ADVERTISEMENT

ಜುಲೈ 5ರಿಂದ ವಂಡರ್‌ಲಾ ರೆಸಾರ್ಟ್‌ ಪುನರಾರಂಭ: ಅರುಣ್‌ ಕೆ.ಚಿಟ್ಟಿಲಾಪಿಲ್ಲಿ

​ಪ್ರಜಾವಾಣಿ ವಾರ್ತೆ
Published 4 ಜುಲೈ 2021, 9:01 IST
Last Updated 4 ಜುಲೈ 2021, 9:01 IST
ವಂಡರ್‌ಲಾ ರೆಸಾರ್ಟ್‌-ಸಾಂದರ್ಭಿಕ ಚಿತ್ರ
ವಂಡರ್‌ಲಾ ರೆಸಾರ್ಟ್‌-ಸಾಂದರ್ಭಿಕ ಚಿತ್ರ   

ಬೆಂಗಳೂರು: ‘ಕೋವಿಡ್‌ ಪ್ರಕರಣಗಳು ಇಳಿಕೆಯಾಗುತ್ತಿರುವ ಕಾರಣ ಲಾಕ್‌ಡೌನ್‌ನಿಂದ ವಿನಾಯಿತಿ ನೀಡಲಾಗಿದೆ. ಹೀಗಾಗಿ ಜುಲೈ 5ರಿಂದ ಶೇ 50ರಷ್ಟು ಸಾಮರ್ಥ್ಯದೊಂದಿಗೆ ವಂಡರ್‌ಲಾ ರೆಸಾರ್ಟ್‌ ತೆರೆಯಲು ನಿರ್ಧರಿಸಿದ್ದೇವೆ’ ಎಂದು ವಂಡರ್‌ಲಾ ಹಾಲಿಡೇಸ್‌ ತಿಳಿಸಿದೆ.

‘ಲಾಕ್‌ಡೌನ್‌ ಕಾರಣ ಎರಡು ತಿಂಗಳಿಂದ ವಂಡರ್‌ಲಾ ರೆಸಾರ್ಟ್‌ ಮುಚ್ಚಲಾಗಿತ್ತು. ಸರ್ಕಾರವು ಶೇ 50ರಷ್ಟು ಸಾಮರ್ಥ್ಯದೊಂದಿಗೆ ರೆಸ್ಟೋರೆಂಟ್‌ ತೆರೆಯಲು ಅವಕಾಶ ನೀಡಿದೆ. ಜನರ ಆರೋಗ್ಯದ ಹಿತದೃಷ್ಟಿಯಿಂದ ಎಲ್ಲಾ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ. ಸರ್ಕಾರ ಹೊರಡಿಸಿರುವ ಕೋವಿಡ್‌ ಮಾರ್ಗಸೂಚಿಗಳನ್ನೂ ಕಟ್ಟುನಿಟ್ಟಾಗಿ ಪಾಲಿಸಲಾಗುತ್ತದೆ’ ಎಂದು ವಂಡರ್‌ಲಾ ವ್ಯವಸ್ಥಾಪಕ ನಿರ್ದೇಶಕ ಅರುಣ್‌ ಕೆ.ಚಿಟ್ಟಿಲಾಪಿಲ್ಲಿ ಹೇಳಿದ್ದಾರೆ.

ಸದ್ಯಕ್ಕೆ ವಂಡರ್‌ಲಾ ಅಮ್ಯೂಸ್ಮೆಂಟ್‌ ಪಾರ್ಕ್‌ ಮುಚ್ಚಿರಲಿದೆ.

ADVERTISEMENT

‘ಲಾಕ್‌ಡೌನ್‌ ವೇಳೆ ಟಿಕೆಟ್‌ ಪಡೆದವರಿಗೆ ಶೇ 50ರಷ್ಟು ರಿಯಾಯಿತಿ ಘೋಷಿಸಲಾಗಿತ್ತು. ಈ ಸಮಯದಲ್ಲಿ ಹೆಸರು ನೋಂದಾಯಿಸಿಕೊಂಡವರು ಹಾಗೂ ಟಿಕೆಟ್‌ ಪಡೆದವರು ಈಗ ಇದರ ಪ್ರಯೋಜನ ಪಡೆದುಕೊಳ್ಳಬಹುದು’ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.