ADVERTISEMENT

ಇಳಿದ ಪರೀಕ್ಷೆ ಸಂಖ್ಯೆ, ಮೂವರಿಗೆ ಸೋಂಕು

​ಪ್ರಜಾವಾಣಿ ವಾರ್ತೆ
Published 21 ಸೆಪ್ಟೆಂಬರ್ 2021, 16:39 IST
Last Updated 21 ಸೆಪ್ಟೆಂಬರ್ 2021, 16:39 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಚಾಮರಾಜನಗರ: ಜಿಲ್ಲೆಯಲ್ಲಿ ಮಂಗಳವಾರ 1098 ಮಂದಿಯ ಕೋವಿಡ್‌ ಪರೀಕ್ಷಾ ವರದಿ ಬಂದಿದ್ದು, ಮೂವರಿಗೆ ಸೋಂಕು ಖಚಿತವಾಗಿದೆ. ಎಂಟು ಮಂದಿ ಗುಣಮುಖರಾಗಿದ್ದಾರೆ. ಸಾವು ಸಂಭವಿಸಿಲ್ಲ.

ಕೋವಿಡ್‌ ದೃಢಪಟ್ಟವರಲ್ಲಿ ಇಬ್ಬರು‌ಗುಂಡ್ಲುಪೇಟೆ ತಾಲ್ಲೂಕಿನವರು. ಇನ್ನೊಬ್ಬರು ಹನೂರು ತಾಲ್ಲೂಕಿನವರು.

ಸೋಂಕು ಮುಕ್ತರ ಸಂಖ್ಯೆ ಹೆಚ್ಚಿರುವುದರಿಂದ ಸೋಂಕಿತರ ಸಂಖ್ಯೆ 44ಕ್ಕೆ ಇಳಿದಿದೆ. ಇಬ್ಬರು ಐಸಿಯುನಲ್ಲಿ, 17 ಮಂದಿ ಹೋಂ ಐಸೊಲೇಷನ್‌ನಲ್ಲಿದ್ದಾರೆ.

ADVERTISEMENT

ಜಿಲ್ಲೆಯಲ್ಲಿ ಇದುವರೆಗೆ 32,447 ಪ್ರಕರಣ ದೃಢಪಟ್ಟಿವೆ. 31,865 ಮಂದಿ ಗುಣಮುಖರಾಗಿದ್ದಾರೆ. ಕೋವಿಡ್‌ ಹಾಗೂ ಕೋವಿಡ್‌ಯೇತರ ಕಾರಣಗಳಿಂದ 579 ಮಂದಿ ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.