ADVERTISEMENT

ನನಗೂ ಸಚಿವ ಸ್ಥಾನ ಬೇಕು, ಇಲ್ಲವಾದರೆ ವಿಧಾನಸಭೆ ಉಪಾಧ್ಯಕ್ಷ ಸ್ಥಾನವೂ ಬೇಡ: ಮಾಮನಿ

​ಪ್ರಜಾವಾಣಿ ವಾರ್ತೆ
Published 27 ಜುಲೈ 2021, 10:41 IST
Last Updated 27 ಜುಲೈ 2021, 10:41 IST
ಸವದತ್ತಿ–ಯಲ್ಲಮ್ಮ ಕ್ಷೇತ್ರದ ಶಾಸಕ ಆನಂದ ಮಾಮನಿ
ಸವದತ್ತಿ–ಯಲ್ಲಮ್ಮ ಕ್ಷೇತ್ರದ ಶಾಸಕ ಆನಂದ ಮಾಮನಿ   

ಬೆಳಗಾವಿ: ‘ನೂತನ ಸಚಿವ ಸಂಪುಟದಲ್ಲಿ ನನಗೂ ಸ್ಥಾನ ಕೊಡಬೇಕು. ಇಲ್ಲವಾದಲ್ಲಿ ವಿಧಾನಸಭೆ ಉಪಾಧ್ಯಕ್ಷ ಸ್ಥಾನವೂ ಬೇಡ’ ಎಂದು ಸವದತ್ತಿ–ಯಲ್ಲಮ್ಮ ಕ್ಷೇತ್ರದ ಶಾಸಕ ಆನಂದ ಮಾಮನಿ ಎಚ್ಚರಿಕೆ ನೀಡಿದ್ದಾರೆ.

ಈ ಬಗ್ಗೆ ವಿಡಿಯೊ ಹೇಳಿಕೆ ಬಿಡುಗಡೆ ಮಾಡಿರುವ ಅವರು, ‘2008ರಿಂದ ಸತತವಾಗಿ ಮೂರು ಬಾರಿ ಶಾಸಕನಾಗಿ ಕ್ಷೇತ್ರದ ಅಭಿವೃದ್ಧಿಗೆ ಹಗಲಿರುಳೂ ಶ್ರಮಿಸುತ್ತಿದ್ದೇನೆ. ಜನರಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳನ್ನು ತಲುಪಿಸಲು ಶ್ರಮಿಸಿದ್ದೇನೆ. ಪಕ್ಷಕ್ಕಾಗಿ ದುಡಿದಿದ್ದೇನೆ. ಈ ಬಾರಿ ಸಚಿವ ಸ್ಥಾನ ನೀಡಬೇಕು. ಒಂದು ವೇಳೆ ಕೊಡದಿದ್ದರೆ ವಿಧಾನಸಭೆ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ’ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.