ADVERTISEMENT

ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್; ₹ 5 ಲಕ್ಷ ಜಪ್ತಿ

​ಪ್ರಜಾವಾಣಿ ವಾರ್ತೆ
Published 21 ಸೆಪ್ಟೆಂಬರ್ 2021, 22:36 IST
Last Updated 21 ಸೆಪ್ಟೆಂಬರ್ 2021, 22:36 IST

ಬೆಂಗಳೂರು: ಐಪಿಎಲ್ ಕ್ರಿಕೆಟ್ ಪಂದ್ಯಗಳ ಮೇಲೆ ಬೆಟ್ಟಿಂಗ್ ನಡೆಸುತ್ತಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು, ಆತನಿಂದ ₹ 5 ಲಕ್ಷ ನಗದು ಜಪ್ತಿ ಮಾಡಲಾಗಿದೆ.

‘ಸಂಪಿಗೆಹಳ್ಳಿ ಠಾಣೆ ವ್ಯಾಪ್ತಿಯ ರಾಚೇನಹಳ್ಳಿ ಮುಖ್ಯರಸ್ತೆಯಲ್ಲಿ ಆರೋಪಿ ಸಾರ್ವಜನಿಕರಿಂದ ಹಣವನ್ನು ಬೆಟ್ಟಿಂಗ್‌ಗಾಗಿ ಕಟ್ಟಿಸಿಕೊಳ್ಳುತ್ತಿದ್ದ. ದಾಳಿ ಮಾಡಿ ಆತನನ್ನು ಬಂಧಿಸಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.

‘ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳ ನಡುವೆ ಸೋಮವಾರ ಕ್ರಿಕೆಟ್ ಪಂದ್ಯ ನಡೆದಿತ್ತು. ಇದೇ ಪಂದ್ಯದ ಮೇಲೆ ಆರೋಪಿ ಬೆಟ್ಟಿಂಗ್ ಕಟ್ಟಿಸಿಕೊಳ್ಳುತ್ತಿದ್ದ. ಮೊಬೈಲ್ ಮೂಲಕವೂ ಜನರನ್ನು ಸಂಪರ್ಕಿಸಿ ಹಣ ಪಡೆಯುತ್ತಿದ್ದ. ಈ ಬಗ್ಗೆ ಮಾಹಿತಿ ಸಿಗುತ್ತಿದ್ದಂತೆ ದಾಳಿ ಮಾಡಲಾಗಿತ್ತು’ ಎಂದೂ ಮೂಲಗಳು ತಿಳಿಸಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.