ADVERTISEMENT

ಮುರುಘಾ ಮಠದ ವಿದ್ಯಾರ್ಥಿ ನಿಲಯದಲ್ಲಿ ಸ್ಥಳ ಮಹಜರು

ಬಸವರಾಜನ್‌, ಸೌಭಾಗ್ಯ ವಿರುದ್ಧ ದಾಖಲಾಗಿರುವ ಲೈಂಗಿಕ ಕಿರುಕುಳ ಹಾಗೂ ಅಪಹರಣ ಪ್ರಕರಣ

​ಪ್ರಜಾವಾಣಿ ವಾರ್ತೆ
Published 31 ಆಗಸ್ಟ್ 2022, 9:50 IST
Last Updated 31 ಆಗಸ್ಟ್ 2022, 9:50 IST
ಮುರುಘಾ ಮಠ
ಮುರುಘಾ ಮಠ   

ಚಿತ್ರದುರ್ಗ: ಮುರುಘಾ ಮಠದ ಆಡಳಿತಾಧಿಕಾರಿ ಬಸವರಾಜನ್‌ ಹಾಗೂ ಅವರ ಪತ್ನಿ ಸೌಭಾಗ್ಯ ವಿರುದ್ಧ ದಾಖಲಾಗಿರುವ ಲೈಂಗಿಕ ಕಿರುಕುಳ ಹಾಗೂ ಅಪಹರಣ ಪ್ರಕರಣದ ತನಿಖೆಗೆ ಪೊಲೀಸ್ ತಂಡ ಮುರುಘಾ ಮಠಕ್ಕೆ ಬುಧವಾರ ಭೇಟಿ ನೀಡಿತು.

ಡಿವೈಎಸ್ ಪಿ ಅನಿಲ್ ಕುಮಾರ್ ನೇತೃತ್ವದ ತನಿಖಾ ತಂಡ ಮಠದ ವಿದ್ಯಾರ್ಥಿ ನಿಲಯದಲ್ಲಿ ಸ್ಥಳ ಮಹಜರು ನಡೆಸಲು ಮಧ್ಯಾಹ್ನ 1 ಗಂಟೆಗೆ ಆಗಮಿಸಿ ಪ್ರಕ್ರಿಯೆ ಪ್ರಾರಂಭಿಸಿದರು. ಇದೇ ವೇಳೆ ಸ್ಥಳಕ್ಕೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್‌ ನ್ಯಾಯಾಧೀಶ ಬಿ.ಕೆ. ಗಿರೀಶ್‌ ಭೇಟಿ ನೀಡಿದರು. ಸ್ಥಳದಲ್ಲಿ ಪೊಲೀಸ್ ಬಿಗಿಭದ್ರತೆ ಕಲ್ಪಿಸಲಾಗಿದೆ.

ದೂರುದಾರ ಮಹಿಳೆ ಕಣ್ಮರೆಯಾಗಿದ್ದ ಕಾರಣಕ್ಕೆ ಪ್ರಕರಣದ ತನಿಖೆ ಕೈಗೆತ್ತಿಕೊಳ್ಳುವುದು ವಿಳಂಬವಾಗಿತ್ತು. ಅಪಹರಣಕ್ಕೆ ಒಳಗಾಗಿರುವ ಮಕ್ಕಳ ಹೇಳಿಕೆಯನ್ನು ತನಿಖಾ ತಂಡ ಮಂಗಳವಾರ ದಾಖಲು ಮಾಡಿಕೊಂಡಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.