ADVERTISEMENT

ಬಾಲಕಿಗೆ ಲೈಂಗಿಕ ದೌರ್ಜನ್ಯ; ಬಂಧನ

​ಪ್ರಜಾವಾಣಿ ವಾರ್ತೆ
Published 20 ಸೆಪ್ಟೆಂಬರ್ 2021, 21:48 IST
Last Updated 20 ಸೆಪ್ಟೆಂಬರ್ 2021, 21:48 IST

ಬೆಂಗಳೂರು: ಐದು ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ 23 ವರ್ಷದ ಆರೋಪಿಯನ್ನು ಸಂಜಯನಗರ ಪೊಲೀಸರು ಬಂಧಿಸಿದ್ದಾರೆ.

‘ಪೋಷಕರು ನೀಡಿದ್ದ ದೂರು ಆಧರಿಸಿ, ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ (ಪೋಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಪಶ್ಚಿಮ ಬಂಗಾಳದ ಆರೋಪಿಯನ್ನು ಬಂಧಿಸಿ ಸೋಮವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಸದ್ಯ ಆತ ನ್ಯಾಯಾಂಗ ಬಂಧನದಲ್ಲಿದ್ದಾನೆ’ ಎಂದು ಪೊಲೀಸರು ಹೇಳಿದರು.

‘ಆರು ವರ್ಷಗಳ ಹಿಂದೆ ನಗರಕ್ಕೆ ಬಂದಿದ್ದ ಆರೋಪಿ, ಹೋಟೆಲ್‌ವೊಂದರಲ್ಲಿ ಕೆಲಸಕ್ಕೆ ಸೇರಿದ್ದ. 20 ದಿನಗಳ ಹಿಂದಷ್ಟೇ ಸಂಜಯನಗರ ಠಾಣೆ ವ್ಯಾಪ್ತಿಯಲ್ಲಿದ್ದ ಸ್ನೇಹಿತರ ಕೊಠಡಿಗೆ ಬಂದಿದ್ದ. ಭಾನುವಾರ ಮಧ್ಯಾಹ್ನ ಪಕ್ಕದ ಮನೆಯಲ್ಲಿ ಯಾರೂ ಇಲ್ಲದ ವೇಳೆ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ’ ಎಂದೂ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.