ADVERTISEMENT

ಚಿಕ್ಕಬಳ್ಳಾಪುರ: ‘ಸ್ವಯಂ ಪ್ರೇರಿತ ದೂರು ದಾಖಲಿಸಿ, ತನಿಖೆ’

‘ಪ್ರಜಾವಾಣಿ’ಯಲ್ಲಿ ಪ್ರಕಟವಾಗಿದ್ದ ವರದಿಗೆ ಉಪಲೋಕಾಯುಕ್ತರ ಸ್ಪಂದನೆ

​ಪ್ರಜಾವಾಣಿ ವಾರ್ತೆ
Published 19 ಮಾರ್ಚ್ 2023, 16:25 IST
Last Updated 19 ಮಾರ್ಚ್ 2023, 16:25 IST
...
...   

ಚಿಕ್ಕಬಳ್ಳಾಪುರ: ಜಿಲ್ಲೆಯ ಅಂಗನವಾಡಿ ಕೇಂದ್ರಗಳಿಗೆ ಗುತ್ತಿಗೆದಾರರು ಪೂರೈಸುತ್ತಿರುವ ಮೊಟ್ಟೆಗಳು ತೀರಾ ಕಳಪೆ ಆಗಿವೆ. ಕೊಳೆತ ಮೊಟ್ಟೆಗಳನ್ನು ಸಹ ನೀಡಲಾಗುತ್ತಿದೆ ಎನ್ನುವ ಬಗ್ಗೆ ಕುರಿತು ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿ ತನಿಖೆ ನಡೆಸಲಾಗುವುದು ಎಂದು ಉಪಲೋಕಾಯುಕ್ತರಾದ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಅವರು ಭರವಸೆ ನೀಡಿದ್ದಾರೆ.

‘ಪ್ರಜಾವಾಣಿ’ಯಲ್ಲಿ ಮಾ.19ರಂದು ‘ಅಂಗನವಾಡಿಗಳಿಗೆ ಕೊಳೆತ ಮೊಟ್ಟೆ’ ಎಂದು ವರದಿ ಪ್ರಕಟವಾಗಿತ್ತು. ಉಪನ್ಯಾಸಕ ಎನ್.ಚಂದ್ರಶೇಖರ್ ಈ ವಿಷಯವನ್ನು ಉಪಲೋಕಾಯುಕ್ತರ ಗಮನಕ್ಕೆ ತಂದಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಉಪಲೋಕಾಯುಕ್ತರು, ‘ಈ ಬಗ್ಗೆ ಕ್ರಮ ಜರುಗಿಸಲಾಗುವುದು. ಸ್ವಯಂಪ್ರೇರಿತವಾಗಿ ದೂರು ದಾಖಲಿಸಿ ತನಿಖೆ ನಡೆಸಲಾಗುವುದು’ ಎಂದಿದ್ದಾರೆ.

‘ಜಿಲ್ಲೆಯ ಅಂಗನವಾಡಿಗಳಿಗೆ ಕೊಳೆತ ಮೊಟ್ಟೆಗಳು ಸರಬರಾಜಾಗುತ್ತಿವೆ ಎಂಬ ಗಂಭೀರ ಆರೋಪಗಳು ಕೇಳಿ ಬಂದಿವೆ. ಮುಗ್ದ, ಅಮಾಯಕ ಕಂದಮ್ಮಗಳ ಆರೋಗ್ಯ ಮತ್ತು ಪ್ರಾಣದ ಬಗ್ಗೆ ದಯಮಾಡಿ ಗಮನಿಸಲೇಬೇಕಾಗಿದೆ. ಯಾರ ಮಕ್ಕಳಾದರೇನು? ಮಕ್ಕಳು ಮಕ್ಕಳೇ ಅಲ್ಲವೇ? ಇದು ಸಂಬಂಧಪಟ್ಟವರ ಗಮನಕ್ಕೆ ಈವರೆಗೆ ಬಂದೇ ಇಲ್ಲವೇ’ ಎಂದು ಚಂದ್ರಶೇಖರ್ ಅಸಮಾಧಾನ ಸಹ ವ್ಯಕ್ತಪಡಿಸಿದ್ದಾರೆ.

ADVERTISEMENT

‘ಅಂಗನವಾಡಿಗಳಿಗೆ ಭೇಟಿ ನೀಡಿ ಈ ಬಗ್ಗೆ ಪರಿಶೀಲಿಸಲಾಗುವುದು’ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಅಶ್ವತ್ಥಮ್ಮ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.