ADVERTISEMENT

ಅಪೌಷ್ಟಿಕ ಮಕ್ಕಳ ಆರೋಗ್ಯ ತಪಾಸಣೆ

​ಪ್ರಜಾವಾಣಿ ವಾರ್ತೆ
Published 17 ಸೆಪ್ಟೆಂಬರ್ 2021, 4:45 IST
Last Updated 17 ಸೆಪ್ಟೆಂಬರ್ 2021, 4:45 IST
ಹೊಸಕೋಟೆಯ ಎಂವಿಜೆ ಆಸ್ಪತ್ರೆಯಲ್ಲಿ ಅಪೌಷ್ಟಿಕ ಮಕ್ಕಳ ಆರೋಗ್ಯ ತಪಾಸಣಾ ಶಿಬಿರ ನಡೆಯಿತು. ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಸತೀಶ್, ಎಂವಿಜೆ ಆಸ್ಪತ್ರೆಯ ಡಾ.ಪ್ರಮೋದ್, ಹಿರಿಯ ಆರೋಗ್ಯ ನಿರೀಕ್ಷಕ ಗುರುರಾಜ್ ಹಾಜರಿದ್ದರು
ಹೊಸಕೋಟೆಯ ಎಂವಿಜೆ ಆಸ್ಪತ್ರೆಯಲ್ಲಿ ಅಪೌಷ್ಟಿಕ ಮಕ್ಕಳ ಆರೋಗ್ಯ ತಪಾಸಣಾ ಶಿಬಿರ ನಡೆಯಿತು. ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಸತೀಶ್, ಎಂವಿಜೆ ಆಸ್ಪತ್ರೆಯ ಡಾ.ಪ್ರಮೋದ್, ಹಿರಿಯ ಆರೋಗ್ಯ ನಿರೀಕ್ಷಕ ಗುರುರಾಜ್ ಹಾಜರಿದ್ದರು   

ಹೊಸಕೋಟೆ: ತಾಲ್ಲೂಕಿನಲ್ಲಿರುವ ಅಪೌಷ್ಟಿಕ ಮಕ್ಕಳ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ ನಗರದ ಎಂವಿಜೆ ಆಸ್ಪತ್ರೆಯಲ್ಲಿ ನಡೆಯಿತು.

ಸುಮಾರು 145 ಮಕ್ಕಳು ಶಿಬಿರದಲ್ಲಿ ತಪಾಸಣೆಗೆ ಒಳಪಟ್ಟರು. ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ತಾಲ್ಲೂಕಿನ ವಿವಿಧ ಹಳ್ಳಿಗಳಿಂದ ಪೋಷಕರೊಂದಿಗೆ ಮಕ್ಕಳನ್ನು ಕರೆತಂದಿದ್ದರು.

ಶಿಬಿರದಲ್ಲಿ ಆರ್‌ಬಿಎಸ್‌‌ಕೆ ತಂಡ, ಎಂವಿಜೆ ಆಸ್ಪತ್ರೆ ಮಕ್ಕಳ ತಜ್ಞ ವೈದ್ಯರು, ತಾಲ್ಲೂಕು ಅರೋಗ್ಯ ಅಧಿಕಾರಿ ಡಾ.ಸತೀಶ್, ಶಿಬಿರದ ಮೇಲುಸ್ತುವಾರಿ ಅಧಿಕಾರಿ ಡಾ.ಭಾಸ್ಕರ್ ರೆಡ್ಡಿ, ಎಂವಿಜೆ ಆಸ್ಪತ್ರೆಯ ಮುಖ್ಯಸ್ಥ ಡಾ.ಪ್ರಮೋದ್, ಹಿರಿಯ ಅರೋಗ್ಯ ನಿರೀಕ್ಷಕ ಗುರುರಾಜ್, ಆಶಾ ಮೇಲ್ವಿಚಾರಕಿ ಮಹಾದೇವಿ, ಹಿರಿಯ ಪ್ರಾಥಮಿಕ ಸುರಕ್ಷಾ ಅಧಿಕಾರಿ ಲತಾ
ಹಾಜರಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.