ADVERTISEMENT

ಬೆಳಗಾವಿ: ಅಂಗಡಿ ಪ್ರತಿಮೆ ಅನಾವರಣ ಸೆ.26ರಂದು

​ಪ್ರಜಾವಾಣಿ ವಾರ್ತೆ
Published 22 ಸೆಪ್ಟೆಂಬರ್ 2021, 14:41 IST
Last Updated 22 ಸೆಪ್ಟೆಂಬರ್ 2021, 14:41 IST

ಬೆಳಗಾವಿ: ಇಲ್ಲಿನ ಸಂಸದ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವರಾಗಿದ್ದ ದಿವಂಗತ ಸುರೇಶ ಅಂಗಡಿ ಅವರ ಪ್ರಥಮ ಪುಣ್ಯಸ್ಮರಣೆ ಮತ್ತು ಪ್ರತಿಮೆ ಅನಾವರಣ ಕಾರ್ಯಕ್ರಮವನ್ನು ಇಲ್ಲಿನ ಸಾವಗಾಂವ ರಸ್ತೆಯಲ್ಲಿರುವ ಸುರೇಶ ಅಂಗಡಿ ಶಿಕ್ಷಣ ಪ್ರತಿಷ್ಠಾನದ ಆವರಣದಲ್ಲಿ ಸೆ.26ರಂದು ಬೆಳಿಗ್ಗೆ 10ಕ್ಕೆ ಆಯೋಜಿಸಲಾಗಿದೆ.

ಸುರೇಶ ಅಂಗಡಿ ಶಿಕ್ಷಣ ಪ್ರತಿಷ್ಠಾನದಿಂದ ಹಮ್ಮಿಕೊಂಡಿರುವ ಕಾರ್ಯಕ್ರಮವನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಉದ್ಘಾಟಿಸುವರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆ ವಹಿಸುವರು. ಶಾಸಕ ಜಗದೀಶ ಶೆಟ್ಟರ್ ಹಾಗೂ ಸಂಸದೆ ಮಂಗಲಾ ಸುರೇಶ ಅಂಗಡಿ ಭಾಗವಹಿಸುವರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT