ADVERTISEMENT

ಹೋರಿ ಸ್ಪರ್ಧೆ: ಯುವಕ ಸಾವು, 8 ಮಂದಿಗೆ ಗಾಯ

​ಪ್ರಜಾವಾಣಿ ವಾರ್ತೆ
Published 13 ಡಿಸೆಂಬರ್ 2022, 19:25 IST
Last Updated 13 ಡಿಸೆಂಬರ್ 2022, 19:25 IST

ಬ್ಯಾಡಗಿ (ಹಾವೇರಿ ಜಿಲ್ಲೆ): ತಾಲ್ಲೂಕಿನ ಚಿಕ್ಕಬಾಸೂರ ಗ್ರಾಮದಲ್ಲಿ ಮಂಗಳವಾರ ಆಯೋಜಿಸಿದ್ದ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಹೋರಿ ಹಾಯ್ದು ವ್ಯಕ್ತಿ ಮೃತಪಟ್ಟಿದ್ದು ಎಂಟಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ತೀವ್ರವಾಗಿ ಗಾಯಗೊಂಡಿದ್ದ ಹಾವೇರಿ ತಾಲ್ಲೂಕಿನ ಸಂಗೂರ ಗ್ರಾಮದ ನಿವಾಸಿ ಮಂಜುನಾಥ ಮೈಲಾರೆಪ್ಪ ಚಳ್ಳಕ್ಕನವರ (35) ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ದೊಣ್ಣೇಶ ಮೂರ್ಕೇರ್‌ (35) ಅವರಿಗೆ ಚಿಕ್ಕಬಾಸೂರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT