ADVERTISEMENT

‘ಪೋಕ್ಸೊ’ ಆರೋಪಿ ಪರಾರಿ: ಮೂವರು ಪೊಲೀಸರ ಅಮಾನತು

​ಪ್ರಜಾವಾಣಿ ವಾರ್ತೆ
Published 26 ಮಾರ್ಚ್ 2021, 14:44 IST
Last Updated 26 ಮಾರ್ಚ್ 2021, 14:44 IST

ಚಿಕ್ಕಮಗಳೂರು: ‘ಪೋಕ್ಸೊ’ ಅಡಿ ಬಂಧಿತನಾಗಿದ್ದ ಆರೋಪಿಯು ಲಾಕ್‌ಅಪ್‌ನಿಂದ ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ಸಖರಾಯಪಟ್ಟಣ ಠಾಣೆಯ ಎಎಸ್‌ಐ ಸಹಿತ ಮೂವರು ಪೊಲೀಸರನ್ನು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅಕ್ಷಯ್‌ ಎಂ. ಹಾಕೆ ಅಮಾನತು ಮಾಡಿದ್ದಾರೆ.

‘ಎಎಸ್‌ಐ ಶಿವಕುಮಾರ್‌ ಮತ್ತು ಕಾನ್‌ಸ್ಟೆಬಲ್‌ಗಳಾದ ಶಿವಾಜಿ ಮತ್ತು ಶಿವು ಅವರನ್ನು ಕರ್ತವ್ಯ ಲೋಪದಡಿ ಅಮಾನತುಗೊಳಿಸಲಾಗಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.

ಮಾ.16ರಂದು ಆರೋಪಿಯು ಪರಾರಿಯಾಗಿದ್ದನು. ಆದರೆ, ಮೂರು ದಿನಗಳ ಬಳಿಕ ಆರೋಪಿಯನ್ನು ಪೊಲೀಸರು ವಾಪಸ್‌ ಬಂಧಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.