ADVERTISEMENT

ಲಸಿಕಾ ಅಭಿಯಾನ: ಬಿಬಿಎಂಪಿ ವ್ಯಾಪ್ತಿಯಲ್ಲಿ ಶೇ 90ರಷ್ಟು ಗುರಿ ಸಾಧನೆ

​ಪ್ರಜಾವಾಣಿ ವಾರ್ತೆ
Published 17 ಸೆಪ್ಟೆಂಬರ್ 2021, 16:48 IST
Last Updated 17 ಸೆಪ್ಟೆಂಬರ್ 2021, 16:48 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ    

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬೃಹತ್‌ ಕೋವಿಡ್ ಲಸಿಕಾ ಅಭಿಯಾನ ಯಶಸ್ವಿಯಾಗಿದ್ದು, ರಾತ್ರಿ 9.30ರ ವೇಳೆಗೆ, ನಿಗದಿತ ಗುರಿಯಲ್ಲಿ ಶೇ 90ಕ್ಕಿಂತಲೂ ಹೆಚ್ಚು ಜನರಿಗೆ ಲಸಿಕೆ ಹಾಕಲಾಯಿತು.

ಐದು ಲಕ್ಷ ಜನರಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿತ್ತು. 2,187 ಲಸಿಕಾ ಕೇಂದ್ರಗಳಲ್ಲಿ ರಾತ್ರಿ 9ರ ವೇಳೆಗೆ 4.06 ಲಕ್ಷ ಜನರಿಗೆ ಲಸಿಕೆ ಹಾಕಲಾಯಿತು.ಕಳೆದ ಸಾಲಿನಲ್ಲಿ ಸಾಧಿಸಿದ ಪ್ರಗತಿಗಿಂತ 2.5 ಪಟ್ಟು ಹೆಚ್ಚು ಪ್ರಗತಿ ಸಾಧಿಸಿದಂತಾಗಿದೆ.

ದಕ್ಷಿಣ ವಲಯದಲ್ಲಿ ಅತಿ ಹೆಚ್ಚು ಅಂದರೆ, 84,280 ಹಾಗೂ ಪಶ್ಚಿಮ ವಲಯದಲ್ಲಿ 75,873 ಮಂದಿ ಲಸಿಕೆ ಪಡೆದರು.

ADVERTISEMENT

ಗುರಿ ತಲುಪಲು ಶನಿವಾರವೂ ಅಭಿಯಾನ ಮುಂದುವರಿಸಲಾಗುವುದು ಎಂದು ಬಿಬಿಎಂಪಿ ಹೇಳಿದೆ. ಮೊದಲನೇ ಹಾಗೂ ಎರಡನೇ ಡೋಸ್ ಲಸಿಕೆ ಪಡೆಯದವರು ಲಸಿಕಾ ಸ್ಥಳಗಳಿಗೆ ಭೇಟಿ ನೀಡಿ ಲಸಿಕೆ ಪಡೆದುಕೊಳ್ಳಬಹುದು.

ನಗರದಲ್ಲಿ ವ್ಯವಸ್ಥೆ ಮಾಡಿರುವ ಲಸಿಕಾ ಕೇಂದ್ರಗಳ ಮಾಹಿತಿ ಪಡೆಯಲು https://bit.ly/cvcdetails ವೆಬ್ ಲಿಂಕ್ ಗೆ ಭೇಟಿ ನೀಡಬಹುದು ಅಥವಾ ಸಹಾಯವಾಣಿ ಸಂಖ್ಯೆ ‘1533’ಗೆ ಸಂಪರ್ಕಿಸಬಹುದು ಎಂದು ಬಿಬಿಎಂಪಿ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.