು ಮಾರುಕಟ್ಟೆಯಲ್ಲಿ ಮಂಗಳವಾರ ಜೋರಾಗಿ ನಡೆದ ಕಾರಣ ಷೇರುಪೇಟೆ ಸೂಚ್ಯಂಕಗಳು ಸತತ ಎರಡನೆಯ ದಿನವೂ ಏರಿಕೆ ದಾಖಲಿಸಿದವು.

ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ ಸೆನ್ಸೆಕ್ಸ್ 557 ಅಂಶ ಏರಿಕೆ ಕಂಡಿತು. ರಾಷ್ಟ್ರೀಯ ಷೇರುಪೇಟೆ ಸಂವೇದಿ ಸೂಚ್ಯಂಕ ನಿಫ್ಟಿ 168 ಅಂಶ ಏರಿಕೆ ದಾಖಲಿಸಿತು. ಎಲ್‌ಆ್ಯಂಡ್‌ಟಿ, ಬಜಾಜ್ ಫೈನಾನ್ಸ್, ರಿಲಯನ್ಸ್, ಇಂಡಸ್‌ಇಂಡ್‌ ಬ್ಯಾಂಕ್, ಎಸ್‌ಬಿಐ, ಎಚ್‌ಡಿಎಫ್‌ಸಿ ಬ್ಯಾಂಕ್‌ ಮತ್ತು ಭಾರ್ತಿ ಏರ್‌ಟೆಲ್ ಷೇರುಗಳು ಗಳಿಕೆ ಕಂಡವು.

ಮಾರುತಿ ಸುಜುಕಿ ಷೇರುಗಳು ಹೆಚ್ಚಿನ ಕುಸಿತ ದಾಖಲಿಸಿದವು. ಎನ್‌ಟಿಪಿಸಿ, ಕೋಟಕ್ ಬ್ಯಾಂಕ್, ನೆಸ್ಲೆ ಇಂಡಿಯಾ, ಮಹೀಂದ್ರ ಆ್ಯಂಡ್ ಮಹೀಂದ್ರ, ಡಾ ರೆಡ್ಡೀಸ್ ಮತ್ತು ಎಕ್ಸಿಸ್ ಬ್ಯಾಂಕ್ ಷೇರುಗಳು ಇಳಿಕೆ ಕಂಡವು. ಅಮೆರಿಕದ ಡಾಲರ್ ಎದುರು ರೂಪಾಯಿ ಮೌಲ್ಯದಲ್ಲಿ ಏಳು ಪೈಸೆ ಹೆಚ್ಚಳ ಆಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.