ADVERTISEMENT

ಬೆಳಗಾವಿ: ಜಲಾಶಯಗಳ ಒಳಹರಿವು ಹೆಚ್ಚಳ

​ಪ್ರಜಾವಾಣಿ ವಾರ್ತೆ
Published 17 ಜೂನ್ 2021, 7:06 IST
Last Updated 17 ಜೂನ್ 2021, 7:06 IST
   

ಬೆಳಗಾವಿ: ನಗರವೂ ಸೇರಿದಂತೆ ಜಿಲ್ಲೆಯ ಹಲವೆಡೆ ಮಳೆ ಗುರುವಾರವೂ ಮುಂದುವರಿದಿದೆ.

ಬುಧವಾರ ರಾತ್ರಿಯಿಂದಲೂ ಜಿಟಿಜಿಟಿ ಮಳೆ ಆಗುತ್ತಿದೆ.

ಘಟಪ್ರಭಾ ನದಿಗೆ ಹುಕ್ಕೇರಿ ತಾಲ್ಲೂಕಿನ ಹಿಡಕಲ್‌ನಲ್ಲಿ ನಿರ್ಮಿಸಿರುವ ರಾಜಾ ಲಖಮಗೌಡ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. 17,114 ಕ್ಯುಸೆಕ್ ನೀರು ಸೇರುತ್ತಿದೆ. ಬುಧವಾರಕ್ಕೆ ಹೋಲಿಸಿದರೆ ಪ್ರಮಾಣ ದ್ವಿಗುಣವಾಗಿದೆ.

ಮಲಪ್ರಭಾ ನದಿಗೆ ಸವದತ್ತಿ ತಾಲ್ಲೂಕಿನ ನವಿಲುತೀರ್ಥ ಬಳಿ ನಿರ್ಮಿಸಿರುವ ಜಲಾಶಯಕ್ಕೆ ಗುರುವಾರ ಒಳಹರಿವು ಆರಂಭವಾಗಿದೆ. 877 ಕ್ಯುಸೆಕ್ ಒಳಹರಿವು ಇತ್ತು.

ಸತತ ಮಳೆಯಿಂದಾಗಿ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.