ADVERTISEMENT

ರಾಷ್ಟ್ರ ಮಟ್ಟದ ಶೂಟಿಂಗ್ ಚಾಂಪಿಯನ್‌ಶಿಪ್‌ಗೆ ರೋಷನಿ ಮುಲ್ಕಿ ಆಯ್ಕೆ

​ಪ್ರಜಾವಾಣಿ ವಾರ್ತೆ
Published 16 ಸೆಪ್ಟೆಂಬರ್ 2021, 8:29 IST
Last Updated 16 ಸೆಪ್ಟೆಂಬರ್ 2021, 8:29 IST
ರೋಷನಿ ಮುಲ್ಕಿ
ರೋಷನಿ ಮುಲ್ಕಿ   

ಬೆಳಗಾವಿ: ಇಲ್ಲಿನ ಕೆಎಲ್‌ಇ ಸಂಸ್ಥೆಯ ಲಿಂಗರಾಜ ಕಾಲೇಜಿನ ಎನ್‌ಸಿಸಿ ಘಟಕದ ರೋಷನಿ ಮುಲ್ಕಿ (ಜೂನಿಯರ್ ಅಂಡರ್ ಆಫೀಸರ್) ಹಾಗೂ ರಾಧಿಕಾ ಪೂಜಾರಿ (ಕೆಡೆಟ್) ಮಧ್ಯಪ್ರದೇಶದ ಇಂದೋರ್‌ನಲ್ಲಿ ಸೆ.23ರಿಂದ ಅ.2ರವರೆಗೆ ನಡೆಯಲಿರುವ ರಾಷ್ಟ್ರಮಟ್ಟದ ಎನ್‌ಸಿಸಿ ಅಂತರ ನಿರ್ದೇಶನಾಲಯ ಶೂಟಿಂಗ್ ಚಾಂಪಿಯನ್‌ಶಿಪ್‌ಗೆ ಕರ್ನಾಟಕ ಮತ್ತು ಗೋವಾ ನಿರ್ದೇಶನಾಲಯದ ಪ್ರತಿನಿಧಿಗಳಾಗಿ ಆಯ್ಕೆಯಾಗಿದ್ದಾರೆ.

ಬೆಂಗಳೂರಿನಲ್ಲಿ ಇತ್ತೀಚಿಗೆ ನಡೆದ ರಾಜ್ಯಮಟ್ಟದ ಶೂಟಿಂಗ್ ಆಯ್ಕೆ ಶಿಬಿರದಲ್ಲಿ ಪಾಲ್ಗೊಂಡಿದ್ದ 80 ಎನ್‌ಸಿಸಿ ಕೆಡೆಟ್‌ಗಳಲ್ಲಿ ಅಂತಿಮ ಘಟ್ಟದ 12ರಲ್ಲಿ ಅವರು ಆಯ್ಕೆಯಾಗಿದ್ದಾರೆ.

ಅವರನ್ನು ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ, 26 ಕರ್ನಾಟಕ ಎನ್‌ಸಿಸಿ ಬೆಟಾಲಿಯನ್ ಕಮಾಡಿಂಗ್ ಆಫೀಸರ್ ಕರ್ನಲ್ ಕಜೋರಿಯಾ, ಎಡೆಮ್ ಆಫೀಸರ್ ಕರ್ನಲ್ ಆದಿತ್ಯ ವರ್ಮಾ, 25 ಕರ್ನಾಟಕ ಎನ್‌ಸಿಸಿ ಬೆಟಾಲಿಯನ್ ಸಿಒ ಕರ್ನಲ್ ಅಭಯ್ ಅವಸ್ಥೆ, ಕಾಲೇಜಿನ ಪ್ರಾಚಾರ್ಯ ಡಾ.ಬಿ.ಎಂ. ತೇಜಸ್ವಿ, ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯೆ ಗಿರಿಜಾ ಹಿರೇಮಠ, ಎನ್‌ಸಿಸಿ ಅಧಿಕಾರಿಗಳಾದ ಕ್ಯಾಫ್ಟನ್ ಮಹೇಶ ಗುರನಗೌಡರ, ಶಿವಾನಂದ ಬುಲಬುಲೆ ಅಭಿನಂದನೆ ಸಲ್ಲಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.