ADVERTISEMENT

ಗೋಕಾಕ: ಕೋವಿಡ್ ಲಸಿಕೆ ಪಡೆದು ಸುರಕ್ಷಿತವಾಗಿರಿ -ರಮೇಶ ಜಾರಕಿಹೊಳಿ

​ಪ್ರಜಾವಾಣಿ ವಾರ್ತೆ
Published 17 ಸೆಪ್ಟೆಂಬರ್ 2021, 13:25 IST
Last Updated 17 ಸೆಪ್ಟೆಂಬರ್ 2021, 13:25 IST
ಗೋಕಾಕದಲ್ಲಿ ಶುಕ್ರವಾರ ಪ್ರಧಾನಿ ನರೇಂದ್ರ ಅವರ 71ನೇ ಜನ್ಮದಿನ ಆಚರಣೆ ಪ್ರಯುಕ್ತ ಮಯೂರ ಇಂಗ್ಲಿಷ್ ಮಾಧ್ಯಮ ಶಾಲೆಯಲ್ಲಿ ಆಯೋಜಿಸಿದ್ದ ಕೋವಿಡ್ ಲಸಿಕಾ ಕಾರ್ಯಕ್ರಮಕ್ಕೆ ಶಾಸಕ ಶಾಸಕ ರಮೇಶ ಜಾರಕಿಹೊಳಿ ಚಾಲನೆ ನೀಡಿದರು. ಶ್ಯಾಮಾನಂದ ಪೂಜೇರಿ, ಶಿವನಂದ ಹಿರೇಮಠ, ಭೀಮಶಿ ಭರಮನ್ನವರ ಇದ್ದಾರೆ
ಗೋಕಾಕದಲ್ಲಿ ಶುಕ್ರವಾರ ಪ್ರಧಾನಿ ನರೇಂದ್ರ ಅವರ 71ನೇ ಜನ್ಮದಿನ ಆಚರಣೆ ಪ್ರಯುಕ್ತ ಮಯೂರ ಇಂಗ್ಲಿಷ್ ಮಾಧ್ಯಮ ಶಾಲೆಯಲ್ಲಿ ಆಯೋಜಿಸಿದ್ದ ಕೋವಿಡ್ ಲಸಿಕಾ ಕಾರ್ಯಕ್ರಮಕ್ಕೆ ಶಾಸಕ ಶಾಸಕ ರಮೇಶ ಜಾರಕಿಹೊಳಿ ಚಾಲನೆ ನೀಡಿದರು. ಶ್ಯಾಮಾನಂದ ಪೂಜೇರಿ, ಶಿವನಂದ ಹಿರೇಮಠ, ಭೀಮಶಿ ಭರಮನ್ನವರ ಇದ್ದಾರೆ   

ಗೋಕಾಕ: ‘ಕೋವಿಡ್ ಲಸಿಕೆಯ ಬಗ್ಗೆ ಸಂದೇಹ ಬೇಡ. ಅವು ಸಂಪೂರ್ಣ ಸುರಕ್ಷಿತವಾಗಿವೆ. ವದಂತಿಗಳಿಗೆ ಕಿವಿಗೊಡದೆ ಪಡೆದು ಸುರಕ್ಷಿತವಾಗಿರಬೇಕು’ ಎಂದು ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಹೇಳಿದರು.

ಬಿಜೆಪಿಯಿಂದ ಪ್ರಧಾನಿ ನರೇಂದ್ರ ಮೋದಿ ಅವರ 71ನೇ ಜನ್ಮದಿನ ಆಚರಣೆ ಪ್ರಯುಕ್ತ ನಗರದ ಮಯೂರ ಇಂಗ್ಲಿಷ್ ಮಾಧ್ಯಮ ಶಾಲೆಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಕೋವಿಡ್ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.

‘ಲಸಿಕೆ ಪಡೆಯುವುದರಿಂದ ರೋಗ ನಿಯಂತ್ರಿಸಲು ಹಾಗೂ ಸಾವು–ನೋವು ಪ್ರಮಾಣ ಕಡಿಮೆ ಮಾಡಲು ಸಾಧ್ಯವಿದೆ. ಕೊರೊನಾದಿಂದಾಗಿ ನಮ್ಮ ಸುತ್ತಮುತ್ತಲಿನ ಅನೇಕ ಪ್ರೀತಿಪಾತ್ರರನ್ನು ಕಳೆದುಕೊಂಡಿದ್ದೆವೆ. ಮೂರನೇ ಅಲೆಗೆ ಅವಕಾಶ ನೀಡಬಾರದು’ ಎಂದರು.

ADVERTISEMENT

ಬಿಜೆಪಿ ನಗರ ಮಂಡಳದ ಅಧ್ಯಕ್ಷ ಭೀಮಶಿ ಭರಮಣ್ಣವರ ಅವರಿಗೆ ಲಸಿಕೆ ನೀಡಿ ಉದ್ಘಾಟಿಸಲಾಯಿತು. ಬಿಜೆಪಿ ಗ್ರಾಮೀಣ ಮಂಡಲ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ, ಮುಖಂಡ ತುಕಾರಾಮ ಕಾಗಲ, ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳಿ, ಶಾಸಕರ ಸಹಾಯಕ ಸುರೇಶ ಸನದಿ, ನಗರಸಭೆ ಉಪಾಧ್ಯಕ್ಷ ಬಸವರಾಜ ಆರೆನ್ನವರ, ಸ್ಥಾಯಿ ಸಮೀತಿ ಅಧ್ಯಕ್ಷ ಕುತ್ಬುದ್ದೀನ್ ಗೋಕಾಕ, ಮುಖಂಡರಾದ ದುರ್ಗಪ್ಪ ಶಾಸ್ತ್ರಿಗೊಲ್ಲರ, ವಿಶ್ವನಾಥ ಬಿಳ್ಳೂರ, ಯಲ್ಲಪ್ಪ ಹಳ್ಳೂರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.