ADVERTISEMENT

ಐದು ದಿನಗಳಲ್ಲಿ ಕರಗಿತು ₹ 8 ಲಕ್ಷ ಕೋಟಿ

ಪಿಟಿಐ
Published 18 ಮಾರ್ಚ್ 2021, 14:56 IST
Last Updated 18 ಮಾರ್ಚ್ 2021, 14:56 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಮುಂಬೈ: ದೇಶದ ಷೇರುಪೇಟೆಗಳಲ್ಲಿ ಸತತ ಐದನೆ ದಿನವೂ ನಕಾರಾತ್ಮಕ ವಹಿವಾಟು ನಡೆದಿದೆ. ಇದರಿಂದಾಗಿ ಹೂಡಿಕೆದಾರರ ಸಂಪತ್ತು ₹ 8 ಲಕ್ಷ ಕೋಟಿಗಳಷ್ಟು ಕರಗಿದ್ದು, ಷೇರುಪೇಟೆಯ ಬಂಡವಾಳ ಮೌಲ್ಯ ₹ 201.22 ಲಕ್ಷ ಕೋಟಿಗಳಿಗೆ ಇಳಿಕೆಯಾಗಿದೆ.

ದೇಶದಲ್ಲಿ ಕೋವಿಡ್‌–19 ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳ ಹಾಗೂ ಅಮೆರಿಕದ ಬಾಂಡ್‌ ಗಳಿಕೆ ಶೇ 1.72ರಷ್ಟು ಏರಿಕೆಯಾಗಿರುವುದರಿಂದ ಸೂಚ್ಯಂಕಗಳು ಇಳಿಕೆ ಕಾಣುವಂತಾಗಿದೆ ಎಂದು ತಜ್ಞರು ಹೇಳಿದ್ದಾರೆ.

ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ 585 ಅಂಶ ಇಳಿಕೆಯಾಗಿ 49,217 ಅಂಶಗಳಿಗೆ ತಲುಪಿತು. ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ 163 ಅಂಶ ಇಳಿಕೆ ಕಂಡು 14,558 ಅಂಶಗಳಲ್ಲಿ ವಹಿವಾಟು ಅಂತ್ಯವಾಗಿದೆ.

ADVERTISEMENT

ಐದು ದಿನಗಳ ವಹಿವಾಟಿನಲ್ಲಿ ಸೆನ್ಸೆಕ್ಸ್ 2,063 ಅಂಶ ಹಾಗೂ ನಿಫ್ಟಿ 617 ಅಂಶಗಳಷ್ಟು ಇಳಿಕೆ ಕಂಡಿವೆ. ಬಿಎಸ್‌ಇ ಮಿಡ್‌ ಮತ್ತು ಸ್ಮಾಲ್‌ ಕ್ಯಾಪ್‌ ಸೂಚ್ಯಂಕಗಳು ಶೇ 1.58ರವರೆಗೂ ಇಳಿಕೆ ಕಂಡಿವೆ.

ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ಡಾಲರ್‌ ಎದುರು ರೂಪಾಯಿ ಮೌಲ್ಯ 2 ಪೈಸೆ ಹೆಚ್ಚಾಗಿ ಒಂದು ಡಾಲರ್‌ಗೆ ₹ 72.53ರಂತೆ ವಿನಿಮಯಗೊಂಡಿತು. ಬ್ರೆಂಟ್‌ ಕಚ್ಚಾತೈಲ ದರ ಶೇ 0.40ರಷ್ಟು ಇಳಿಕೆಯಾಗಿ ಒಂದು ಬ್ಯಾರಲ್‌ಗೆ 67.73 ಡಾಲರ್‌ಗಳಿಗೆ ತಲುಪಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.