ADVERTISEMENT

‘ಮಕ್ಕಳ ಆರೋಗ್ಯ ತಪಾಸಣೆ’

​ಪ್ರಜಾವಾಣಿ ವಾರ್ತೆ
Published 16 ಸೆಪ್ಟೆಂಬರ್ 2021, 8:18 IST
Last Updated 16 ಸೆಪ್ಟೆಂಬರ್ 2021, 8:18 IST
ಮಂಗಲಾ ಅಂಗಡಿ
ಮಂಗಲಾ ಅಂಗಡಿ   

ಬೆಳಗಾವಿ: ‘ಕೋವಿಡ್-19 ಸಂಭವನೀಯ 3ನೇ ಅಲೆ ತಡೆಗಟ್ಟಲು ಸರ್ಕಾರದ ಮಾರ್ಗದರ್ಶನದಂತೆ ಗರ್ಭಿಣಿಯರು, ಬಾಣಂತಿಯರು ಮತ್ತು ಮಕ್ಕಳ ಆರೋಗ್ಯ ತಪಾಸಣೆ ಶಿಬಿರವನ್ನು ಪ್ರತಿ ಗ್ರಾಮ ಮತ್ತು ನಗರ ಪ್ರದೇಶಗಳಲ್ಲೂ ಆಯೋಜಿಸಲಾಗುತ್ತಿದೆ’ ಎಂದು ಸಂಸದೆ ಮಂಗಲಾ ಸುರೇಶ ಅಂಗಡಿ ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಬಿಮ್ಸ್‌, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲ್ಲೂಕು ಆರೋಗ್ಯಾಧಿಕಾರಿ ಕಚೇರಿ ಸಹಯೋಗದಲ್ಲಿ ನಡೆದ ‘ಆರೋಗ್ಯ ನಂದನ’ ಕಾರ್ಯಕ್ರಮಕ್ಕೆ ಬುಧವಾರ ಚಾಲನೆ ನೀಡಿ ಅವರು ಮಾತನಾಡಿದರು.

‘ತಜ್ಞ ವೈದ್ಯರು ಶಿಬಿರದಲ್ಲಿ ಭಾಗವಹಿಸುತ್ತಾರೆ. ತಪಾಸಣೆ ಮಾಡಿಸಿಕೊಂಡು ಸಮಸ್ಯೆ ಇದ್ದಲ್ಲಿ ಸಮರ್ಪಕ ಚಿಕಿತ್ಸೆ ಪಡೆದುಕೊಳ್ಳಬೇಕು’ ಎಂದು ಸಲಹೆ ನೀಡಿದರು.

ADVERTISEMENT

ಮಹಾನಗರ ಪಾಲಿಕೆಯ ಆರೋಗ್ಯಾಧಿಕಾರಿ ಡಾ.ಸಂಜಯ ಡುಮ್ಮಗೋಳ, ‘ಶಿಬಿರದಲ್ಲಿ ತಾಯಿ ಮತ್ತು ಮಕ್ಕಳ ಆರೋಗ್ಯದಲ್ಲಿ ನೂನ್ಯತೆಗಳು ಕಂಡು ಬಂದರೆ ಅವರಿಗೆ ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಯೋಜನೆಯಲ್ಲಿ ಚಿಕಿತ್ಸೆ ನೀಡಲಾಗುತ್ತದೆ’ ಎಂದು ತಿಳಿಸಿದರು.

ಅಧ್ಯಕ್ಷತೆ ವಹಿಸಿದ್ದ ಬಿಮ್ಸ್ ನಿರ್ದೇಶಕ ಡಾ.ಆರ್.ಜಿ. ವಿವೇಕಿ, ‘ಕೋವಿಡ-19 ನಿಯಮಾವಳಿಗಳನ್ನು ಎಲ್ಲರೂ ತಪ್ಪದೆ ಪಾಲಿಸಬೇಕು. ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವುದು ಮತ್ತು ಲಸಿಕೆ ಹಾಕಿಸಿಕೊಳ್ಳುವ ಮೂಲಕ ಸಂಭವಿನೀಯ 3ನೇ ಅಲೆಯನ್ನು ತಪ್ಪಿಸಬಹುದಾಗಿದೆ’ ಎಂದರು.

ಬಿಮ್ಸ್‌ ‌ಮೆಡಿಕಲ್‌ ಸೂಪರಿಂಟೆಂಡೆಂಟ್ ಡಾ.ಎ.ಬಿ. ಪಾಟೀಲ, ಶಿಶು ಅಭಿವೃದ್ಧಿ ಯೋಜನಾಧಿಕಾರಿ (ಗ್ರಾ) ಎಂ.ಎಸ್. ರೊಟ್ಟಿ, ಗ್ರಾಮೀಣ ಬಿಇಒ ಆರ್.ಪಿ. ಜುಟನ್ನವರ ಪಾಲ್ಗೊಂಡಿದ್ದರು.

ಸಿ.ಜಿ. ಅಗ್ನಿಹೋತ್ರಿ ನಿರೂಪಿಸಿದರು. ಟಿಎಚ್‌ಒ ಡಾ.ಶಿವಾನಂದ ಮಾಸ್ತಿಹೊಳಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಬಿ.ಪಿ. ಯಲಿಗಾರ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.