ADVERTISEMENT

ಲಂಚ: ಇಬ್ಬರು ಅಧಿಕಾರಿಗಳು ಎಸಿಬಿ ಬಲೆಗೆ

​ಪ್ರಜಾವಾಣಿ ವಾರ್ತೆ
Published 22 ಸೆಪ್ಟೆಂಬರ್ 2021, 9:43 IST
Last Updated 22 ಸೆಪ್ಟೆಂಬರ್ 2021, 9:43 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಳಗಾವಿ: ಗ್ರಾಮೀಣ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆ ಅಥಣಿಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಹಾಗೂ ಕಚೇರಿಯ ವ್ಯವಸ್ಥಾಪಕ ಲಂಚ ಪಡೆಯುವಾಗ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ದ ಬಲೆಗೆ ಬುಧವಾರ ಬಿದ್ದಿದ್ದಾರೆ.

ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ರಾಜೇಂದ್ರ ಇಂದ್ರಪ್ಪ ಪರಣಾಕರ ಹಾಗೂ ವ್ಯವಸ್ಥಾಪಕ ದೀಪಕ ಕೃಷ್ಣಾಜಿ ಕುಲಕರ್ಣಿ ಬಲೆಗೆ ಬಿದ್ದವರು. ಗುತ್ತಿಗೆದಾರ ಒಬ್ಬರಿಂದ ₹ 68,000 ಲಂಚ ಪಡೆಯುವಾಗ ಸಿಕ್ಕಿ ಬಿದ್ದಿದ್ದಾರೆ. ಎಸಿಬಿಯಿಂದ ಇಬ್ಬರೂ ಅಧಿಕಾರಿಗಳನ್ನು ವಶಕ್ಕೆ ಪಡೆಯಲಾಗಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ ಎಂದು ಮೂಲಗಳು ತಿಳಿಸಿವೆ.

ಇಲಾಖೆಯಿಂದ ಅನುಷ್ಠಾನಗೊಳಿಸುತ್ತಿರುವ ಜಲಜೀವನ ಮಿಷನ್ ಯೋಜನೆಯಲ್ಲಿ ಕಾಮಗಾರಿ ಗುತ್ತಿಗೆ ಪಡೆದ ಬೆಳಗಾವಿಯ ಗುತ್ತಿಗೆದಾರಿಂದ ಈ ಅಧಿಕಾರಿಗಳು ಶೇ.3ರಷ್ಟು ಲಂಚದ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಗುತ್ತಿಗೆದಾರ ಎಸಿಬಿಗೆ ದೂರು ನೀಡಿದ್ದರು. ದೂರಿನ ಅನ್ವಯ ಎಸಿಬಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದರು.

ಎಸಿಬಿ ಎಸ್ಪಿ ಬಿ.ಎಸ್. ನ್ಯಾಮಗೌಡರ ಮಾರ್ಗದರ್ಶನದಲ್ಲಿ, ಡಿವೈಎಸ್ಪಿ ಕರುಣಾಕರ ಶೆಟ್ಟಿ ನೇತೃತ್ವದಲ್ಲಿ ಇನ್‌ಸ್ಪೆಕ್ಟರ್‌ಗಳಾದ ಅಡಿವೇಶ ಗುದಿಗೊಪ್ಪ ಹಾಗೂ ಸುನಿಲಕುಮಾರ ಮತ್ತು ಸಿಬ್ಬಂದಿ ದಾಳಿ ನಡೆಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.