ADVERTISEMENT

ಸ್ಪಷ್ಟ ಗುರಿ, ಉತ್ತಮ ಕಲಿಕೆ, ಕೌಶಲ ಅತ್ಯಗತ್ಯ

ಸ್ಪರ್ಧಾತ್ಮಕ ಪರೀಕ್ಷೆ: ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ.

​ಪ್ರಜಾವಾಣಿ ವಾರ್ತೆ
Published 21 ಸೆಪ್ಟೆಂಬರ್ 2021, 11:06 IST
Last Updated 21 ಸೆಪ್ಟೆಂಬರ್ 2021, 11:06 IST
ಮಂಗಳೂರಿನ ರಥಬೀದಿಯ ಪಿ.ದಯಾನಂದ ಪೈ -ಪಿ.ಸತೀಶ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಂಗಳವಾರ ನಡೆದ ಕಾರ್ಯಾಗಾರವನ್ನು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಉದ್ಘಾಟಿಸಿದರು 
ಮಂಗಳೂರಿನ ರಥಬೀದಿಯ ಪಿ.ದಯಾನಂದ ಪೈ -ಪಿ.ಸತೀಶ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಂಗಳವಾರ ನಡೆದ ಕಾರ್ಯಾಗಾರವನ್ನು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಉದ್ಘಾಟಿಸಿದರು    

ಮಂಗಳೂರು: ‘ಜೀವನದ ಉನ್ನತೀಕರಣಕ್ಕೆ ವಿದ್ಯಾರ್ಥಿ ದೆಸೆಯಲ್ಲಿ ಸ್ಪಷ್ಟ ಗುರಿ, ಉತ್ತಮ ಕಲಿಕೆ, ಕೌಶಲಗಳು ಅತ್ಯಗತ್ಯ’ ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಹೇಳಿದರು.

ನಗರದ ರಥಬೀದಿಯಪಿ.ದಯಾನಂದ ಪೈ -ಪಿ.ಸತೀಶ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಉದ್ಯೋಗಕೋಶ ಮತ್ತು ಆಂತರಿಕ ಗುಣಮಟ್ಟ ಭರವಸಾ ಕೋಶದ ಸಹಯೋಗದಲ್ಲಿ ‘ಅಂತಿಮ ವರ್ಷದ ಸ್ನಾತಕ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವುದು ಹೇಗೆ?’ ಎಂಬ ವಿಷಯ ಕುರಿತ ಅರಿವು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ವಿದ್ಯಾರ್ಥಿ ದೆಸೆಯಲ್ಲಿ ತಾನು ಮುಂದೇನಾಗಬೇಕು? ಹಾಗೂ ಬಹುದು? ಎಂಬ ಬಗ್ಗೆ ಸ್ಪಷ್ಟ ಗುರಿ ಹೊಂದಿರಬೇಕು. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪೂರ್ವ ತಯಾರಿ, ಪರಿಶ್ರಮ ಅಗತ್ಯ. ಆತ್ಮಸ್ಥೈರ್ಯದಿಂದ ಪರೀಕ್ಷೆಗಳನ್ನು ಎದುರಿಸಿದಲ್ಲಿ ಖಂಡಿತವಾಗಿಯೂ ಯಶಸ್ಸು ಸಾಧ್ಯ’ ಎಂದರು.

ADVERTISEMENT

‘ಮುಂದೆ ದೇಶದ ಸತ್ಪ್ರಜೆಗಳಾಗಿ ಬಾಳಿ’ ಎಂದ ಅವರು, ವಿದ್ಯಾರ್ಥಿಗಳಿಗಿರುವ ಹಲವು ಅವಕಾಶಗಳು, ಅದಕ್ಕೆ ನಡೆಸಬೇಕಾದ ಪ್ರಯತ್ನಗಳು ಹಾಗೂಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಮಾಹಿತಿ ನೀಡಿದರು.

ಕಾಲೇಜು ಶಿಕ್ಷಣ ಇಲಾಖೆ ಕಾಲೇಜು ಶಿಕ್ಷಣ ಇಲಾಖೆ ಪ್ರಾದೇಶಿಕ ಕಚೇರಿಯ ಕಚೇರಿಯ ವಿಶೇಷಾಧಿಕಾರಿಡಾ. ಜಯಕರ ಭಂಢಾರಿ ಎಂ. ಮಾತನಾಡಿ, ‘ಜಿಲ್ಲಾಧಿಕಾರಿ ಅವರ ಸಾಧನೆಯೇ ವಿದ್ಯಾರ್ಥಿಗಳಿಗೆ ಮಾದರಿಯಾಗಿದೆ. ಉತ್ತಮ ಹಾಗೂ ಮಾನವೀಯ ಗುಣಗಳ ಜೊತೆ ಸಾಧಕ ಮಾರ್ಗವನ್ನು ವಿದ್ಯಾರ್ಥಿ ದೆಸೆಯಿಂದಲೇ ಅನುಸರಿಸಬೇಕು’ ಎಂದು ಸಲಹೆ ನೀಡಿದರು.

ಪ್ರಾಂಶುಪಾಲ ಪ್ರೊ. ರಾಜಶೇಖರ್ ಹೆಬ್ಬಾರ್ ಸಿ. ಮಾತನಾಡಿ, ‘ವಿದ್ಯಾರ್ಥಿಗಳು ತಮ್ಮ ಉಜ್ವಲ ಭವಿಷ್ಯಕ್ಕಾಗಿ ಇಂತಹ ಕಾರ್ಯಕ್ರಮಗಳ ಸದುಪಯೋಗ ಪಡೆದುಕೊಳ್ಳಬೇಕು’ ಎಂದರು.

ಉದ್ಯೋಗ ಕೋಶದ ಸಂಚಾಲಕ ಪ್ರೊ. ಅಶ್ವಿತ ಕರ್ಕೇರ ಎನ್., ಐಕ್ಯೂಎಸಿ ಸಂಯೋಜಕ ಡಾ. ಥೆರೇಸ್ ಪಿರೇರಾ, ಉದ್ಯೋಗ ಕೋಶದ ಸಂಯೋಜಕ ಪ್ರೊ. ರಘುಪತಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.