ADVERTISEMENT

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 6–8ನೇ ತರಗತಿ ಆರಂಭ ಸದ್ಯಕ್ಕಿಲ್ಲ: ಡಿಡಿಪಿಐ

​ಪ್ರಜಾವಾಣಿ ವಾರ್ತೆ
Published 6 ಸೆಪ್ಟೆಂಬರ್ 2021, 17:09 IST
Last Updated 6 ಸೆಪ್ಟೆಂಬರ್ 2021, 17:09 IST

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 6ರಿಂದ 8ನೇ ತರಗತಿವರೆಗೆ ಭೌತಿಕ ತರಗತಿಗಳ ಆರಂಭದ ಬಗ್ಗೆ ಯಾವುದೇ ನಿರ್ಧಾರವಾಗಿಲ್ಲ ಎಂದು ಡಿಡಿಪಿಐ ಮಲ್ಲೇಸ್ವಾಮಿ ತಿಳಿಸಿದ್ದಾರೆ.

ಗಡಿ ಜಿಲ್ಲೆಯಾಗಿರುವ ಕಾರಣ ಮತ್ತು ಇಲ್ಲಿ ಪಾಸಿಟಿವಿಟಿ ದರ ಹೆಚ್ಚಿರುವ ಕಾರಣ ಭೌತಿಕ ತರಗತಿಗಳು ಆರಂಭವಾಗಿಲ್ಲ. ಈ ಸಂಬಂಧ ಸೆಪ್ಟೆಂಬರ್ 13ರ ನಂತರ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸಭೆಯಲ್ಲಿ ಚರ್ಚಿಸಿ, ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT