ADVERTISEMENT

ಮಧ್ಯಪ್ರದೇಶದಲ್ಲಿ ಬಿಎಸ್‍ಪಿ -ಕಾಂಗ್ರೆಸ್ ಮೈತ್ರಿ

​ಪ್ರಜಾವಾಣಿ ವಾರ್ತೆ
Published 2 ಜೂನ್ 2018, 9:22 IST
Last Updated 2 ಜೂನ್ 2018, 9:22 IST
ಮಧ್ಯಪ್ರದೇಶದಲ್ಲಿ ಬಿಎಸ್‍ಪಿ -ಕಾಂಗ್ರೆಸ್ ಮೈತ್ರಿ
ಮಧ್ಯಪ್ರದೇಶದಲ್ಲಿ ಬಿಎಸ್‍ಪಿ -ಕಾಂಗ್ರೆಸ್ ಮೈತ್ರಿ   

ನವದೆಹಲಿ: 15 ವರ್ಷಗಳ ಕಾಲ ಮಧ್ಯಪ್ರದೇಶದಲ್ಲಿ ಆಡಳಿತ ನಡೆಸಿದ ಬಿಜೆಪಿಯನ್ನು ಎದುರಿಸಲು ಬಿಎಸ್‌ಪಿ ಜತೆ ಕಾಂಗ್ರೆಸ್ ಕೈ ಜೋಡಿಸಲಿದೆ.
ಬಿಎಸ್‍ಪಿ ಜತೆ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಪ್ರಾಥಮಿಕ ಹಂತದ ಮಾತುಕತೆಗಳು ಆರಂಭವಾಗಿವೆ. ಹೀಗಾಗಿ ವಿಧಾನಸಭಾ ಚುನಾವಣೆಯಲ್ಲಿ ಉಭಯ ಪಕ್ಷಗಳು ಜತೆಯಾಗುವುದು ಬಹುತೇಕ ಖಚಿತವಾಗಿದೆ.

2019ರಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಗೆ ಮುನ್ನ ಮಧ್ಯಪ್ರದೇಶದಲ್ಲಿ ನಡೆಯಲಿರುವ ಚುನಾವಣೆ ಬಿಎಸ್‍ಪಿ-ಕಾಂಗ್ರೆಸ್ ಮೈತ್ರಿಗೆ ಸೆಮಿಫೈನಲ್‍ನಂತಾಗಲಿದೆ ಎಂದು ಬಲ್ಲಮೂಲಗಳು ಹೇಳಿವೆ.

ಕರ್ನಾಟಕ ಚುನಾವಣೆಯಲ್ಲಿ ಬಿಎಸ್‍ಪಿ ಎಚ್.ಡಿ.ದೇವೇಗೌಡರ ಜನತಾದಳ (ಜಾತ್ಯಾತೀತ) ಪಕ್ಷಕ್ಕೆ ಬೆಂಬಲ ಸೂಚಿಸಿತ್ತು.

ADVERTISEMENT

ಮಧ್ಯಪ್ರದೇಶದಲ್ಲಿ ಬಿಸ್‍ಪಿ ಜತೆ ಕೈ ಜೋಡಿಸಲು ಕಾಂಗ್ರೆಸ್ ಕಾಯುತ್ತಿದ್ದು, ಬಿಜೆಪಿ ವಿರುದ್ಧ ಚುನಾವಣೆ ಎದುರಿಸಲು ಕಾರ್ಯತಂತ್ರ ರೂಪಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.