ADVERTISEMENT

5,211 ಮಂದಿಗೆ ವಿದ್ಯಾರ್ಥಿವೇತನ

​ಪ್ರಜಾವಾಣಿ ವಾರ್ತೆ
Published 3 ಏಪ್ರಿಲ್ 2018, 19:30 IST
Last Updated 3 ಏಪ್ರಿಲ್ 2018, 19:30 IST

ಬೆಂಗಳೂರು: ‘ಪಿಇಎಸ್‌ ವಿಶ್ವವಿದ್ಯಾಲಯದ ಪ್ರತಿಭಾವಂತ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಒಟ್ಟು ₹ 2.99 ಕೋಟಿ ಮೊತ್ತದ ವಿದ್ಯಾರ್ಥಿವೇತನಗಳನ್ನು ನೀಡಲಾಗುತ್ತದೆ. ಬುಧವಾರ ನಡೆಯುವ ಕಾಲೇಜಿನ ಸಂಸ್ಥಾಪನಾ ದಿನಾಚರಣೆಯಲ್ಲಿ ಇದನ್ನು ವಿತರಿಸಲಾಗುತ್ತದೆ’ ಎಂದು ಪಿಇಎಸ್‌ ವಿದ್ಯಾಸಂಸ್ಥೆಗಳ ಸಂಸ್ಥಾಪಕ ಡಾ.ಎಂ.ಆರ್‌.ದೊರೆಸ್ವಾಮಿ ಅವರು ತಿಳಿಸಿದರು.

ಮಂಗಳವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ವಿವಿಧ ವಿಭಾಗಗಳಲ್ಲಿ ಅಧ್ಯಯನ ಮಾಡುತ್ತಿರುವ 5,211 ವಿದ್ಯಾರ್ಥಿಗಳಿಗೆ ಸಿ.ಎನ್‌.ಆರ್.ವಿದ್ಯಾರ್ಥಿವೇತನ, ಎಂ.ಆರ್‌.ಡಿ. ಪ್ರತಿಭಾ ಪುರಸ್ಕಾರ ಹಾಗೂ ಡಿಸ್ಟಿಂಕ್ಷನ್‌ ಪ್ರಶಸ್ತಿ ನೀಡುತ್ತಿದ್ದೇವೆ’ ಎಂದು ತಿಳಿಸಿದರು.

‘ಶೇ 85ಕ್ಕೂ ಹೆಚ್ಚು ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳಿಗೆ ಸಿ.ಎನ್‌.ಆರ್‌.ವಿದ್ಯಾರ್ಥಿವೇತನದಡಿ ಕನಿಷ್ಠ ₹8,000 ದಿಂದ ಗರಿಷ್ಠ ₹ 90,000 ವರೆಗೆ ನೀಡಲಾಗುತ್ತದೆ. ಈ ಬಾರಿ 1,273 ವಿದ್ಯಾರ್ಥಿಗಳು ಇದಕ್ಕೆ ಅರ್ಹರಾಗಿದ್ದಾರೆ ಎಂದು ಅವರು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.