ADVERTISEMENT

’ಪುನರಾವರ್ತಿತ ವಿದ್ಯಾರ್ಥಿಗಳ ಪಾಸ್ ಮಾಡಿ’

​ಪ್ರಜಾವಾಣಿ ವಾರ್ತೆ
Published 8 ಜೂನ್ 2021, 16:35 IST
Last Updated 8 ಜೂನ್ 2021, 16:35 IST
ರಾಜ್ಯ ಕಾರ್ಮಿಕ ಪರಿಷತ್ತಿನ ಮುಖಂಡರು ಮಂಗಳವಾರ ಹೊಸಪೇಟೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಆನಂದ್‌ ಸಿಂಗ್‌ ಅವರ ಆಪ್ತ ಸಹಾಯಕ ಧರ್ಮೇಂದ್ರ ಸಿಂಗ್‌ ಅವರಿಗೆ ಮನವಿ ಪತ್ರ ಸಲ್ಲಿಸಿದರು
ರಾಜ್ಯ ಕಾರ್ಮಿಕ ಪರಿಷತ್ತಿನ ಮುಖಂಡರು ಮಂಗಳವಾರ ಹೊಸಪೇಟೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಆನಂದ್‌ ಸಿಂಗ್‌ ಅವರ ಆಪ್ತ ಸಹಾಯಕ ಧರ್ಮೇಂದ್ರ ಸಿಂಗ್‌ ಅವರಿಗೆ ಮನವಿ ಪತ್ರ ಸಲ್ಲಿಸಿದರು   

ಹೊಸಪೇಟೆ(ವಿಜಯನಗರ): ಕೋವಿಡ್‌ನಿಂದದ್ವಿತೀಯ ಪಿಯುಸಿ ವಿದ್ಯಾರ್ಥಿಗಳನ್ನು ಉತ್ತೀರ್ಣಗೊಳಿಸಿ ಆದೇಶ ಹೊರಡಿಸಿರುವಂತೆ ಪುನರಾವರ್ತಿತ ವಿದ್ಯಾರ್ಥಿಗಳನ್ನು ಸಹ ಪಾಸ್‌ ಮಾಡಬೇಕೆಂದು ರಾಜ್ಯ ಕಾರ್ಮಿಕ ಪರಿಷತ್ತು ಆಗ್ರಹಿಸಿದೆ.

ಈ ಸಂಬಂಧ ಪರಿಷತ್ತಿನ ಮುಖಂಡರು ಮಂಗಳವಾರ ನಗರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಆನಂದ್‌ ಸಿಂಗ್‌ ಅವರ ಆಪ್ತ ಸಹಾಯಕ ಧರ್ಮೇಂದ್ರ ಸಿಂಗ್‌ ಅವರಿಗೆ ಸಲ್ಲಿಸಿರುವ ಮನವಿ ಪತ್ರದಲ್ಲಿ ಒತ್ತಾಯಿಸಿದ್ದಾರೆ.

‘2020-21 ಸಾಲಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶದ ಜೊತೆಗೆ ಪುನರಾವರ್ತಿತ ವಿದ್ಯಾರ್ಥಿಗಳಿಗೂ ಸಮಾನ ಫಲಿತಾಂಶ ನೀಡಬೇಕು. ವಿದ್ಯಾರ್ಥಿಗಳ ಫಲಿತಾಂಶದಲ್ಲಿ ತಾರತಮ್ಯ ಮಾಡಿದರೆ ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡಿದಂತಾಗುತ್ತದೆ. ಒಂದುವೇಳೆ ಸರ್ಕಾರ ಸೂಕ್ತ ಕ್ರಮ ಜರುಗಿಸದಿದ್ದಲ್ಲಿ ಹೋರಾಟ ನಡೆಸಲಾಗುವುದು’ ಎಂದು ಎಚ್ಚರಿಕೆ ನೀಡಿದ್ದಾರೆ.

ADVERTISEMENT

ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಹೊನ್ನೂರಪ್ಪ, ಎ.ಕೆ.ಈರಪ್ಪ, ಲೋಕೇಶ, ಅಂಕೇಶ, ಪ್ರಕಾಶ, ಶೇಖರಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.