ADVERTISEMENT

ಮಹದೇವಪುರ ವಿಧಾನಸಭಾ ಕ್ಷೇತ್ರ ‘ಪ್ರಜಾವಾಣಿ’ ಜನಸ್ಪಂದನ ಇಂದು

​ಪ್ರಜಾವಾಣಿ ವಾರ್ತೆ
Published 18 ಅಕ್ಟೋಬರ್ 2019, 19:43 IST
Last Updated 18 ಅಕ್ಟೋಬರ್ 2019, 19:43 IST
ಅರವಿಂದ ಲಿಂಬಾವಳಿ
ಅರವಿಂದ ಲಿಂಬಾವಳಿ   

ಬೆಂಗಳೂರು: ‘ಪ್ರಜಾವಾಣಿ’ ಮತ್ತು ‘ಡೆಕ್ಕನ್‌ ಹೆರಾಲ್ಡ್‌’ ಪತ್ರಿಕೆಗಳ ಆಶ್ರಯದಲ್ಲಿ ಜನಸ್ಪಂದನ ಕಾರ್ಯಕ್ರಮ (ಸಿಟಿಜನ್‌ ಫಾರ್‌ ಚೇಂಜ್‌) ಮಹದೇವಪುರ ವಿಧಾನಸಭಾ ಕ್ಷೇತ್ರದ ಬೊಮ್ಮೇನಹಳ್ಳಿ ಗ್ರಾಮದ ಬೂದಿಗೆರೆ ಕ್ರಾಸ್‌ನ ಪ್ರೆಸ್ಟೀಜ್‌ ಟ್ರಾಂಕ್ವಿಲಿಟಿಯ ಕ್ಲಬ್‌ ಹೌಸ್‌ ಸಭಾಂಗಣದಲ್ಲಿ ಇದೇ 19ರಂದು (ಶನಿವಾರ)ಬೆಳಿಗ್ಗೆ 10ರಿಂದ ಮಧ್ಯಾಹ್ನ 1ರವರೆಗೆ ನಡೆಯಲಿದೆ.

ಜನರು ತಮ್ಮ ದೂರುಗಳನ್ನು ನೇರವಾಗಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳಿಗೆ ಹೇಳಿಕೊಂಡು ಸ್ಥಳದಲ್ಲೇ ಪರಿಹಾರ ಪಡೆಯಬಹುದು.

ಕ್ಷೇತ್ರದ ಶಾಸಕ ಅರವಿಂದ ಲಿಂಬಾವಳಿ, ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಿವರಾಮೇಗೌಡ, ಸ್ಥಳೀಯ ಜನಪ್ರತಿನಿಧಿಗಳ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಕ್ಷೇತ್ರದ ಕುಂದುಕೊರತೆಗಳ ಬಗ್ಗೆ ಗಮನ ಸೆಳೆದು ಸ್ಥಳದಲ್ಲೇ ಪರಿಹಾರ ಪಡೆಯಲು ಸ್ಥಳೀಯರು ಈ ಅವಕಾಶ ಬಳಸಿಕೊಳ್ಳಬಹುದು.

ಅರವಿಂದ ಲಿಂಬಾವಳಿ ಜನರ ಪ್ರಶ್ನೆಗಳಿಗೆ ಉತ್ತರಿಸುವರು.

ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು 19ರಂದು ಬೆಳಿಗ್ಗೆ 9ರಿಂದ ಸ್ಥಳದಲ್ಲೇ ಹೆಸರು ನೋಂದಾಯಿಸಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.