ADVERTISEMENT

ಆರ್‌ಬಿಐ ಬಡ್ಡಿದರಗಳಲ್ಲಿ ಯಥಾಸ್ಥಿತಿ: ಸೆನ್ಸೆಕ್ಸ್‌ ಏರಿಕೆ

ಪಿಟಿಐ
Published 7 ಏಪ್ರಿಲ್ 2021, 15:06 IST
Last Updated 7 ಏಪ್ರಿಲ್ 2021, 15:06 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಮುಂಬೈ: ಮಾರುಕಟ್ಟೆಯ ನಿರೀಕ್ಷೆಯಂತೆಯೇ ಆರ್‌ಬಿಐ ಬಡ್ಡಿದರಗಳಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿದ್ದು, ಆರ್ಥಿಕ ಚೇತರಿಕೆಗೆ ಹೊಂದಾಣಿಕೆಯ ನಿಲುವು ಮುಂದುವರಿಸುವುದಾಗಿ ಹೇಳಿದ್ದು ಷೇರುಪೇಟೆ ಸೂಚ್ಯಂಕಗಳು ಬುಧವಾರ ಏರುಗತಿಯಲ್ಲಿ ಸಾಗುವಂತೆ ಮಾಡಿದವು.

ಬ್ಯಾಂಕಿಂಗ್‌, ವಾಹನ ಮತ್ತು ಮಾಹಿತಿ ತಂತ್ರಜ್ಞಾನ ವಲಯದ ಷೇರುಗಳ ಏರಿಕೆಯು ಸಕಾರಾತ್ಮಕ ವಹಿವಾಟಿಗೆ ಕಾರಣವಾದವು.

ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ 460 ಅಂಶ ಏರಿಕೆಯಾಗಿ 49,661 ಅಂಶಗಳಲ್ಲಿ ವಹಿವಾಟು ಅಂತ್ಯವಾಯಿತು. ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ 136 ಅಂಶ ಹೆಚ್ಚಾಗಿ 14,819 ಅಂಶಗಳಿಗೆ ತಲುಪಿತು.

ADVERTISEMENT

ದಿನದ ವಹಿವಾಟಿನಲ್ಲಿ ಎಸ್‌ಬಿಇ ಷೇರು ಶೇಕಡ 2.25ರಷ್ಟು ಗರಿಷ್ಠ ಏರಿಕೆ ಕಂಡಿತು. ಬಿಎಸ್‌ಇ ಮಿಡ್‌ ಮತ್ತು ಸ್ಮಾಲ್ ಕ್ಯಾಪ್ ಸೂಚ್ಯಂಕ ಶೇ 1.30ರವರೆಗೂ ಏರಿಕೆಯಾಗಿವೆ.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬ್ರೆಂಟ್ ತೈಲ ದರ ಶೇ 0.37ರಷ್ಟು ಇಳಿಕೆಯಾಗಿ ಒಂದು ಬ್ಯಾರಲ್‌ಗೆ ₹ 62.97 ಡಾಲರ್‌ಗಳಿಗೆ ತಲುಪಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.