ADVERTISEMENT

ಮೀಸಲಾತಿ: ರಾಜ್ಯಪಾಲರಿಗೆ ದೂರು ನೀಡಲು ಎಎಪಿ ನಿರ್ಧಾರ

​ಪ್ರಜಾವಾಣಿ ವಾರ್ತೆ
Published 26 ಮಾರ್ಚ್ 2023, 20:22 IST
Last Updated 26 ಮಾರ್ಚ್ 2023, 20:22 IST
   

ಬೆಂಗಳೂರು: ಮುಸ್ಲಿಮರಿಗೆ ಪ್ರವರ್ಗ 2 ‘ಬಿ’ ನೀಡಿದ್ದ ಮೀಸಲಾತಿ ರದ್ದು ಪಡಿಸಿದ ರಾಜ್ಯ ಸರ್ಕಾರದ ನಿರ್ಧಾರವನ್ನು ಆಮ್‌ ಆದ್ಮಿ ಪಕ್ಷದ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಫರೀದುದ್ದೀನ್‌ ಷರೀಫ್‌ ಖಂಡಿಸಿದ್ದಾರೆ.

‘ಮುಸ್ಲಿಮರಿಗಿದ್ದ 2 ‘ಬಿ’ ಮೀಸಲಾತಿಯನ್ನು ಯಾರೂ ಪ್ರಶ್ನಿಸಿರಲಿಲ್ಲ. ರದ್ದು ಪಡಿಸಬೇಕೆಂಬ ನ್ಯಾಯಾಲಯದ ಆದೇ
ಶವೂ ಇಲ್ಲ. ಆದರೂ, ಸರ್ಕಾರ ಮುಸ್ಲಿಮರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ಮೀಸಲಾತಿ ರದ್ದುಪಡಿಸುವ ನಿರ್ಣಯ ಕೈಗೊಂಡಿದೆ. ಮುಸ್ಲಿಮರನ್ನು ಕೆರಳಿಸಿ ಕೋಮುಗಲಭೆ ಸೃಷ್ಟಿಸಲು ಹುನ್ನಾರನಡೆಸಿರುವುದು ಕಂಡುಬರುತ್ತಿದೆ. ರಾಜಕೀಯ ಲಾಭಕ್ಕಾಗಿ ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಯತ್ನಿಸುತ್ತಿದೆ’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

‘ಈ ಕುರಿತು ರಾಜ್ಯಪಾಲರಿಗೂ ದೂರು ನೀಡಿ, ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡುವಂತೆ ಆಗ್ರಹಿಸಲು ನಿರ್ಧರಿಸಿದ್ದೇವೆ’ ಎಂದು ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.