ADVERTISEMENT

ನಗರಸಭೆ: ಬಿಜೆಪಿಗೆ ಅಧಿಕಾರದ ವಿಶ್ವಾಸ

​ಪ್ರಜಾವಾಣಿ ವಾರ್ತೆ
Published 17 ಸೆಪ್ಟೆಂಬರ್ 2021, 4:30 IST
Last Updated 17 ಸೆಪ್ಟೆಂಬರ್ 2021, 4:30 IST
ದೊಡ್ಡಬಳ್ಳಾಪುರ ನಗರಸಭೆಯಲ್ಲಿ ಆಯ್ಕೆಯಾದ ಬಿಜೆಪಿಯ ನೂತನ ಸದಸ್ಯರನ್ನು ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಕಂದಾಯ ಸಚಿವ ಆರ್. ಅಶೋಕ ಅಭಿನಂದಿಸಿದರು. ಬಿಜೆಪಿ ಜಿಲ್ಲಾ ಅಧ್ಯಕ್ಷ ನಾರಾಯಣಸ್ವಾಮಿ ಸೇರಿದಂತೆ ಪದಾಧಿಕಾರಿಗಳು ಹಾಜರಿದ್ದರು
ದೊಡ್ಡಬಳ್ಳಾಪುರ ನಗರಸಭೆಯಲ್ಲಿ ಆಯ್ಕೆಯಾದ ಬಿಜೆಪಿಯ ನೂತನ ಸದಸ್ಯರನ್ನು ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಕಂದಾಯ ಸಚಿವ ಆರ್. ಅಶೋಕ ಅಭಿನಂದಿಸಿದರು. ಬಿಜೆಪಿ ಜಿಲ್ಲಾ ಅಧ್ಯಕ್ಷ ನಾರಾಯಣಸ್ವಾಮಿ ಸೇರಿದಂತೆ ಪದಾಧಿಕಾರಿಗಳು ಹಾಜರಿದ್ದರು   

ದೊಡ್ಡಬಳ್ಳಾಪುರ: ‘ನಗರಸಭೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದು ಖಚಿತವಾಗಿದ್ದು, ಈ ಕುರಿತಂತೆ ಮಾತುಕತೆ ನಡೆಯುತ್ತಿದೆ ಎಂದು ಕಂದಾಯ ಸಚಿವ ಆರ್. ಅಶೋಕ ಭರವಸೆ ನೀಡಿದ್ದಾರೆ’ ಎಂದು ಬಿಜೆಪಿ ನಗರ ಘಟಕದ ಅಧ್ಯಕ್ಷ ಹಾಗೂ ನಗರಸಭಾ ಸದಸ್ಯ ಎಚ್.ಎಸ್. ಶಿವಶಂಕರ್ ತಿಳಿಸಿದರು.

ಬುಧವಾರ ಸಂಜೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ನಗರಸಭೆಯ ನೂತನ ಸದಸ್ಯರಿಗೆ ಕಂದಾಯ ಸಚಿವ ಅಶೋಕ ಅವರಿಂದ ನಡೆದ ಅಭಿನಂದನೆ ಸ್ವೀಕರಿಸಲಾಗಿದೆ. ನಗರಸಭೆಯಲ್ಲಿ ಬಿಜೆಪಿ ಅಧಿಕಾರ ಪಡೆಯುವ ಕುರಿತು ಮೈತ್ರಿ ಸಚಿವರೇ ಬಗ್ಗೆ ಉಸ್ತುವಾರಿ ತೆಗೆದುಕೊಂಡಿದ್ದಾರೆ. ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರೊಂದಿಗೆ ಕೂಡ ಮಾತುಕತೆ ನಡೆಸಿದ್ದಾರೆ ಎಂದು ಹೇಳಿದರು.

ನಗರಸಭೆ ಚುನವಣೆಯಲ್ಲಿ ವಿಜೇತರಾದ 12 ಮಂದಿಯನ್ನು ಅಭಿನಂದಿಸಿರುವ ಸಚಿವರು, ಉತ್ತಮ ಕೆಲಸ ಮಾಡುವ ಮೂಲಕ ಜನರ ವಿಶ್ವಾಸಗಳಿಸಬೇಕು. ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರ್ಕಾರದ ಜನಪರ ಕಾರ್ಯಗಳನ್ನು ಜನರಿಗೆ ತಿಳಿಸಿೇಕು. ಪಕ್ಷಕ್ಕೆ ಸಂಘಟನೆ ಮಾಡುವಂತೆ ನೂತನ ಸದಸ್ಯರಿಗೆ ಸಲಹೆ ನೀಡಿದ್ದಾರೆ
ಎಂದರು.

ADVERTISEMENT

ಬಿಜೆಪಿ ಸದಸ್ಯರಾದ ಎನ್. ಪದ್ಮನಾಭ, ವೆಂಕಟೇಶ್, ಆರ್. ಲಕ್ಷ್ಮೀಪತಿ, ಎಸ್. ವತ್ಸಲ, ಆರ್. ಶಿವಣ್ಣ, ಎಸ್.ಎ. ಭಾಸ್ಕರ್, ಶಿವರಾಜ್, ಆರ್. ಹಂಸಪ್ರಿಯ, ಸುಮಿತ್ರಾ ಆನಂದ್, ನಾಗರತ್ನಮ್ಮ, ಸುಧಾ
ಲಕ್ಷ್ಮೀನಾರಾಯಣ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.