ADVERTISEMENT

ಆಸ್ಕರ್ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಅವಕಾಶ

​ಪ್ರಜಾವಾಣಿ ವಾರ್ತೆ
Published 15 ಸೆಪ್ಟೆಂಬರ್ 2021, 21:07 IST
Last Updated 15 ಸೆಪ್ಟೆಂಬರ್ 2021, 21:07 IST

ಬೆಂಗಳೂರು: ಕಾಂಗ್ರೆಸ್‌ನ ರಾಜ್ಯಸಭಾ ಸದಸ್ಯ ಆಸ್ಕರ್ ಫರ್ನಾಂಡಿಸ್ ಅವರ ಪಾರ್ಥಿವ ಶರೀರವನ್ನು ಮಂಗಳೂರಿ
ನಿಂದ ವಿಶೇಷ ವಿಮಾನದಲ್ಲಿ ಬುಧವಾರ ಬೆಂಗಳೂರಿಗೆ ತರಲಾಯಿತು.

ಗುರುವಾರ ಬೆಳಿಗ್ಗೆ 10ರಿಂದ 12 ಗಂಟೆವರೆಗೆ ಕೆಪಿಸಿಸಿ ಕಚೇರಿಯಲ್ಲಿ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗಿದೆ.

ಪಾರ್ಥಿವ ಶರೀರವನ್ನು ವಿಶೇಷ ವಿಮಾನದಲ್ಲಿ ಮಂಗಳೂರಿನಿಂದ ಸಂಜೆ 5 ಗಂಟೆಗೆ ಬೆಂಗಳೂರಿಗೆ ಏರ್ ಲಿಫ್ಟ್ ಮಾಡಲಾಯಿತು.

ADVERTISEMENT

ಈ ವೇಳೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್‌, ‘ಎಐಸಿಸಿ ನಾಯಕ ರಾಹುಲ್ ಗಾಂಧಿ ಸೇರಿದಂತೆ ಪಕ್ಷದ ಕೇಂದ್ರ ನಾಯಕರು ಪಾರ್ಥಿವ ಶರೀರದ ದರ್ಶನಕ್ಕೆ ಬರಲಿದ್ದಾರೆ. ಕಾರ್ಯಕರ್ತರು ಸೇರಿದಂತೆ ಯಾರು ಬೇಕಾದರೂ ಪಾರ್ಥಿವ ಶರೀರದ ದರ್ಶನ ಮಾಡಬಹುದು’ ಎಂದರು.

ಬಳಿಕ ಹೊಸೂರು ರಸ್ತೆಯ ಸೇಂಟ್ ಪ್ಯಾಟ್ರಿಕ್ ಚರ್ಚ್ ಸ್ಮಶಾನದಲ್ಲಿ ಅಂತಿಮ ವಿಧಿ-ವಿಧಾನಗಳು ನಡೆಯಲಿವೆ.

ಕಾರ್ಯಾಧ್ಯಕ್ಷ ಸಲೀಂ ಅಹಮದ್, ಶಾಸಕ ಯು.ಟಿ. ಖಾದರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.