ADVERTISEMENT

ಸಹಜ ಸ್ಥಿತಿಗೆ ಮರಳಿದ ಬೆಳಗಾವಿ ಜಿಲ್ಲೆ

​ಪ್ರಜಾವಾಣಿ ವಾರ್ತೆ
Published 5 ಜುಲೈ 2021, 15:49 IST
Last Updated 5 ಜುಲೈ 2021, 15:49 IST
ಲಾಕ್‌ಡೌನ್‌ ವಿನಾಯಿತಿ ಹಿನ್ನೆಲೆಯಲ್ಲಿ ಬೆಳಗಾವಿಯ ಕಪಿಲೇಶ್ವರ ಮಂದಿರದಲ್ಲಿ ಸಾರ್ವಜನಿಕರ ದರ್ಶನಕ್ಕೆ ಸೋಮವಾರ ಅವಕಾಶ ನೀಡಲಾಯಿತುಪ್ರಜಾವಾಣಿ ಚಿತ್ರ
ಲಾಕ್‌ಡೌನ್‌ ವಿನಾಯಿತಿ ಹಿನ್ನೆಲೆಯಲ್ಲಿ ಬೆಳಗಾವಿಯ ಕಪಿಲೇಶ್ವರ ಮಂದಿರದಲ್ಲಿ ಸಾರ್ವಜನಿಕರ ದರ್ಶನಕ್ಕೆ ಸೋಮವಾರ ಅವಕಾಶ ನೀಡಲಾಯಿತುಪ್ರಜಾವಾಣಿ ಚಿತ್ರ   

ಬೆಳಗಾವಿ: ಲಾಕ್‌ಡೌನ್‌ ಸಡಿಲಿಕೆಯ ಮೂರನೇ ಹಂತ ಜಾರಿಗೆ ಬಂದಿರುವುದರಿಂದಾಗಿ ನಗರವೂ ಸೇರಿದಂತೆ ಜಿಲ್ಲೆಯಾದ್ಯಂತ ಜನಜೀವನ ಸಹಜ ಸ್ಥಿತಿಗೆ ಸೋಮವಾರ ಮರಳಿತು. ಹಲವು ಚಟುವಟಿಕೆಗಳಿಗೆ ಅವಕಾಶ ದೊರೆತಿರುವುರಿಂದ ಜನರಲ್ಲಿ ನಿರಾಳ ಭಾವ ಮೂಡಿದೆ.

ಕೋವಿಡ್ ಹರಡುವುದನ್ನು ತಡೆಯುವ ಉದ್ದೇಶದಿಂದ ಮೇ 10ರಿಂದ ಲಾಕ್‌ಡೌನ್‌ ಜಾರಿಗೊಳಿಸಲಾಗಿತ್ತು. ಅಂದಿನಿಂದಲೂ ಬಂದ್ ಆಗಿದ್ದ ದೇವಸ್ಥಾನಗಳು ಭಕ್ತರ ಪ್ರವೇಶಕ್ಕೆ ಮುಕ್ತವಾದವು. ದಕ್ಷಿಣ ಕಾಶಿ ಎಂದೇ ಹೆಸರುವಾಸಿಯಾಗಿರುವ ಕಪಿಲೇಶ್ವರ ಮಂದಿರ ಸೇರಿದಂತೆ ಬಹುತೇಕ ದೇಗುಲಗಳಲ್ಲಿ ಸಾರ್ವಜನಿಕ ದರ್ಶನಕ್ಕೆ ಅವಕಾಶವಿತ್ತು. ಸುರಕ್ಷತಾ ಕ್ರಮಗಳನ್ನು ಅನುಸರಿಸುವ ಮೂಲಕ ಅನುವು ಮಾಡಿಕೊಡಲಾಯಿತು. ಭಕ್ತರು ಒಳಿತಿಗಾಗಿ ದೇವರಲ್ಲಿ ಪ್ರಾರ್ಥಿಸಿದರು.

ಮಾರುಕಟ್ಟೆ ಪ್ರದೇಶದಲ್ಲಿ ಜನ ಜಂಗುಳಿಯೇ ಕಂಡುಬಂತು. ಎಲ್ಲ ರೀತಿಯ ವಾಹನಗಳ ಸಂಚಾರ ಸಾಮಾನ್ಯವಾಗಿತ್ತು. ಎನ್‌ಡಬ್ಲ್ಯುಕೆಆರ್‌ಟಿಸಿ ಬಸ್‌ಗಳಲ್ಲಿ ಶೇ 100ರಷ್ಟ ಸೀಟುಗಳ ಭರ್ತಿಗೆ ಅವಕಾಶ ನೀಡಲಾಯಿತು.

ADVERTISEMENT

ಎಲ್ಲ ರೀತಿಯ ವಾಣಿಜ್ಯ ಚಟುವಟಿಕೆಗಳಿಗೆ ರಾತ್ರಿ 9ರವರೆಗೆ ಮಾತ್ರವೇ ಅವಕಾಶ ನೀಡಲಾಗಿತ್ತು.

ಕೋವಿಡ್ ಹರಡದಂತೆ ತಡೆಯುವ ಉದ್ದೇಶದಿಂದಾಗಿ ಸವದತ್ತಿ ಯಲ್ಲಮ್ಮ ದೇವಸ್ಥಾನ ಮತ್ತು ಜೋಗುಳಭಾವಿ ಸತ್ತೆಮ್ಮದೇವಿ ದೇವಸ್ಥಾನಗಳಲ್ಲಿ ಸಾರ್ವಜನಿಕ ದರ್ಶನಕ್ಕೆ ನಿಷೇಧ ಮುಂದುವರಿದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.