ಬೆಳಗಾವಿ: ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಕುದ್ರೇಮನಿ ಗ್ರಾಮದ ಮನೆಯೊಂದರಲ್ಲಿ ಇಟ್ಟಿದ್ದ ಅಪಾರ ಸಂಖ್ಯೆಯ ಟಿಫಿನ್ ಬಾಕ್ಸ್ಗಳನ್ನು ಪೊಲೀಸರು ಭಾನುವಾರ ರಾತ್ರಿ ವಶಪಡಿಸಿಕೊಂಡಿದ್ದಾರೆ.
ಈ ಟಿಫಿನ್ ಬಾಕ್ಸ್ಗಳ ಮೇಲೆ ಬಿಜೆಪಿ ಟಿಕೆಟ್ ಆಕಾಂಕ್ಷಿ, ಶಾಸಕ ರಮೇಶ ಜಾರಕಿಹೊಳಿ ಅವರ ಆಪ್ತರಾದ ನಾಗೇಶ ಮನ್ನೋಳಕರ ಅವರ ಭಾವಚಿತ್ರವಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಮತದಾರರಿಗೆ ಆಮಿಷ ಒಡ್ಡಲು ಈ ಟಿಫಿನ್ ಬಾಕ್ಸ್ ಸಂಗ್ರಹಿಸಿ ಇಡಲಾದ ಬಗ್ಗೆ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.