ADVERTISEMENT

ಲಾಕ್‌ಡೌನ್‌ ಸಡಿಲ: ಸೋಮವಾರದಿಂದ ಸಂಜೆ 5ರವರೆಗೆ ವ್ಯಾಪಾರಕ್ಕೆ ಅವಕಾಶ

​ಪ್ರಜಾವಾಣಿ ವಾರ್ತೆ
Published 25 ಜೂನ್ 2021, 16:07 IST
Last Updated 25 ಜೂನ್ 2021, 16:07 IST
ಲಾಕ್‌ಡೌನ್‌ ಸಡಿಲ– ಸಾಂದರ್ಭಿಕ ಚಿತ್ರ
ಲಾಕ್‌ಡೌನ್‌ ಸಡಿಲ– ಸಾಂದರ್ಭಿಕ ಚಿತ್ರ   

ಚಾಮರಾಜನಗರ: ಜಿಲ್ಲೆಯಲ್ಲಿ ಕೋವಿಡ್‌ ಪಾಸಿಟಿವಿಟಿ ಪ್ರಮಾಣ ಮತ್ತಷ್ಟು ಇಳಿಕೆಯಾಗಿರುವುದರಿಂದ ರಾಜ್ಯ ಸರ್ಕಾರ ಲಾಕ್‌ಡೌನ್‌ ನಿರ್ಬಂಧಗಳನ್ನು ಮತ್ತಷ್ಟು ಸಡಿಲಗೊಳಿಸಿದ್ದು, ಸೋಮವಾರದಿಂದ ಹವಾನಿಯಂತ್ರಿತ ಮಳಿಗೆಗಳು ಹಾಗೂ ಮಾಲ್‌ಗಳನ್ನು ಬಿಟ್ಟು ಉಳಿದ ಎಲ್ಲ ಮಳಿಗೆಗಳನ್ನು ಬೆಳಿಗ್ಗೆ 6ರಿಂದ ಸಂಜೆ 5ರವರೆಗೆ ತೆರೆಯಲು ಅವಕಾಶ ನೀಡಿದೆ.

ಚಾಮರಾಜನಗರ, ದಾವಣಗೆರೆ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ನಿಯಮಗಳನ್ನು ಮತ್ತಷ್ಟು ಸಡಿಲಗೊಳಿಸುವ ಸಂಬಂಧ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅವರು ಆದೇಶ ಹೊರಡಿಸಿದ ಬೆನ್ನಲ್ಲೇ, ಜಿಲ್ಲಾಧಿಕಾರಿ ಅವರು ಜಿಲ್ಲೆಯ ಮಟ್ಟಿಗೆ ನಿಯಮಗಳನ್ನು ಸಡಿಲಗೊಳಿಸಿ ಆದೇಶ ಹೊರಡಿಸಿದ್ದಾರೆ. ಇದುವರೆಗೆ ಬೆಳಿಗ್ಗೆ 6ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಮಾತ್ರ ವ್ಯಾಪಾರಕ್ಕೆ ಅವಕಾಶ ನೀಡಲಾಗಿತ್ತು.

ಸೋಮವಾರದ ಬಳಿಕವೂ ಜುಲೈ 5ರವರೆಗೆ ಸಂಜೆ 7ರಿಂದ ಬೆಳಿಗ್ಗೆ 5ರವರೆಗೆ ರಾತ್ರಿ ಕರ್ಫ್ಯೂ ಜಾರಿಯಲ್ಲಿರುತ್ತದೆ. ವಾರಾಂತ್ಯದ ಕರ್ಫ್ಯೂ ಇರಲಿದೆ ಎಂದು ಜಿಲ್ಲಾಧಿಕಾರಿ ಅವರು ಆದೇಶದಲ್ಲಿ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.